ಈಶಾನ್ಯ ಶಿಕ್ಷಕರ ಚುನಾವಣೆ ನೋಂದಣಿಗೆ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಪರಿಗಣಿಸಿ…

ಈಶಾನ್ಯ ಶಿಕ್ಷಕರ ಚುನಾವಣೆ ನೋಂದಣಿಗೆ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಪರಿಗಣಿಸಿ…

ಬಳ್ಳಾರಿ / ಕಂಪ್ಲಿ : ತಾಲೂಕಿನ ಎಮ್ಮಿಗನೂರು ಗ್ರಾಮದಲ್ಲಿ ಈಶಾನ್ಯ ಶಿಕ್ಷಕರ ಚುನಾವಣೆ ನೋಂದಣಿಗೆ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಪರಿಗಣಿಸುವಂತೆ ಅತಿಥಿ ಶಿಕ್ಷಕರ ಸಂಘದಿಂದ ಗ್ರಾಮ ಆಡಳಿತ ಅಧಿಕಾರಿ ಮಹಮ್ಮದ್ ರಫೀಕ್ ಅವರಿಗೆ ಮನವಿ ಸಲ್ಲಿಸಲಾಯಿತು.ಈ ವೇಳೆ ತಾಲೂಕು ಅತಿಥಿ ಶಿಕ್ಷಕರ ಸಂಘದ ಅಧ್ಯಕ್ಷ ಎಸ್. ರಾಮಪ್ಪ ಮಾತನಾಡಿ ಪ್ರಸ್ತುತ ಈಶಾನ ಶಿಕ್ಷಕರ ಚುನಾವಣೆ ಹಿನ್ನೆಲೆ ಮತದಾರರ ನೋಂದಣಿಗೆ ಪ್ರೌಢಶಾಲಾ ಶಿಕ್ಷಕರನ್ನು ಮಾತ್ರ ಪರಿಗಣಿಸಿದ್ದು ವಿಷಾದನೀಯ ಸರ್ಕಾರಿ ಮತ್ತು ಖಾಸಗಿ ಪ್ರಾಥಮಿಕ ಶಾಲೆಗಳಲ್ಲಿ ಪದವಿ ಶಿಕ್ಷಣ ಮತ್ತು ಶಿಕ್ಷಕರ ತರಬೇತಿ ಪಡೆದು ಸುಮಾರು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದು ಮುಂದಿನ ಈಶಾನ್ಯ ಶಿಕ್ಷಕರ ಚುನಾವಣೆ ಹಿನ್ನೆಲೆ ನೋಂದಣಿಗೆ ಅವಕಾಶ ನೀಡದೇ ಇರುವುದು ತಾರತಮ್ಯ ನೀತಿಯನ್ನು ಅನುಸರಿಸಂತಾಗುತ್ತದೆ ಆದ್ದರಿಂದ ಮೇಲಾಧಿಕಾರಿಗಳ ಗಮನಕ್ಕ ತಂದು ನ್ಯಾಯ ಒದಗಿಸಿ ಕೊಡಬೇಕೆಂದು ಒತ್ತಾಯಿಸಿದರು.ಈ ಸಂದರ್ಭದಲ್ಲಿ ಜಿಲ್ಲಾ ಅತಿಥಿ ಶಿಕ್ಷಕರ ಸಂಘದ ಅಧ್ಯಕ್ಷ ಎಚ್ ಮಲ್ಲೇಶ, ಪ್ರಮುಖರಾದ ರಾಜಸಾಬ್, ತಿಪ್ಪೇಸ್ವಾಮಿ ಸೇರಿದಂತೆ ಇತರರಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

Leave a Reply

Your email address will not be published. Required fields are marked *