ಹೊಸಪೇಟೆ ವಿಜಯನಗರ ಕರವೇ ಜಿಲ್ಲಾಧ್ಯಕ್ಷರಾದ ಪಿ ಭಾಸ್ಕರ್ ನಾಯಕ್ ನೇತೃತ್ವದಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ…

ಹೊಸಪೇಟೆ ವಿಜಯನಗರ ಕರವೇ ಜಿಲ್ಲಾಧ್ಯಕ್ಷರಾದ ಪಿ ಭಾಸ್ಕರ್ ನಾಯಕ್ ನೇತೃತ್ವದಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ…

ಹೊಸಪೇಟೆ ವಿಜಯನಗರ ಜಿಲ್ಲೆಯಲ್ಲಿ ಪಿ ಭಾಸ್ಕರ್ ನಾಯಕ್ ನೇತೃತ್ವದಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ,,, ಕರ್ನಾಟಕ ರಕ್ಷಣಾ ವೇದಿಕೆ ಯುವಶಕ್ತಿ ಸಂಘಟನೆಯ ಹೊಸಪೇಟೆ ವಿಜಯನಗರ ಜಿಲ್ಲಾ ಅಧ್ಯಕ್ಷರಾಗಿರುವ ಸನ್ಮಾನ್ಯ ಶ್ರೀ ಪಿ ಭಾಸ್ಕರ್ ನಾಯಕ್ ನೇತೃತ್ವದಲ್ಲಿ ಹೊಸಪೇಟೆಯ ಸರಕಾರಿ ಹೆರಿಗೆ ಆಸ್ಪತ್ರೆಯಲ್ಲಿ ತಾಯಂದಿರಿಗೆ ಹಾಲು ಬ್ರೆಡ್ ಹಣ್ಣು ಹಂಪಲು ನೀಡುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು . ಕರವೇ ಯುವಶಕ್ತಿ ಸಂಘಟನೆಯ ವಿಜಯನಗರ ಜಿಲ್ಲಾಧ್ಯಕ್ಷರಾದ ಪಿ ಭಾಸ್ಕರ್ ನಾಯಕ್ ಮಾತನಾಡಿ ಬಡವರ ಸೇವೆ ಮಾಡುವ ಮೂಲಕ ಕರ್ನಾಟಕ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಗಿದ್ದು ಮುಂಬರುವ ದಿನಗಳಲ್ಲಿ ಹೊಸಪೇಟೆ ವಿಜಯನಗರ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಮತ್ತು ಗ್ರಾಮಗಳಲ್ಲಿ ಕರವೇ ಯುವ ಶಕ್ತಿ ಸಂಘಟನೆಯನ್ನು ಬಲಿಷ್ಠವಾಗಿ ಸಂಘಟನೆ ಮಾಡಲಾಗುವುದು ಎಂದು ತಿಳಿಸಿದರು

ಕರವೇ ಯುವಶಕ್ತಿ ಸಂಘಟನೆಯ ರಾಜ್ಯಾಧ್ಯಕ್ಷರಾಗಿರುವ ಸನ್ಮಾನ್ಯ ಶ್ರೀ ಆರ್ ವಿಜಯ್ ಕುಮಾರ್ ವಿಜಯನಗರ ಕಾರವೇ ಜಿಲ್ಲಾ ಉಪಾಧ್ಯಕ್ಷರಾಗಿರುವ ವಿ ನಾಗರಾಜ್ ಗಣಿನಾಡು ಪತ್ರಕರ್ತ ಶಶಾಂಕ್ ಯುವ ಮುಖಂಡರಾಗಿರುವ ಹೊಸಪೇಟೆಯ ಅಂಜಿ ನಾಯಕ್ ಹಾಗೂ ಕರವೇ ಯುವಶಕ್ತಿ ಸಂಘಟನೆಯ ನೂರಾರು ಸಂಖ್ಯೆಯ ಕರವೇ ಕಾರ್ಯಕರ್ತರು ಕರ್ನಾಟಕ ರಾಜ್ಯೋತ್ಸವ ಆಚರಣೆಯ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು,,,, ಇದೇ ಬೆಲೆ ಕೊಪ್ಪಳ ತಾಲೂಕಿನ ಹೊಸ ನಿಂಗಾಪುರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ರಾಜ್ಯಾಧ್ಯಕ್ಷರಾಗಿರುವ ಶ್ರೀ ಆರ್ ವಿಜಯ್ ಕುಮಾರ್ ಹಾಗೂ ಹೊಸಪೇಟೆ ವಿಜಯನಗರ ಕರವೇ ಜಿಲ್ಲಾಧ್ಯಕ್ಷರಾಗಿರುವ ಶ್ರೀ ಪಿ ಭಾಸ್ಕರ್ ನಾಯಕ್ ನೇತೃತ್ವದಲ್ಲಿ ನೋಟ್ ಬುಕ್ ಗಳನ್ನು ವಿತರಿಸಲಾಯಿತು, ಈ ಸಮಯದಲ್ಲಿ ಶಾಲಾ ಶಿಕ್ಷಕರು ವಿದ್ಯಾರ್ಥಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *