ಕಂಪ್ಲಿ ನಗರದ ವೈದ್ಯಕೀಯ ಪದವಿ ಪಡೆಯದೇ ವೈದ್ಯ ವೃತ್ತಿ ಮಾಡುತ್ತಿದ್ದ ನಕಲಿ ಡಾಕ್ಟರ್ ಮೋಹನ್ ಕ್ಲಿನಿಕ್ ಸೀಜ್…

ಕಂಪ್ಲಿ ನಗರದ ವೈದ್ಯಕೀಯ ಪದವಿ ಪಡೆಯದೇ ವೈದ್ಯ ವೃತ್ತಿ ಮಾಡುತ್ತಿದ್ದ ನಕಲಿ ಡಾಕ್ಟರ್ ಮೋಹನ್ ಕ್ಲಿನಿಕ್ ಸೀಜ್

ಬಳ್ಳಾರಿ / ಕಂಪ್ಲಿ : ತಾಲೂಕಿನಲ್ಲಿ ವೈದ್ಯಕೀಯ ಪದವಿ ಪಡೆಯದೇ ತಾವು ವೈದ್ಯರೆಂದು ಬಿಂಬಿಸಿ ವೈದ್ಯ ವೃತ್ತಿ ಮಾಡುತ್ತಿದ್ದ ನಕಲಿ ವೈದ್ಯರ ಕ್ಲಿನಿಕ್ ಗಳ ಮೇಲೆ ದಾಳಿ ನಡೆಸಿ ಸೀಜ್ ಮಾಡಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ತಿಳಿಸಿದ್ದಾರೆ. ಕಂಪ್ಲಿ ನಗರದ ಡಾಕ್ಟರ್ ಮೋಹನ್ ಕ್ಲಿನಿಕ್ ಇರುವ ಎಂಬುವವ ಯಾವುದೇ ವೈದ್ಯಕೀಯ ಪದವಿ ಮಾನ್ಯತೆ ಪಡೆಯದೇ ನಕಲಿ ವೈದ್ಯನಾಗಿದ್ದು, ತಾನು ಫೈಲ್ಸ್ ವೈದ್ಯನೆಂದು ಸಾರ್ವಜನಿಕರಲ್ಲಿ ಸುಳ್ಳು ಹೇಳಿ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದ. ಸಾರ್ವಜನಿಕರಿಂದ ದೂರು ಬಂದ ಮೇಲೆ ಕ್ಲಿನಿಕ್ ಮೇಲೆ ದಾಳಿ ಮಾಡಿ ಕ್ಲಿನಿಕ್ ಸೀಜ್ ಮಾಡಲಾಗಿದೆ.ಹಾಗಾಗಿ ಸಾರ್ವಜನಿಕರು ತಮ್ಮ ಆರೋಗ್ಯದ ದೃಷ್ಟಿಯಿಂದ ಅಧೀಕೃತ ವೈದ್ಯ ಪದವಿ ಪಡೆದ ವೈದ್ಯರ ಬಳಿ ತಪಾಸಣೆ ಮಾಡಿಸುವ ಮೂಲಕ ಚಿಕಿತ್ಸೆ ಪಡೆಯುವುದರಿಂದ ಆರೋಗ್ಯದ ಮೇಲೆ ಉಂಟಾಗಬಹುದಾದ ಗಂಭೀರ ಪರಿಣಾಮಗಳನ್ನು ತಡೆಯಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ಹೇಳಿದ್ದಾರೆ.ಗ್ರಾಮಗಳಲ್ಲಿ ವೈದ್ಯ ವೃತ್ತಿ ಮಾಡುತ್ತಿರುವವರು ಕಂಡುಬಂದಲ್ಲಿ ಸಾರ್ವಜನಿಕರು ಅವರ ವೈದ್ಯಕೀಯ ಪದವಿಯ ಮಾಹಿತಿಯನ್ನು ಪಡೆದುಕೊಂಡು ಚಿಕಿತ್ಸೆ ಪಡೆಯಬೇಕು. ಒಂದು ವೇಳೆ ನಕಲಿ ವೈದ್ಯರು ಎಂದು ಕಂಡುಬAದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಾರ್ಯಾಲಯಕ್ಕೆ ದೂರು ನೀಡಿದರೆ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಅಧಿನಿಯಮ 2007 ರ ಅಡಿಯಲ್ಲಿ ಕ್ರಮ ಜರುಗಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.ದಾಳಿಯ ಸಂದರ್ಭದಲ್ಲಿ ಡಾ ವೀರೇಂದ್ರ ಕುಮಾರ್ . ತಾಲ್ಲೂಕು ಆರೋಗ್ಯಾಧಿಕಾರಿ ಡಾಕ್ಟರ್ ಅರುಣ್ ಕುಮಾರ್. ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿರುಪಾಕ್ಷಯ್ಯ .ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಗೋಪಾಲ್ ತಾಲೂಕು ಆರೋಗ್ಯ ನಿರೀಕ್ಷಣಾಧಿಕಾರಿ ಬಸವರಾಜ್ ಪಿ ಹಾಗೂ ವೈದ್ಯರು ಇದ್ದರು.ವರದಿ : ಜಿಲಾನಸಾಬ್ ಬಡಿಗೇರ್

Leave a Reply

Your email address will not be published. Required fields are marked *