ಮಧ್ಯಪ್ರಾಚ್ಯದಲ್ಲಿ ಅಸ್ಥಿರತೆ: ಕೊಪ್ಪಳ ಜಿಲ್ಲೆಯ ಪ್ರಯಾಣಿಕರ ನೆರವಿಗೆ ಜಿಲ್ಲಾಡಳಿತದ ಸಹಾಯವಾಣಿ ಆರಂಭ..

ಕೊಪ್ಪಳ: ಮಧ್ಯಪ್ರಾಚ್ಯ ದೇಶಗಳಲ್ಲಿ ಉಂಟಾಗಿರುವ ಯುದ್ಧಸದೃಶ ವಾತಾವರಣ ಮತ್ತು ಅಸ್ಥಿರ ಪರಿಸ್ಥಿತಿಯಿಂದಾಗಿ ಅಂತರಾಷ್ಟ್ರೀಯ ವಿಮಾನಯಾನ ಸೇವೆಗಳಲ್ಲಿ ಭಾರಿ ವ್ಯತ್ಯಯ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ವಿದೇಶಗಳಲ್ಲಿ ಸಿಲುಕಿರುವ ಕೊಪ್ಪಳ ಜಿಲ್ಲೆಯ ಪ್ರಯಾಣಿಕರ ಹಿತದೃಷ್ಟಿಯಿಂದ ಜಿಲ್ಲಾಡಳಿತವು ತುರ್ತು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದು, ಸಹಾಯವಾಣಿ ಸಂಖ್ಯೆಗಳನ್ನು ಪ್ರಕಟಿಸಿದೆ.11 ದೇಶಗಳ ವೈಮಾನಿಕ ಮಾರ್ಗ ಬಂದ್ಇರಾನ್, ಇಸ್ರೇಲ್, ಲೆಬನಾನ್ ಹಾಗೂ ಸೌದಿ ಅರೇಬಿಯಾ ಸೇರಿದಂತೆ ಒಟ್ಟು 11 ದೇಶಗಳ ವೈಮಾನಿಕ ಮಾರ್ಗಗಳನ್ನು (Airspace) ಮಾರ್ಚ್ 2ರವರೆಗೆ ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಇದರಿಂದಾಗಿ ಕರ್ನಾಟಕದ ಅನೇಕ ಪ್ರಯಾಣಿಕರು ಯುಎಇ (ದುಬೈ) ಸೇರಿದಂತೆ ವಿವಿಧ ಮಧ್ಯಪ್ರಾಚ್ಯ ರಾಷ್ಟ್ರಗಳ ವಿಮಾನ ನಿಲ್ದಾಣಗಳಲ್ಲಿ ಸಿಲುಕಿಕೊಂಡಿದ್ದಾರೆ.ಜಿಲ್ಲಾಡಳಿತದ ತುರ್ತು ಕ್ರಮಗಳುಮಾನ್ಯ ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರ ನಿರ್ದೇಶನದಂತೆ ಜಿಲ್ಲಾಡಳಿತವು ಸನ್ನದ್ಧವಾಗಿದ್ದು, ಈ ಕೆಳಗಿನ ಕ್ರಮಗಳನ್ನು ಕೈಗೊಂಡಿದೆ:24×7 ಕಾರ್ಯನಿರ್ವಹಣೆ: ರಾಜ್ಯ ಮತ್ತು ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರಗಳು ದಿನದ 24 ಗಂಟೆಯೂ ಕಾರ್ಯನಿರ್ವಹಿಸುತ್ತಿವೆ.ನಿರಂತರ ಸಂಪರ್ಕ: ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮತ್ತು ಭಾರತೀಯ ರಾಯಭಾರಿ ಕಚೇರಿಗಳು ನೀಡುವ ಸೂಚನೆಗಳನ್ನು ಜಿಲ್ಲಾಡಳಿತವು ಸೂಕ್ಷ್ಮವಾಗಿ ಗಮನಿಸುತ್ತಿದೆ.ಜಿಲ್ಲಾಧಿಕಾರಿಗಳ ಕಟ್ಟುನಿಟ್ಟಿನ ಸೂಚನೆಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದು ತಿಳಿಸಿರುವ ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಅವರು ಕೆಲವು ಪ್ರಮುಖ ಸೂಚನೆಗಳನ್ನು ನೀಡಿದ್ದಾರೆ:ಸುರಕ್ಷತಾ ಮಾರ್ಗಸೂಚಿ: ಮಧ್ಯಪ್ರಾಚ್ಯದಲ್ಲಿರುವ ಜಿಲ್ಲೆಯ ನಿವಾಸಿಗಳು ಅಲ್ಲಿನ ಸ್ಥಳೀಯ ಸರ್ಕಾರಗಳು ನೀಡುವ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು.ನೋಂದಣಿ: ಸಂಕಷ್ಟದಲ್ಲಿರುವವರು ಆಯಾ ದೇಶದ ಭಾರತೀಯ ರಾಯಭಾರಿ ಕಚೇರಿಯನ್ನು ಸಂಪರ್ಕಿಸಬೇಕು ಅಥವಾ ‘ಸಾರಥಿ ಸಹಾಯತಾ’ (Sarthi Sahayata) ಪೋರ್ಟಲ್ನಲ್ಲಿ ತಮ್ಮ ವಿವರಗಳನ್ನು ನೋಂದಾಯಿಸಿಕೊಳ್ಳಬೇಕು.ವಿಸಾ ಸಮಸ್ಯೆ: ವಿಸಾ ಸಂಬಂಧಿತ ಸಮಸ್ಯೆಗಳಿದ್ದಲ್ಲಿ ತಕ್ಷಣವೇ ಹತ್ತಿರದ ಎಫ್.ಆರ್.ಆರ್.ಒ (FRRO) ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.
