ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿತ: ಶಾಸಕ ಜನಾರ್ದನ ರೆಡ್ಡಿಗೆ ಭದ್ರತೆ ಒದಗಿಸಲು ಆಗ್ರಹ…

ಗಂಗಾವತಿ: 03 “ರಾಜ್ಯದ ಕಾಂಗ್ರೆಸ್ ಸರ್ಕಾರದಲ್ಲಿ ಜನಪ್ರತಿನಿಧಿಗಳಿಗೇ ರಕ್ಷಣೆ ಇಲ್ಲದಂತಾಗಿದೆ. ಸಿದ್ದರಾಮ ಯ್ಯ ನೇತೃತ್ವದ ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸಂಪೂ ರ್ಣ ವಿಫಲವಾಗಿದೆ’ ಎಂದು ಬಿಜೆಪಿ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಬಳ್ಳಾರಿಯಲ್ಲಿ ನಡೆದ ಘರ್ಷಣೆ ಹಾಗೂ ಗಂಗಾವತಿ ಶಾಸಕ ಜನಾ ರ್ದನ ರೆಡ್ಡಿ ಅವರ ಮೇಲೆ ನಡೆದ ಹಲ್ಲೆ ಯತ್ನವನ್ನು ಖಂಡಿಸಿ ಪ್ರಕಟಣೆ ನೀಡಿರುವ ಅವರು, ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿ ದರು. ಬಳ್ಳಾರಿಯ ಘಟನೆಯಿಂದಗಂಗಾವತಿ ಭಾಗದಲ್ಲೂ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಬಿಜೆಪಿ ಕಾರ್ಯಕರ್ತರು ಸರ್ಕಾರದ ವಿರುದ್ಧ ಪ್ರತಿಭಟನೆಯ ಹಾದಿ ಹಿಡಿ ಯುವ ಮುನ್ಸೂಚನೆ ನೀಡಿದ್ದಾರೆ.ಬಿಜೆಪಿ ಯುವ ಮುಖಂಡ ಮಳ್ಳಿ ಕೇರಿ ಷಣ್ಮುಖ ಮಾತನಾಡಿ, ಗಂಗಾ ವತಿ ಶಾಸಕ ಜನಾರ್ದನ ರೆಡ್ಡಿ ಅವರಿ ಗೆ ತಕ್ಷಣವೇ ಸಮರ್ಪಕ ಭದ್ರತಾ ವ್ಯವಸ್ಥೆಯನ್ನು ಕಲ್ಪಿಸಬೇಕು. ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸ್ಥಳೀ ಯ ಪೊಲೀಸರು ಕಾಂಗ್ರೆಸ್ ಪ್ರೇರಿತ ಅಕ್ರಮ ಚಟುವಟಿಕೆಗಳನ್ನು ತಡೆಯ ಲಾಗದೆ ಮೂಕಪ್ರೇಕ್ಷಕರಾಗಿದ್ದಾರೆ. ಗೂಂಡಾರಾಜ್ಯ ತಾಂಡವವಾಡುತ್ತಿದೆ ಎಂದು ಆರೋಪಿಸಿದರು.ಬಿಜೆಪಿ ಯುವಶಕ್ತಿ ಹೋರಾಟ ಗಾರ ಹೊಸಮಲಿ ರಮೇಶ ನಾಯಕ ಮಾತನಾಡಿ, ಕಾಂಗ್ರೆಸ್ ಶಾಸಕರೇ ಪೊಲೀಸ್ ಠಾಣೆಗಳಿಗೆ ನುಗ್ಗಿ ಬೆದರಿಕೆ ಹಾಕುತ್ತಾ ಕಾನೂನನ್ನು ಕೈಗೆತ್ತಿಕೊಳ್ಳು ತ್ತಿದ್ದಾರೆ. ರಾಜ್ಯದಲ್ಲಿ ಮಾದಕ ವಸ್ತು (ಡ್ರಗ್ಸ್) ಮಾಫಿಯಾ ಹೆಚ್ಚಾಗಿದ್ದು, ಜನಸಾಮಾನ್ಯರ ನೆಮ್ಮದಿ ಕೆಟ್ಟಿದೆ ಎಂದು ಹೊಸಮಲ್ಲಿ ರಮೇಶ್ ನಾಯಕ ಕಳವಳ ವ್ಯಕ್ತಪಡಿಸಿದರು.ಬಂಧನಕ್ಕೆ ಒತ್ತಾಯ: ಜನಾರ್ದನ ರೆಡ್ಡಿಯವರ ಮೇಲೆ ನಡೆದ ಹಲ್ಲೆಯ ಹಿಂದಿರುವ ದುಷ್ಟ ಶಕ್ತಿಗಳನ್ನು ಹಾಗೂ ಆರೋಪಿಗಳನ್ನು ತಕ್ಷಣವೇ ಬಂದಿ ಸಬೇಕು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರನ್ನು ಆಗ್ರಹಿಸಿದ್ದಾರೆ.
