ವಡ್ಡರಹಟ್ಟಿ ಗ್ರಾಪಂ ಕಾರ್ಯಾಲಯದಲ್ಲಿ
ಮಹರ್ಷಿ ಮಹರ್ಷಿ ಭಗೀರಥ ಜಯಂತಿ ಆಚರಣೆ,,,

ಗಂಗಾವತಿ : ತಾಲೂಕಿನ ವಡ್ಡರಹಟ್ಟಿ ಗ್ರಾಪಂ ಕಾರ್ಯಾಲಯದಲ್ಲಿ ಶ್ರೀ ಭಗೀರಥ ಮಹರ್ಷಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಭಗೀರಥ ಜಯಂತಿ ಭಾನುವಾರ ಆಚರಿಸಲಾಯಿತು.

ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಾದ ಸುರೇಶ ಚಲವಾದಿ ಅವರು ಮಾತನಾಡಿ, ಸೂರ್ಯವಂಶದ ರಾಜನಾದ ಭಗೀರಥ ಮಹಾರಾಜ ತನ್ನ ಜನರಿಗಾಗಿ ಶಿವನ ತಪಸ್ಸು ಮಾಡಿ ಗಂಗೆಯನ್ನು ಧರೆಗೆ ತಂದ ಮಹಾ ಪುರುಷರಾಗಿದ್ದಾರೆ. ಅವರ ತತ್ವ ಸಿದ್ದಾಂತಗಳು ಇಂದಿಗೂ ಪ್ರಸ್ತುತ’ ಎಂದರು.

ಈ ವೇಳೆ ಗ್ರಾಪಂ ಸದಸ್ಯರಾದ ಪೀರ್ ಮಹ್ಮದ್, ಗ್ರಾಪಂ ಸಿಬ್ಬಂದಿಗಳು ಇದ್ದರು.