ಶ್ರೀರಾಮನಗರದ ಸ್ವಾಮಿ ವಿವೇಕಾನಂದ ಪಬ್ಲಿಕ್ ಸ್ಕೂಲ್‌ನಲ್ಲಿ ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ…
ಗಂಗಾವತಿ: ನಗರದ ಶ್ರೀರಾಮನಗರದಲ್ಲಿರುವ ಸ್ವಾಮಿ ವಿವೇಕಾನಂದ ಪಬ್ಲಿಕ್ ಸ್ಕೂಲ್‌ನಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮವನ್ನು ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು.ಕಾರ್ಯಕ್ರಮಕ್ಕೆ ಶಾಲೆಯ ಉಪಾಧ್ಯಕ್ಷರಾದ ಶ್ರೀಮತಿ ಪ್ರಿಯಾ ಕುಮಾರಿ ಹಾಗೂ ಪ್ರಧಾನ ಕಾರ್ಯದರ್ಶಿ ಜಗನ್ನಾಥ ಆಲಂಪಲ್ಲಿ ಆಗಮಿಸಿ ಶ್ರೀ ರಾಧಾಕೃಷ್ಣರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನ ಕಾರ್ಯದರ್ಶಿ ಜಗನ್ನಾಥ ಆಲಂಪಲ್ಲಿ, ಶ್ರೀಕೃಷ್ಣ ಜನ್ಮಾಷ್ಟಮಿ ಭಾರತದಲ್ಲಿ ಆಚರಿಸುವ ಪ್ರಮುಖ ಧಾರ್ಮಿಕ ಹಬ್ಬಗಳಲ್ಲಿ ಒಂದಾಗಿದೆ. ಶ್ರೀಕೃಷ್ಣನ ಜನ್ಮದಿನವನ್ನು ಜನ್ಮಾಷ್ಟಮಿ ಹಾಗೂ ಗೋಕುಲಾಷ್ಟಮಿ ಎಂದು ವೈಭವದಿಂದ ಆಚರಿಸಲಾಗುತ್ತದೆ. ಶ್ರೀಕೃಷ್ಣನ ಜೀವನ, ಬಾಲ್ಯದ ಲೀಲೆಗಳು ಹಾಗೂ ಭಗವದ್ಗೀತೆಯ ಸಂದೇಶಗಳು ಇಂದಿಗೂ ಸಮಾಜಕ್ಕೆ ಮಾರ್ಗದರ್ಶನ ನೀಡುತ್ತಿವೆ ಎಂದು ಹೇಳಿದರು.ಶಾಲೆಯ ಉಪಾಧ್ಯಕ್ಷರಾದ ಶ್ರೀಮತಿ ಪ್ರಿಯಾ ಕುಮಾರಿ ಮಾತನಾಡಿ, ಶ್ರೀಕೃಷ್ಣ ಜನ್ಮಾಷ್ಟಮಿ ಪ್ರೀತಿ, ಭಕ್ತಿ, ಧರ್ಮ ಹಾಗೂ ಒಳ್ಳೆಯತನದ ಗೆಲುವಿನ ಸಂದೇಶವನ್ನು ಸಾರುವ ಹಬ್ಬವಾಗಿದೆ. ಶ್ರೀಕೃಷ್ಣನ ಬಾಲ್ಯದ ಲೀಲೆಗಳು ಮತ್ತು ಗೀತೆಯ ಬೋಧನೆಗಳು ಪ್ರತಿಯೊಬ್ಬರಿಗೂ ಸದಾ ಮಾರ್ಗದರ್ಶಕವಾಗಿವೆ ಎಂದು ಹೇಳಿದರು.ಮುಖ್ಯೋಪಾಧ್ಯಾಯರಾದ ಶ್ರೀಮತಿ ಶಾರೂನ್ ಕುಮಾರಿ ಮಾತನಾಡಿ, ಶ್ರೀಕೃಷ್ಣ ಜನ್ಮಾಷ್ಟಮಿ ಕೇವಲ ಧಾರ್ಮಿಕ ಆಚರಣೆಯಾಗಿರದೆ, ಪ್ರೀತಿ, ಭಕ್ತಿ, ನಂಬಿಕೆ ಮತ್ತು ಧರ್ಮದ ಮೌಲ್ಯಗಳನ್ನು ಸಾರುವ ವಿಶೇಷ ಸಂದರ್ಭವಾಗಿದೆ. ಮಕ್ಕಳಲ್ಲಿ ಭಾರತೀಯ ಸಂಸ್ಕೃತಿ ಹಾಗೂ ಪರಂಪರೆಯ ಬಗ್ಗೆ ಅರಿವು ಮೂಡಿಸಲು ಇಂತಹ ಆಚರಣೆಗಳು ಸಹಕಾರಿಯಾಗುತ್ತವೆ ಎಂದರು.ಜನ್ಮಾಷ್ಟಮಿ ಅಂಗವಾಗಿ ಶಾಲೆಯ ಮಕ್ಕಳು ಶ್ರೀಕೃಷ್ಣ, ರಾಧೆ ಹಾಗೂ ಗೋಪಿಕೆಯರ ವೇಷಧರಿಸಿ ಆಗಮಿಸಿ ಎಲ್ಲರ ಗಮನ ಸೆಳೆದರು. ಕೊಳಲು, ನವಿಲುಗರಿ ಹಾಗೂ ಹೂವಿನ ಅಲಂಕಾರಗಳಿಂದ ಶಾಲಾ ಆವರಣವು ಹಬ್ಬದ ವಾತಾವರಣದಿಂದ ಕಂಗೊಳಿಸಿತು. ಮಕ್ಕಳ ವಿವಿಧ ವೇಷಭೂಷಣಗಳು ಹಾಗೂ ಸಾಂಸ್ಕೃತಿಕ ಚಟುವಟಿಕೆಗಳು ಕಾರ್ಯಕ್ರಮಕ್ಕೆ ಮತ್ತಷ್ಟು ಮೆರುಗು ತಂದವು.ಕಾರ್ಯಕ್ರಮದಲ್ಲಿ ಶಿಕ್ಷಕಿಯರಾದ ಶ್ರೀಮತಿ ಶಾಂತಿ, ಶ್ರೀಮತಿ ಕೃಷ್ಣವೇಣಿ, ಶ್ರೀಮತಿ ಲಕ್ಷ್ಮೀ ಭವಾನಿ, ಶ್ರೀದೇವಿ, ಶಿಕ್ಷಕರಾದ ಶ್ರೀ ರಮೇಶ್ ಎಂ. ಸೇರಿದಂತೆ ಶಾಲೆಯ ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

