ಸರ್ಕಾರಿ ಶಾಲೆಗಳ ಉನ್ನತಿಕರಣಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಗೆ ಮನವಿ ಸಲ್ಲಿಕೆ..

ಬಳ್ಳಾರಿ / ಕಂಪ್ಲಿ : ತಾಲ್ಲೂಕಿನ ಸರ್ಕಾರಿ ಶಾಲೆಗಳ ಉನ್ನತೀಕರಣಕ್ಕೆ ಎನ್.ಎಂ.ಡಿ.ಸಿ ಯ ಸಿ.ಎಸ್.ಆರ್. ನಿಧಿಯಲ್ಲಿ ಹಣವನ್ನು ಒದಗಿಸಲು ಶಿಫಾರಸ್ಸು ಮಾಡುವಂತೆ ಆಗ್ರಹಿಸಿ ಕಂಪ್ಲಿಯ ಜೆಡಿಎಸ್ ಮುಖಂಡರಾ ಉಳೇನೂರು ಶಬ್ಬೀರ್ ಬೆಂಗಳೂರಿನಲ್ಲಿ ಕೇಂದ್ರ ಕೈಗಾರಿಕಾ ಸಚಿವರಾದ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಮನವಿ ಪತ್ರವನ್ನು ಸಲ್ಲಿಸಿದರು.ಮನವಿ ಸಲ್ಲಿಸಿದ ನಂತರ ಮಾತನಾಡಿದ ಉಳೇನೂರು ಶಬ್ಬೀರ್ ಸಂಡೂರು ತಾಲ್ಲೂಕಿನ ದೋಣಿಮಲೆ ಎನ್.ಎಂ.ಡಿಸಿ ಸಂಸ್ಥೆಯ ಸಿ.ಎಸ್.ಆರ್.( ಸಾಮಾಜಿಕ ಹೊಣೆಗಾರಿಕೆ) ನಿಧಿಯಲ್ಲಿ ಕಂಪ್ಲಿ, ಹೊಸಪೇಟೆ, ಹಗರಿಬೊಮ್ಮನಹಳ್ಳಿ ತಾಲ್ಲೂಕುಗಳ ಸರ್ಕಾರಿ ಶಾಲೆಗಳ ಉನ್ನತೀಕರಣಕ್ಕಾಗಿ ಪ್ರತಿ ತಾಲ್ಲೂಕಿಗೆ 5 ಕೋಟಿ ರೂಗಳನ್ನು ಬಿಡುಗಡೆ ಮಾಡುವಂತೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಗೆ ಎನ್.ಎಂ.ಡಿ.ಸಿಗೆ ಶಿಫಾರಸ್ಸು ಮಾಡುವಂತೆ ಮನವಿ ಮಾಡಿದರು.ಇದಕ್ಕೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವರಾದ ಎಚ್.ಡಿ.ಕುಮಾರಸ್ವಾಮಿಯವರು ಈ ಬಗ್ಗೆ ಬಳ್ಳಾರಿ ಜಿಲ್ಲಾಧಿಕಾರಿಗಳಿಗೆ ಸೂಚಿಸುವುದಾಗಿ ತಿಳಿಸಿದ್ದಾರೆ.ಈ ಸಂದರ್ಭದಲ್ಲಿ ಮುಖಂಡರಾದ ಮಹ್ಮದ್ ಜಾಕೀರ್,ವಿನೋದ್, ಆಮ್ಜದ್ ಸೇರಿದಂತೆ ಇತರರು ಇದ್ದರು.ವರದಿ : ಜಿಲಾನಸಾಬ್ ಬಡಿಗೇರ್

