ಮರಳಿ ಗ್ರಾಮದಲ್ಲಿ ವಿಕಲಚೇತನರ ಸಮನ್ವಯ ಗ್ರಾಮ ಸಭೆ..

ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಮರಳಿ ಗ್ರಾಮ ಪಂಚಾಯತಿ ಯಲ್ಲಿ ವಿಕಲಚೇತನ ಸಮನ್ವಯ ಗ್ರಾಮಸಭೆಯನ್ನು ಮರಳಿ ಗ್ರಾಮ ಪಂಚಾಯತಿಯಲ್ಲಿ ಆಯೋಜಿಸಲಾಯಿತು ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರು ಶ್ರೀಮತಿ ಹುಸೇನಮ್ಮ ಇವರು ವಿಕಲಚೇತನರ ಗ್ರಾಮ ಸಭೆಯ ಅಧ್ಯಕ್ಷತೆಯನ್ನು ವಹಿಸಿದರು

ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ಗ್ರಾಮ ಪಂಚಾಯಿತಿ ಸರ್ವ ಸದಸ್ಯರು ಹಾಗೂ ಮಾಜಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಭಾಗವಹಿಸಿ ಸದರಿ ಗ್ರಾಮ ಪಂಚಾಯಿತಿಯಲ್ಲಿ ಬರುವ ಸೌಲಭ್ಯಗಳ ಬಗ್ಗೆ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಬಸವರಾಜ ಗೌಡ್ರು ಮಾತನಾಡಿ ಗ್ರಾಮ ಪಂಚಾಯಿತಿಯಿಂದ ಬರುವ ಸೌಲಭ್ಯಗಳನ್ನು ತಿಳಿಸಿದರು ಈ ಕಾರ್ಯಕ್ರಮದಲ್ಲಿ VRW ಚಿದಾನಂದ ಆಚಾರನರಸಾಪುರ ರುದ್ರಮ್ಮ ಸಂಜೀವಿನಿ ಸಂಘದ ಅಧ್ಯಕ್ಷರು ಸಂಜೀವಿನಿ ಸಂಘದ ತಾಲೂಕು ನೋಡಲ್ ಅಧಿಕಾರಿಗಳು ಜ್ಯೋತಿ ಹಾಗೂ ವಿಕಲಚೇತನರು ಗ್ರಾಮ ಪಂಚಾಯತಿ ಸಿಬ್ಬಂದಿ ವರ್ಗ ಮತ್ತು ಸಾರಜನಕರು ಈ ಕಾರ್ಯಕ್ರಮಕ್ಕೆ ಆಗಮಿಸಿ ಯಶಸ್ಸು ಗಳಿಸಿದರು

