ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿಯಲ್ಲಿ ಹುಲಿಗಿಯ ಸತ್ಯ ಶ್ರೀಗೆ ಪ್ರಥಮ ಸ್ಥಾನ,,,,,

ಎಡದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ 2026ರ ಅಂಗವಾಗಿ ರಾಯಚೂರು ಕೃಷಿ ವಿಶ್ವವಿದ್ಯಾಲಯದ ಕ್ರೀಡಾಂಗಣದಲ್ಲಿ ನಡೆದ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿಯಲ್ಲಿ ಕೊಪ್ಪಳ ತಾಲೂಕಿನ ಹುಲಿಗಿ ಗ್ರಾಮದ ಸತ್ಯ ಶ್ರೀ ತಂದೆ ಆರ್ ವಿಜಯ್ ಕುಮಾರ್ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿರುವ ಮೂಲಕ ಒಂದು ಕೆಜಿ ಬೆಳ್ಳಿಯನ್ನು ತನ್ನದಾಗಿಸಿಕೊಂಡಿದ್ದಾರೆ

ಕರ್ನಾಟಕ ರಕ್ಷಣಾ ವೇದಿಕೆಯ ಯುವಶಕ್ತಿ ಸಂಘಟನೆಯ ರಾಜ್ಯಾಧ್ಯಕ್ಷರಾಗಿರುವ ಆರು ವಿಜಯಕುಮಾರ್ ಅಣ್ಣನವರ ಮಗಳಾಗಿರುವ ಸತ್ಯಶ್ರೀ ಅವರು ಹಲವಾರು ಕುಸ್ತಿ ಪಂದ್ಯಾವಳಿಗಳಲ್ಲಿ ಭಾಗವಹಿಸಿ ಈಗಾಗಲೇ ಅನೇಕ ಬಹುಮಾನಗಳನ್ನು ಪಡೆದಿದ್ದಾರೆ ಪ್ರಸ್ತುತ ರಾಯಚೂರಿನಲ್ಲಿ ನಡೆದ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆಯುವುದರ ಮೂಲಕ ಕೊಪ್ಪಳ ಜಿಲ್ಲೆಗೆ ಹುಲಿಗಿ ಗ್ರಾಮಕ್ಕೆ ಕೀರ್ತಿ ತಂದಿದ್ದಾರೆ ಸತ್ಯ ಶ್ರೀ ಅವರಿಗೆ ಕರ್ನಾಟಕ ರಕ್ಷಣಾ ವೇದಿಕೆಯ ಯುವಶಕ್ತಿ ಸಂಘಟನೆಯ ಎಲ್ಲಾ ಪದಾಧಿಕಾರಿಗಳು ಹೃತ್ಪೂರ್ವಕವಾಗಿ ಅಭಿನಂದಿಸಿ ಶುಭ ಹಾರೈಸಿದ್ದಾರೆ.

