ಕಂಪ್ಲಿ ಉತ್ಸವ ಹಿನ್ನಲೆ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಶಾಸಕ ಗಣೇಶ…

ಬಳ್ಳಾರಿ / ಕಂಪ್ಲಿ : ಪಟ್ಟಣದ ಪುರಸಭೆಯ ಸಭಾಂಗಣದಲ್ಲಿ ಕಂಪ್ಲಿ ಉತ್ಸವದ ಹಿನ್ನಲೆ ಶಾಸಕ ಜೆ.ಎನ್.ಗಣೇಶ ಶುಕ್ರವಾರ ಸಭೆ ನಡೆಸಲಾಯಿತು.ಇಲ್ಲಿನ ಸಭೆಯಲ್ಲಿ ಉತ್ಸವದ ಪೂರ್ವಸಿದ್ಧತೆ, ಕಂಪ್ಲಿ-ಕೋಟೆಯಿಂದ ಅದ್ಧೂರಿ ಮೆರವಣಿಗೆ, ವಿದ್ಯುತ್ ದೀಪಾಲಂಕಾರ, ಅಲಂಕೃತ ಎತ್ತಿನ ಬಂಡಿ, ಹೀಗೆ ಹಲವು ವಿಚಾರಗಳನ್ನು ಚರ್ಚಿಸಿ ತೀರ್ಮಾನ ಕೈಗೊಳ್ಳಲಾಯಿತು. ನಂತರ ಶಾಸಕ ಜೆ.ಎನ್.ಗಣೇಶ ಮಾತನಾಡಿ, ಕಂಪ್ಲಿ ಉತ್ಸವದ ಯಶಸ್ವಿಗೆ ಅಧಿಕಾರಿಗಳ ಸಹಕಾರ ಅಗತ್ಯವಾಗಿದೆ. ಪ್ರತಿಯೊಂದು ಹಂತದಲ್ಲಿ ಅಧಿಕಾರಿಗಳು ಸಾಥ ನೀಡಿದರೆ ಮಾತ್ರ ಯಶಸ್ಸು ಕಾಣಲು ಸಾಧ್ಯ. ನಿಮಗೆ ವಹಿಸಿದ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಹಿಸಬೇಕು ಎಂದರು. ಈ ಸಂದರ್ಭದಲ್ಲಿ ತಹಶೀಲ್ದಾರ್ ಜೂಗಲ್ ಮಂಜುನಾಯಕ, ಡಿವೈಎಸ್‌ಪಿ ಪ್ರಸಾದ್ ಗೋಖುಲೆ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಆರ್.ಕೆ.ಶ್ರೀಕುಮಾರ, ಮುಖ್ಯಾಧಿಕಾರಿ ಬಿ.ಮಲ್ಲಿಕಾರ್ಜುನ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್
