ರೋಗಿಗಳಿಗೆ ಹಾಲು, ಹಣ್ಣು, ಬ್ರೆಡ್ ವಿತರಣೆ.

ರೋಗಿಗಳಿಗೆ ಹಾಲು, ಹಣ್ಣು, ಬ್ರೆಡ್ ವಿತರಣೆ.

ಬಳ್ಳಾರಿ / ಕಂಪ್ಲಿ: ಪಟ್ಟಣದ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮಾಜಿ ಶಾಸಕ ನಾರಾ ಸೂರ್ಯನಾರಾಯಣರೆಡ್ಡಿ ಅವರ ಜನ್ಮದಿನದ ಅಂಗವಾಗಿ ವೀರಶೈವ ಲಿಂಗಾಯತ ಮಹಾ ವೇದಿಕೆ ಜಿಲ್ಲಾಧ್ಯಕ್ಷ ಹೊಸಕೋಟೆ ಜಗದೀಶ ನೇತೃತ್ವದಲ್ಲಿ ಶಾಸಕ ಜೆ.ಎನ್.ಗಣೇಶ ಅಭಿಮಾನಿಗಳ ಬಳಗದಿಂದ ರೋಗಿಗಳಿಗೆ ಹಾಲು, ಹಣ್ಣು, ಬ್ರೆಡ್ ವಿತರಸಲಾಯಿತು. ನಂತರ ಹೊಸಕೋಟೆ ಜಗದೀಶ ಮಾತನಾಡಿ, ಕೊಡಗೈ ದಾನಿ ನಾರಾ ಸೂರ್ಯನಾರಾಯಣರೆಡ್ಡಿ ಇವರು ಹಲವು ಸಮಾಜ ಸೇವಾ ಕಾರ್ಯಗಳೊಂದಿಗೆ ಜನರ ಹಚ್ಚುಮೆಚ್ಚಿನ ನಾಯಕರಾಗಿದ್ದಾರೆ. ಅವರು ನೀಡಿದು ಕೊಡುಗೆಗಳು ಅಪಾರವಾಗಿದೆ. ಇಂತಹ ಧೀಮಂತ ನಾಯಕ ನಾರಾಯಣರೆಡ್ಡಿ ಅವರ ಜನ್ಮದಿನದ ಅಂಗವಾಗಿ ಕಂಪ್ಲಿ ನಗರದ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು, ಹಂಪಲು ವಿತರಿಸಿ, ಅವರಿಗೆ ಆಯಸ್ಸು, ಆರೋಗ್ಯ ವೃದ್ಧಿಸುವ ಜೊತೆಗೆ ಇನ್ನಷ್ಟು ಸಮಾಜ ಸೇವೆ ಮಾಡಲು ಆ ದೇವರು ಶಕ್ತಿ ನೀಡಲು ಎಂದು ಹಾರೈಯಿಸಿದರು.

ಈ ಸಂದರ್ಭದಲ್ಲಿ ಬಿಡಿಸಿಸಿ ಜಿಲ್ಲಾ ನಿರ್ದೇಶಕ ಪಿ.ಮೂಕಯ್ಯಸ್ಚಾಮಿ, ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ನಿರ್ದೇಶಕ ವಿಬಿ ನಾಗರಾಜ, ನಾಮ ನಿರ್ದೇಶಿತ ಸದಸ್ಯ ಬಳ್ಳಾಪುರ ಲಿಂಗಪ್ಪ, ಮುಖಂಡರಾದ ಬಿ.ನಾರಾಯಣಪ್ಪ, ಹೊನ್ನಳ್ಳಿ ಗಂಗಾಧರ, ಕಾಳಿಂಗವರ್ಧನ, ಭಟಾರಿ ಪ್ರಮೋದ್, ಬಳೆ ಮಲ್ಲಿಕಾರ್ಜುನ, ಹೆಚ್.ಲಿಂಗಪ್ಪ, ಹೆಚ್.ಗಂಗಾಧರ, ಕೆ.ರಾಜ, ಹಂಪಾರೆಡ್ಡಿ, ಬಿ.ರಾಕೇಶ್, ಟೈಲ್ಸ್ ಮಹೇಶ, ಹೆಚ್.ಬಸಪ್ಪ, ಶ್ರೀಕಾಂತ, ಮಂಜುನಾಥ, ತಿಪ್ಪೇಸ್ವಾಮಿ ಸಣಾಪುರ, ಹೆಚ್.ಬಾಬು ಇದ್ದರು. ನಂತರ ಮೆಟ್ರಿ ಗ್ರಾಮದ ಹೊನ್ನಳ್ಳಿ ಸಿದ್ದಪ್ಪನವರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಸಮವಸ್ತçಗಳನ್ನು ವಿತರಿಸುವ ಮೂಲಕ ಜನ್ಮದಿನಾಚರಣೆ ಆಚರಿಸಲಾಯಿತು. ವರದಿ : ಜಿಲಾನಸಾಬ್ ಬಡಿಗೇರ್

Leave a Reply

Your email address will not be published. Required fields are marked *