ವ್ಯಕ್ತಿತ್ವ ಹಾಗೂ ಸ್ಪರ್ಧಾತ್ಮಕ ಮನೋಭಾವಕ್ಕೆ ಪ್ರತಿಭಾ ಕಾರಂಜಿ ಸಹಕಾರಿ : ಮಲ್ಲನಗೌಡ ಕೆ.ಎಸ್…

ವ್ಯಕ್ತಿತ್ವ ಹಾಗೂ ಸ್ಪರ್ಧಾತ್ಮಕ ಮನೋಭಾವಕ್ಕೆ ಪ್ರತಿಭಾ ಕಾರಂಜಿ ಸಹಕಾರಿ : ಮಲ್ಲನಗೌಡ ಕೆ.ಎಸ್…

ಬಳ್ಳಾರಿ / ಕಂಪ್ಲಿ : ವಿದ್ಯಾರ್ಥಿಗಳಲ್ಲಿ ವ್ಯಕ್ತಿತ್ವ ಹಾಗೂ ಸ್ಪರ್ಧಾತ್ಮಕ ಮನೋಭಾವ, ಜ್ಞಾನ ವಿಕಾಸಕ್ಕೆ ಪ್ರತಿಭಾ ಕಾರಂಜಿ ಸಹಕಾರಿಯಾಗಿದೆ ಎಂದು ತಾಪಂ ಸಹಾಯಕ ನಿರ್ದೇಶಕ ಮಲ್ಲನಗೌಡ ಕೆ.ಎಸ್ ಹೇಳಿದರು. ಪಟ್ಟಣದ ಕೊಟ್ಟಾಲ್ ರಸ್ತೆಯ ವಿಜಯನಗರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಸತ್ಯನಾರಾಯಣ ಪೇಟೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲ್ಲೋತ್ಸವ ಉದ್ಘಾಟಿಸಿ ಮಾತನಾಡಿ, ಮಕ್ಕಳು ಬೌದ್ಧಿಕ ಸಾಮರ್ಥ್ಯವನ್ನು ವೃದ್ಧಿಸಿಕೊಳ್ಳಲು ಇದೊಂದು ಉತ್ತಮ ವೇದಿಕೆಯಾಗಿದೆ ಎಂದರು.ನಂತರ ಸಿ.ಆರ್.ಪಿ ರೇಣುಕಾರಾಧ್ಯ ಪ್ರಾಸ್ತಾವಿಕವಾಗಿ ಮಾತನಾಡಿ, ಪ್ರತಿ ಮಕ್ಕಳಲ್ಲಿ ಒಂದು ವಿಶೇಷ ಪ್ರತಿಭೆ ಇರುತ್ತದೆ. ಅದರ ಅನಾವರಣಕ್ಕೆ ಪ್ರತಿಭಾ ಕಾರಂಜಿ ಉತ್ತಮ ವೇದಿಕೆಯಾಗಿದೆ. ಕಲಿಕೆ ಎಂದರೆ ಕೇವಲ ಅಂಕಗಳಿಕೆ ಅಲ್ಲ, ಕಲಿಕೆ ಜೊತೆ ವಿವಿಧ ಚಟುವಟಿಕೆ ಮೂಲಕ ಮಕ್ಕಳ ಪ್ರತಿಭೆ ಹೊರಹಾಕಲು ಪ್ರತಿಭಾ ಕಾರಂಜಿ ಅನುಕೂಲ ವಾಗುತ್ತದೆ ಎಂದರು.ವಿಜಯನಗರ ಸಂಸ್ಥೆಯ ಕಾರ್ಯದರ್ಶಿ ಪಿ.ರಾಮಚಂದ್ರರಾವ್ ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದರು. ವೈಯಕ್ತಿಕ ಮತ್ತು ಸಾಮೂಹಿಕ ಸ್ಪರ್ಧೆಗಳು ನಡೆದವು. ಪಟ್ಟಣದ ಚೇತನ ವಿದ್ಯಾನಿಕೇತನ ಶಾಲೆಯ 3ನೇ ತರಗತಿಯ ವಿದ್ಯಾರ್ಥಿನಿ ಡಿ.ಶ್ರಾವ್ಯ ಇವರು ಅಯೋಧ್ಯ ಬಾಲರಾಮ(ರಾಮಲಲ್ಲಾ)ನ ಛದ್ಮವೇಷದಲ್ಲಿ ಗಮನ ಸೆಳೆದಳು. ಇಲ್ಲಿನ ಪ್ರತಿಭಾ ಕಾರಂಜಿಯಲ್ಲಿ 600ಕ್ಕೂ ಹೆಚ್ಚು ಮಕ್ಕಳು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಎಸ್‌ಜಿಜಿ ಉಪ ಪ್ರಾಚಾರ್ಯೆ ಸುಜಾತ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ನಾಗನಗೌಡ ಎಂ.ಎ, ಕಂಪ್ಲಿ ತಾಲೂಕು ಅಧ್ಯಕ್ಷ ಹನುಮಂತಪ್ಪ, ಇಸಿಒ ರೇವಣ್ಣ ಎಂ, ಖಾಸಗಿ ಶಾಲಾ ಸಂಘದ ಅಧ್ಯಕ್ಷ ಶಿವರಾಜ ಉಗಾದಿ, ಎನ್‌ಪಿಎಸ್ ಅಧ್ಯಕ್ಷ ರೇವಣಸಿದ್ದೇಶ ಎಂ, ಸಿಆರ್‌ಪಿ ಭೂಮೇಶ್ವರ, ಸಾವಿತ್ರಿ ಬಾಯಿ ಪುಲೆ ಸಂಘದ ಅಧ್ಯಕ್ಷ ಸುನಿತಾ ಪೂಜಾರ್, ವಿಜಯನಗರ ಶಾಲೆಯ ಮುಖ್ಯಗುರು ವಿಷ್ಣು ಕೆ, ಹಿರಿಯ ಶಿಕ್ಷಕರಾದ ಯು.ರಾಜಶೇಖರ, ಚಂದ್ರಯ್ಯ ಸೊಪ್ಪಿನಮಠ ಸೇರಿದಂತೆ ವಿವಿಧ ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಫೋಟೋ 01- ಕಂಪ್ಲಿ ಪಟ್ಟಣದ ವಿಜಯನಗರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಪ್ರತಿಭಾ ಕಾರಂಜಿ ಮತ್ತು ಕಲ್ಲೋತ್ಸವದಲ್ಲಿ ಗಮನ ಸೆಳೆದ ಛದ್ಮವೇಷದ ಮಕ್ಕಳು. ಫೋಟೋ 02 – ಕಂಪ್ಲಿಯಲ್ಲಿ ನಡೆದ ಪ್ರತಿಭಾ ಕಾರಂಜಿ ಮತ್ತು ಕಲ್ಲೋತ್ಸವದಲ್ಲಿ ವಿದ್ಯಾರ್ಥಿನಿ ಡಿ.ಶ್ರಾವ್ಯ ಇವರು ಅಯೋಧ್ಯ ಬಾಲರಾಮ(ರಾಮಲಲ್ಲಾ)ನ ಛದ್ಮವೇಷದಲ್ಲಿ ಗಮನ ಸೆಳೆದಳು.

ವರದಿ : ಜಿಲಾನಸಾಬ್ ಬಡಿಗೇರ್

Leave a Reply

Your email address will not be published. Required fields are marked *