ಹಂಪಾದೇವನಹಳ್ಳಿ ಗ್ರಾ.ಪಂ.ಗೆ ಗಾಂಧಿ ಗ್ರಾಮ ಪುರಸ್ಕಾರ.

ಬಳ್ಳಾರಿ / ಕಂಪ್ಲಿ:ಕಂಪ್ಲಿ ತಾಲ್ಲೂಕಿನ ಹಂಪಾದೇವನಹಳ್ಳಿ ಗ್ರಾಮ ಪಂಚಾಯತಿಗೆ ಪ್ರಸಕ್ತ ಸಾಲಿನ ಗಾಂಧಿ ಗ್ರಾಮ ಪುರಸ್ಕಾರ ಲಭಿಸಿದೆ. ಹಂಪಾದೇವನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ವಿದ್ಯುತ್ ದೀಪ, ಸ್ವಚ್ಛತೆ, ಶುದ್ಧ ಕುಡಿಯುವ ನೀರು ಸರಬರಾಜು ಸೇರಿದಂತೆ ಮೂಲ ಸೌಕರ್ಯ, ಲೆಕ್ಕ ಪರಿಶೋಧನೆ, ಸರ್ಕಾರದ ಯೋಜನೆಗಳನ್ನು ಜನತೆಗೆ ಯಶಸ್ವಿಯಾಗಿ ತಲುಪಿಸಿದ ಅಂಕಗಳನ್ನು ಪರಿಗಣಿಸಿ ಹಂಪಾದೇವನಹಳ್ಳಿ ಗ್ರಾ.ಪಂ. ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾಗಿದೆ. ವಿಧಾನಸೌಧದ ಬ್ಯಾಂಕ್ವೇಟೆ ಹಾಲ್‌ನಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಗ್ರಾ.ಪಂ.ಅಧ್ಯಕ್ಷೆ ಜಿ.ಕವಿತಾ ಪಂಪನಗೌಡ, ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಕೆ.ಬೀರಲಿಂಗ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರಿಂದ ಗಾಂಧಿ ಗ್ರಾಮ ಪುರಸ್ಕಾರವನ್ನು ಪಡೆದರು.ಗ್ರಾ.ಪಂ.ಅಧ್ಯಕ್ಷೆ ಜಿ.ಕವಿತಾ ಪಂಪನಗೌಡ ಹಾಗೂ ಪಿಡಿಒ ಕೆ.ಬೀರಲಿಂಗ ಮಾತನಾಡಿ ಗ್ರಾ.ಪಂ.ವ್ಯಾಪ್ತಿಯಲ್ಲಿ ಸಾರ್ವಜನಿಕರ ಸಹಕಾರ ಹಾಗೂ ಎಲ್ಲಾ ಸದಸ್ಯರ ಸಹಕಾರ ಮತ್ತು ತಾ.ಪಂ.ಅಧಿಕಾರಿಗಳ ಸಹಕಾರದಿಂದಾಗಿ ಗ್ರಾ.ಪಂ.ವ್ಯಾಪ್ತಿಯಲ್ಲಿ ಉತ್ತಮ ಕೆಲಸಗಳನ್ನು ಮಾಡಲು ಸಾಧ್ಯವಾಗಿದೆ ಎಂದರು. ತಾಲ್ಲೂಕಿನಲ್ಲಿ ಗಾಂಧಿ ಗ್ರಾಮ ಪುರಸ್ಕಾರ ಪಡೆದ ಹಂಪಾದೇವನಹಳ್ಳಿ ಗ್ರಾ.ಪಂ. ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಅಭಿವೃದ್ಧಿ ಅಧಿಕಾರಿಗಳನ್ನು ತಾ.ಪಂ. ಇಒ ಆರ್.ಕೆ.ಶ್ರೀಕುಮಾರ್, ಮನರೇಗಾ ಸಹಾಯಕ ನಿರ್ದೇಶಕರಾದ ಕೆ.ಎಸ್.ಮಲ್ಲನಗೌಡ ಹಾಗೂ ತಾಲ್ಲೂಕು ಪಂಚಾಯತಿ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.ವರದಿ : ಜಿಲಾನಸಾಬ್ ಬಡಿಗೇರ್
