ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ.

ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ.

ಕಾರಟಗಿ. ಕರ್ನಾಟಕ ಸರ್ಕಾರ ಶಾಲಾ ಶಿಕ್ಷಣ ಇಲಾಖೆ ಬೆಂಗಳೂರು ಅಪರ ಆಯುಕ್ತರ ಕಚೇರಿ ಕಲ್ಬುರ್ಗಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಕೊಪ್ಪಳ ಶಾಲಾ ಶಿಕ್ಷಣ ಇಲಾಖೆ, ಕೊಪ್ಪಳ ಇವರ ನೇತೃತ್ವದಲ್ಲಿ ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಕಲೋತ್ಸವ 2025….26 ಇದೇ ದಿನಾಂಕ 7 ಮತ್ತು 8ರಂದು ಶ್ರೀ ಸಿದ್ದೇಶ್ವರ ರಂಗ ಮಂದಿರ ಕರ್ನಾಟಕ ಪಬ್ಲಿಕ್ ಶಾಲೆ ಪ್ರೌಢಶಾಲಾ ವಿಭಾಗ ನವಲಿ ರಸ್ತೆ ಕಾರ್ಟಿಗಿಯಲ್ಲಿ ಜರುಗಲಿದೆ. ದಿನಾಂಕ 7 ರಂದು ಬೆಳಿಗ್ಗೆ 10 ಗಂಟೆಗೆ ವಿಧಾನಪರಿಷತ್ ಸಭಾಪತಿಗಳಾದ ಬಸವರಾಜ ಹೊರಟ್ಟಿ ಅವರ ಘನ ಉಪಸ್ಥಿತಿಯಲ್ಲಿ ಶಿಕ್ಷಣ ಸಚಿವ ಎಸ್ ಮಧು ಬಂಗಾರಪ್ಪ ಸಮಾರಂಭವನ್ನು ಉದ್ಘಾಟಿಸುವರು ಅಧ್ಯಕ್ಷತೆ ಮತ್ತು ಸ್ಪರ್ಧಿಗಳ ಉದ್ಘಾಟನೆಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ನೆರವೇರಿಸುವವರು . ವಿಶೇಷ ಅತಿಥಿಗಳಾಗಿ ಮುಖ್ಯ ಸಚೇತಕ ವಿರೋಧ ಪಕ್ಷದ ನಾಯಕ ದುಡ್ಡನಗೌಡ ಪಾಟೀಲ್. ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ್ ರಾಯರೆಡ್ಡಿ ಸೇರಿದಂತೆ ಜಿಲ್ಲಾ ಸಂಸದ ರಾಜಶೇಖರ ಹಿಟ್ನಾ ಳ್ ಸೇರಿದಂತೆ ಜಿಲ್ಲೆಯ ಎಲ್ಲಾ ವಿಧಾನಸಭೆಗಳ ಶಾಸಕರು ವಿಧಾನಪರಿಷತ್ ಸದಸ್ಯರು ಹಾಲಿ ಮಾಲಿ ಪ್ರತಿನಿಧಿಗಳು ಸೇರಿದಂತೆ ಉನ್ನತ ಅಧಿಕಾರಿಗಳು. ಜಿಲ್ಲಾಧಿಕಾರಿಗಳು ಇತರರು ಭಾಗವಹಿಸುವುದು ಎಂದು ಶಿಕ್ಷಣ ಇಲಾಖೆ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *