ನಿರ್ಮಾಪಕ ಕನಕಪುರ ಶ್ರೀನಿವಾಸ್ ವಿರುದ್ಧ ಕಾನೂನು ಕ್ರಮಕ್ಕೆ ಜಿಲ್ಲಾಧ್ಯಕ್ಷ ಖಾದರ್ ಭಾಷಾ ಆಗ್ರಹ….

ಗಂಗಾವತಿ: ಫೆ.07ಕನ್ನಡದ ಖ್ಯಾತ ನಿರ್ಮಾಪಕರಾದ ಕನಕಪುರ ಶ್ರೀನಿವಾಸ್ ಇವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ಅಖಿಲ ಕರ್ನಾಟಕ ಡಾll.ರಾಜಕುಮಾರ್ ಅಭಿಮಾನಿ ಸಂಘಗಳ ಒಕ್ಕೂಟದ ಕೊಪ್ಪಳ ಜಿಲ್ಲಾಧ್ಯಕ್ಷ ಖಾದರ್ ಭಾಷಾ ಹಾಗೂ ಗಂಗಾವತಿ ತಾಲೂಕು ಅಧ್ಯಕ್ಷ ಪುನೀತ್ ಕುಮಾರ್ ಮತ್ತು ಸಂಘದ ಸದಸ್ಯರು ಆಗ್ರಹಿಸಿದ್ದಾರೆ.ಇತ್ತೀಚೆಗೆ ‘ಕಾಟನ್ ಪೇಟೆಗೇಟ್’ ಎಂಬ ಕನ್ನಡ ಸಿನಿಮಾದ ಪತ್ರಿಕಾಗೋಷ್ಠಿಯ ವೇದಿಕೆಯಲ್ಲಿ ಮಾತನಾಡಿದ ನಿರ್ಮಾಪಕ ಕನಕಪುರ ಶ್ರೀನಿವಾಸ್ ಅವರು, ಕರ್ನಾಟಕ ರತ್ನ ದಿವಂಗತ ಡಾ. ಪುನೀತ್ ರಾಜ್‌ಕುಮಾರ್ ಅವರ ಕುರಿತು ಹಾಗೂ ಕನ್ನಡದ ಕಲಾವಿದರು ಮತ್ತು ನಿರ್ದೇಶಕರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.ಪುನೀತ್ ರಾಜ್‌ಕುಮಾರ್ ನಾಯಕತ್ವದಲ್ಲಿ ತಮ್ಮನಿರ್ಮಾಣದ ‘ಮಯೂರ’ ಸಿನಿಮಾ ಸೆಟ್ಟೇರಲು ಮುನ್ನ ನಿರ್ದೇಶಕರ ನಿಧನದಿಂದಾಗಿ ಸಿನಿಮಾ ಸ್ಥಗಿತಗೊಂಡಿತ್ತು.

ಈ ಹಿನ್ನೆಲೆಯಲ್ಲಿಯೇ “ಈಗ ಪುನೀತ್ ರಾಜ್‌ಕುಮಾರ್ ಸತ್ತು ಹೋಗಿದ್ದಾರೆ, ಇಬ್ಬರು ಮೇಲೆ ಚೆನ್ನಾಗಿದ್ದಾರೆ” ಎಂಬ ಅಸಂಬದ್ಧ ಹಾಗೂ ವಿಕೃತ ಮನೋಭಾವದ ಹೇಳಿಕೆಯನ್ನು ನೀಡಿ ಕೋಟ್ಯಾಂತರ ಅಭಿಮಾನಿಗಳ ಮನಸ್ಸಿಗೆ ಆಘಾತ ಉಂಟು ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.ಈ ರೀತಿಯ ಹೇಳಿಕೆಗಳು ಸಾರ್ವಜನಿಕ ಶಾಂತಿ ಕದಡುವುದಲ್ಲದೆ, ದಿವಂಗತ ಮಹಾನ್ ಕಲಾವಿದರ ಗೌರವಕ್ಕೆ ಧಕ್ಕೆ ತರುವಂತಿದ್ದು, ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಸಾಧ್ಯತೆ ಇದೆ ಎಂದು ಕನ್ನಡಾಭಿಮಾನಿಗಳು ಅಭಿಪ್ರಾಯಪಟ್ಟಿದೆ.ಈ ಹಿನ್ನೆಲೆಯಲ್ಲಿ ಎನ್.ಆರ್. ರಮೇಶ್ ಅವರ ಆದೇಶದ ಮೇರೆಗೆ ಗಂಗಾವತಿ ಪೊಲೀಸ್ ಉಪವಿಭಾಗದ ಮಾನ್ಯ ಉಪಾಧೀಕ್ಷಕರಿಗೆ ಮನವಿ ಸಲ್ಲಿಸಲಾಗಿದ್ದು, ಸಂಬಂಧಿಸಿದವರ ವಿರುದ್ಧ ಕಾನೂನಿನ ಚೌಕಟ್ಟಿನಲ್ಲಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಡಾll.ರಾಜಕುಮಾರ್ ಅಭಿಮಾನಿ ಸಂಘಗಳ ಒಕ್ಕೂಟದ ಕೊಪ್ಪಳ ಜಿಲ್ಲಾಧ್ಯಕ್ಷ ಖಾದರ್ ಭಾಷಾ ಹಾಗೂ ಗಂಗಾವತಿ ತಾಲೂಕು ಅಧ್ಯಕ್ಷ ಪುನೀತ್ ಕುಮಾರ್ ಸೇರಿದಂತೆ ಸಂಘದ ಸದಸ್ಯರು ಆಗ್ರಹಿಸಿದ್ದಾರೆ.ಈ ಸಂದರ್ಭದಲ್ಲಿ ಡಾll.ರಾಜಕುಮಾರ್ ಅಭಿಮಾನಿ ಸಂಘಗಳ ಒಕ್ಕೂಟದ ಕೊಪ್ಪಳ ಜಿಲ್ಲಾಧ್ಯಕ್ಷ ಖಾದರ್ ಭಾಷಾ, ಹಾಗೂ ಗಂಗಾವತಿ ತಾಲೂಕು ಅಧ್ಯಕ್ಷ ಪುನೀತ್ ಕುಮಾರ್, ಮತ್ತು ಸಂಘದ ಸದಸ್ಯರಾದ ಮಂಜುನಾಥ್ ಸಾಬಳೆ, ಈ ಸಂದರ್ಭದಲ್ಲಿ ಉಪಸಿತರಿದ್ದರು.
