ಕುಡಿವ ನೀರಿನ ಸಮಸ್ಯೆಗೆ ಗಂಗಾವತಿ ತಾ.ಪಂ. ಕಚೇರಿಯಲ್ಲಿ ಸಹಾಯವಾಣಿ ಆರಂಭ ತಾ.ಪಂ. ಇಓ ರಾಮರೆಡ್ಡಿ ಪಾಟೀಲ್ ಮಾಹಿತಿ..

ಗಂಗಾವತಿ : ತಾಲೂಕಿನ ಗ್ರಾಮೀಣ ಭಾಗದಲ್ಲಿ ಬೇಸಿಗೆ ನಿಮಿತ್ತ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ತಾಲೂಕು ಪಂಚಾಯತಿ ಕಚೇರಿಯಲ್ಲಿ ಸಹಾಯವಾಣಿ ಕೇಂದ್ರ ತೆರೆಯಲಾಗಿದ್ದು, ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳುವಂತೆ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಮರೆಡ್ಡಿ ಪಾಟೀಲ್ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ. ತಾಲೂಕಿನ ಗ್ರಾಮೀಣ ಭಾಗದಲ್ಲಿ ಬೇಸಿಗೆ ನಿಮಿತ್ಯ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಳ್ಳುವುದರಿಂದ ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ಕ್ರಮವಹಿಸಲು ಹಾಗೂ ತಕ್ಷಣವೇ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಿ ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವ ಸಲುವಾಗಿ ತಾಲೂಕು ಪಂಚಾಯತ ಕಾರ್ಯಾಲಯದಲ್ಲಿ ಸಹಾಯವಾಣಿ ಕೇಂದ್ರ ತೆರೆಯಲಾಗಿದ್ದು, ನಿಮ್ಮ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಉಲ್ಪಣಗೊಳ್ಳುವ ಕುಡಿವ ನೀರಿನ ಸಮಸ್ಯೆ ಕುರಿತು ಈ ಕೆಳಕಾಣಿಸಿದ ದೂರವಾಣಿಗೆ ಕರೆ ಮಾಡಿ ದೂರುಗಳನ್ನು ದಾಖಲಿಸಿ ಕೂಡಲೇ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬೇಕು. ಕುಡಿವ ನೀರಿನ ಸಮಸ್ಯೆ ಇದ್ದರೆ ಎಸ್ ಡಿಎ ಎಂ.ಸಂತೋಷ ಬೆಳಗ್ಗೆ 09:00 ರಿಂದ 01:30 ರವರೆಗೆ ದೂರವಾಣಿ ಸಂಖ್ಯೆ 6361940327, ಮಾರುತಿ (ಕೈಪಂಪು ಆಪರೇಟರ್) ಮಧ್ಯಾಹ್ನ 02:00 ರಿಂದ ಸಂಜೆ 07:30 ರವರೆಗೆ ದೂರವಾಣಿ ಸಂಖ್ಯೆ : 9036892963 ಗೆ ಸಂಪರ್ಕಿಸಲು ಪ್ರಕಟಣೆಯಲ್ಲಿ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಮರೆಡ್ಡಿ ಪಾಟೀಲ್ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.
