ಗಂಗಾವತಿ ತಹಶೀಲ್ದಾರ್ ಹುದ್ದೆಗೆ ಪ್ರಭಾರ ನೇಮಕ – ವಿನಾಯಕ ಗೋಡಬೋಲೆ ಅವರಿಗೆ ಹೆಚ್ಚುವರಿ ಜವಾಬ್ದಾರಿ..

ಗಂಗಾವತಿ ತಹಶೀಲ್ದಾರ್ ಹುದ್ದೆಗೆ ಪ್ರಭಾರ ನೇಮಕ – ವಿನಾಯಕ ಗೋಡಬೋಲೆ ಅವರಿಗೆ ಹೆಚ್ಚುವರಿ ಜವಾಬ್ದಾರಿ..

ಗಂಗಾವತಿ, ಅ.08:*ತಾಲ್ಲೂಕಿನ ತಹಶೀಲ್ದಾರ್ ಗ್ರೇಡ್-1 ಹುದ್ದೆಯ ಪ್ರಭಾರವನ್ನು ಕೊಪ್ಪಳ ಜಿಲ್ಲಾಧಿಕಾರಿಗಳ ಕಚೇರಿಯ ಕಚೇರಿ ಸಹಾಯಕ *ವಿನಾಯಕ ಗೋಡಬೋಲೆ* ಅವರಿಗೆ ಹೆಚ್ಚುವರಿಯಾಗಿ ವಹಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.ಪ್ರಸಕ್ತ ತಹಶೀಲ್ದಾರ್ ಗ್ರೇಡ್-1 *ಯು. ವಸಂತಕುಮಾರಿ* ಅವರು ತಮ್ಮ ತಾಯಿಗೆ ಎದೆನೋವು ಕಾಣಿಸಿಕೊಂಡು ಅಸ್ವಸ್ಥರಾಗಿರುವ ಹಿನ್ನೆಲೆಯಲ್ಲಿ ಚಿಕಿತ್ಸೆ ಹಾಗೂ ಆರೈಕೆಗಾಗಿ ರಜೆ ಕೋರಿ ಅರ್ಜಿ ಸಲ್ಲಿಸಿದ್ದರು. ಅವರ ಮನವಿಯನ್ನು ಪರಿಗಣಿಸಿ *ಅ.07 ರಿಂದ ಅ.13 ರವರೆಗೆ ಅರ್ಧ ವೇತನ ರಜೆ (Half Pay Leave)* ಮಂಜೂರು ಮಾಡಲಾಗಿದೆ.ತಹಶೀಲ್ದಾರ್ ರಜೆಯ ಅವಧಿಯಲ್ಲಿ ಸಾರ್ವಜನಿಕ ಹಾಗೂ ಆಡಳಿತಾತ್ಮಕ ಕಾರ್ಯಗಳಿಗೆ ಯಾವುದೇ ಅಡಚಣೆ ಆಗದಂತೆ ಹಿತದೃಷ್ಟಿಯಿಂದ ಹುದ್ದೆಯ ಪ್ರಭಾರವನ್ನು ಬೇರೊಬ್ಬ ಅಧಿಕಾರಿಗೆ ವಹಿಸುವುದು ಅಗತ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ಕಚೇರಿ ಸಹಾಯಕ ವಿನಾಯಕ ಗೋಡಬೋಲೆ ಅವರಿಗೆ ಮುಂದಿನ ಆದೇಶದವರೆಗೆ ಗಂಗಾವತಿ ತಹಶೀಲ್ದಾರ್ ಗ್ರೇಡ್-1 ಹುದ್ದೆಯ ಪ್ರಭಾರ ವಹಿಸಲಾಗಿದೆ.ಈ ಕುರಿತು ಕೊಪ್ಪಳ ಜಿಲ್ಲಾಧಿಕಾರಿ ಕಚೇರಿಯಿಂದ ಅ.07 ರಂದು ಅಧಿಕೃತ ಆದೇಶ ಹೊರಡಿಸಲಾಗಿದ್ದು, ಸಂಬಂಧಿಸಿದ ಅಧಿಕಾರಿಗಳಿಗೆ ಮಾಹಿತಿ ಹಾಗೂ ಸೂಕ್ತ ಕ್ರಮಕ್ಕಾಗಿ ಆದೇಶದ ಪ್ರತಿಗಳನ್ನು ರವಾನಿಸಲಾಗಿದೆ.

Leave a Reply

Your email address will not be published. Required fields are marked *