ತೆರೆದ ಮನೆ ಕಾರ್ಯಕ್ರಮ; ಬಾಲ್ಯದಿಂದಲೇ ಕಾನೂನಿನ ಪಾಠ ಅಗತ್ಯ: ಡಿವೈಎಸ್ಪಿ ಜೆ.ಎಸ್.ನ್ಯಾಮಗೌಡರ್ ….

ಗಂಗಾವತಿ : ಪೊಲೀಸರ ಬಗ್ಗೆ ಇರುವ ಭಯ ಹೋಗಲಾಡಿಸುವುದು, ಅಪರಾಧ ತಡೆಗಟ್ಟಲು ಮಕ್ಕಳಲ್ಲಿ ಅರಿವು ಮೂಡಿಸಿ ಕಾನೂನು ತಿಳಿವಳಿಕೆಗೆ ತೆರೆದ ಮನೆ ಸಹಕಾರಿಯಾಗಿದೆ ಎಂದು ಗಂಗಾವತಿ ಡಿವೈಎಸ್ಪಿ ಜೆ.ಎಸ್.ನ್ಯಾಮಗೌಡರ್ ತಿಳಿಸಿದರು.ನಗರ ಪೊಲೀಸ್ ಠಾಣೆಗೆ ಸೋಮವಾರ ಆಗಮಿಸಿದ ವಿಸ್ಡ್ ಮ್ ಎಲಿಮೆಂಟರಿ ಶಾಲೆಯ ಮಕ್ಕಳಿಗೆ ತೆರೆದ ಮನೆ ಕಾರ್ಯಕ್ರಮದ ಪ್ರಯೋಜನಗಳನ್ನು ತಿಳಿಸಿಕೊಟ್ಟರು.‘ಸರ್ಕಾರ ಇಂಥ ಕಾರ್ಯಕ್ರಮವನ್ನು ರೂಪಿಸಿ ಪೊಲೀಸ್ ಠಾಣೆಗಳಲ್ಲಿ ಮಕ್ಕಳಿಗೆ ಪೊಲೀಸ್ ವ್ಯವಸ್ಥೆಯ ಬಗ್ಗೆ ತಿಳಿಸುವ ಉದ್ದೇಶವಾಗಿದೆ. ಶಾಲಾಭಿವೃದ್ಧಿ, ಮಕ್ಕಳ ಸುರಕ್ಷತೆ ಮತ್ತು ಪೊಲೀಸರ ಬಗ್ಗೆ ಇರುವ ಭಯ ಹೋಗಲಾಡಿಸಲು ಆಯೋಜಿಸಲು ಇದು ಸಹಕಾರವಾಗಿದೆ. ಪೋಕ್ಸೊ ಕಾಯ್ದೆ ತುಂಬ ಕಠಿಣವಾದದ್ದು. ಈ ಕಾಯ್ದೆ ಕುರಿತು ಮಕ್ಕಳು ಸೇರಿ ಎಲ್ಲ ಜನತೆ ಅರಿವು ಹೊಂದಬೇಕು’ ಎಂದು ಸಲಹೆ ನೀಡಿದರು.

ನಂತರ ಮಾತನಾಡಿದ ಗಂಗಾವತಿ ನಗರ ಪೊಲೀಸ್ ಠಾಣೆ ಎಎಸ್ಐ ಶಿವಶರಣ ತೆರೆದ ಮನೆ ಕಾರ್ಯಕ್ರಮದಡಿ ಶಾಲಾ ಮಕ್ಕಳನ್ನು ಠಾಣೆಗೆ ಕರೆತಂದು ಪೊಲೀಸ್ ವ್ಯವಸ್ಥೆಯ ಬಗ್ಗೆ ಸಂಪೂರ್ಣ ಪರಿಚಯ ಮಾಡಿಕೊಡಲಾಗುತ್ತದೆ. ಕೆಲವು ಶಾಲೆಗಳಿಗೆ ಪೊಲೀಸರೇ ಭೇಟಿ ನೀಡಿ ಕಾನೂನಿನ ಅರಿವು ಮೂಡಿಸಲಾಗುತ್ತದೆ. ಪ್ರಾಥಮಿಕ, ಪ್ರೌಢ, ಪದವಿಪೂರ್ವ ಹಾಗೂ ಪದವಿ ಕಾಲೇಜಿನ ವಿದ್ಯಾರ್ಥಿಗಳು ಈ ಕಾರ್ಯಕ್ರಮದ ಪ್ರಯೋಜನ ಪಡೆದುಕೊಳ್ಳಬೇಕು. ಬಾಂಧವ್ಯ ವೃದ್ಧಿ ಮತ್ತು ಶಾಲಾ ಹಂತದಲ್ಲಿ ಮಕ್ಕಳಿಗೆ ಕಾನೂನು ಬಗ್ಗೆ ಅರಿವು ಮೂಡಿಸುವ ಮೂಲಕ ಉತ್ತಮ ನಾಗರಿಕರನ್ನಾಗಿ ರೂಪಿಸಬಹುದು ಎಂಬುದು ಕಾರ್ಯಕ್ರಮದ ಮೂಲ ಉದ್ದೇಶ’ ಎಂದು ಹೇಳಿದರು.ಮಕ್ಕಳ ಸಹಾಯವಾಣಿ, ಪೊಕ್ಸ್ ಕಾಯ್ದೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ, ಬಾಲ ಕಾರ್ಮಿಕ ಪದ್ಧತಿ ನಿಷೇಧ ಕಾಯ್ದೆ ಮತ್ತಿತರ ವಿಷಯಗಳ ಬಗ್ಗೆ ತಿಳಿಸಿಕೊಟ್ಟರು.ಶಾಲಾ ಮಕ್ಕಳು ಪೊಲೀಸ್ ಠಾಣೆಗಳಿಗೆ ಭೇಟಿ ನೀಡಿ, ಪೊಲೀಸರ ದೈನಂದಿನ ಕೆಲಸ, ಗಸ್ತು ತಿರುಗುವಿಕೆ ಮತ್ತು ಇತರ ಕಾರ್ಯಗಳ ಬಗ್ಗೆ ಮಾಹಿತಿ ಪಡೆದುಕೊಂಡರು, ಈ ಸಂದರ್ಭದಲ್ಲಿ ನಗರ ಪೊಲೀಸ್ ಠಾಣೆ ಪಿಎಸ್ಐ ಟಿ.ಜಿ.ನಾಗರಾಜ, ಅಮರೇಶ ತಲ್ಲೂರು, ಶಾಲೆಯ ಸಿಬ್ಬಂದಿಗಳಾದ ಆಯಿಷಾ,ವಿಕ್ಟೋರಿಯಾ ನಾನ್ಸಿ,ಶಬ್ಬಿರ್,ಹಾಗೂ ವಿಧ್ಯಾರ್ಥಿಗಳು ಸೇರಿದಂತೆ ಇತರರು ಇದ್ದರು.

