ಶಾಸಕ ಗಾಲಿ ಜನಾರ್ದನ್ ರೆಡ್ಡಿಗೆ ಮತ್ತೊಂದು ಬಿಗ್ ಶಾಕ್!
ಹೌದು, ಜನಾರ್ದನ ರೆಡ್ಡಿ ಅಕ್ರಮ ಗಣಿಕಾರಿಕೆ ನಡೆಸಿದ್ದು ಬಯಲಾಗುತ್ತಿದ್ದಂತೆ, ಶಾಸಕ ಸ್ಥಾನ ಏನಾಗುತ್ತೆ ಅನ್ನೋ ಪ್ರಶ್ನೆ ಎಲ್ಲರಿಗೂ ಮೂಡಿತ್ತು. ಇದೀಗ ಜನಾರ್ದನ ರೆಡ್ಡಿಯವರ ಶಾಸಕ ಸ್ಥಾನವನ್ನು ಅನರ್ಹತೆಗೊಳಿಸಿ ಆದೇಶ ಹೊರಡಿಸಿದೆ.
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಗಾಲಿ ಜನಾರ್ದನ ರೆಡ್ಡಿ ಹೆಸರು ಮತ್ತೆ ಮುನ್ನೆಲೆ ಬಂದಿದೆ. ಗಂಗಾವತಿ ಶಾಸಕರಾಗಿದ್ದ ಗಾಲಿ ಜನಾರ್ಧನ ರೆಡ್ಡಿಯವರು ಕಳೆದ 14 ವರ್ಷಗಳಿಂದ ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿ ಕಾನೂನೂ ಹೋರಾಟಗಳನ್ನು ಎದುರಿಸುತ್ತಲೇ ಇದ್ದರು. ಮೇ 6 ರಂದು ಗಾಲಿ ಜನಾರ್ದನ ರೆಡ್ಡಿಯವರು ಅಕ್ರಮ ಗಣಿಗಾರಿಕೆ ನಡೆಸಿದ್ದಾರೆಂದು ಹೈದ್ರಾಬಾದ್ ನಾಂಪಲ್ಲಿ ಸಿಬಿಐ ಕೋರ್ಟ್ ತೀರ್ಪು
*ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಗಾಲಿ ಜನಾರ್ದನ ರೆಡ್ಡಿ ಹೆಸರು ಮತ್ತೆ ಮುನ್ನೆಲೆ ಬಂದಿದೆ. ಮಾಜಿ ಕರ್ನಾಟಕ ಸಚಿವ ಮತ್ತು ಗಂಗಾವತಿ ಶಾಸಕರಾಗಿದ್ದ ಗಾಲಿ ಜನಾರ್ಧನ ರೆಡ್ಡಿಯವರು ಕಳೆದ 14 ವರ್ಷಗಳಿಂದ ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿ ಕಾನೂನೂ ಹೋರಾಟಗಳನ್ನು ಎದುರಿಸುತ್ತಲೇ ಇದ್ದರು. ಮೇ 6 ರಂದು ಗಾಲಿ ಜನಾರ್ದನ ರೆಡ್ಡಿಯವರು ಅಕ್ರಮ ಗಣಿಗಾರಿಕೆ ನಡೆಸಿದ್ದಾರೆಂದು ಹೈದ್ರಾಬಾದ್ ನಾಂಪಲ್ಲಿ ಸಿಬಿಐ ಕೋರ್ಟ್ ತೀರ್ಪು ನೀಡಿದ್ದು, 7 ವರ್ಷ ಜೈಲು ಶಿಕ್ಷೆಯನ್ನು ಕೂಡಾ ವಿಧಿಸಿತ್ತು. ಇನ್ನು ಈ ಪ್ರಕರಣದಲ್ಲಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಮಾತ್ರವಲ್ಲದೆ, ಇನ್ನೂ ಹಲವರು ಪಾಲ್ಗೊಂಡಿದ್ದರು ಎಂದು ವರದಿಯಾಗಿತ್ತು. ಇದೀಗ ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಬಿಗ್ ಶಾಕ್ ಎದುರಾಗಿದೆ.
ಹೌದು, ಜನಾರ್ದನ ರೆಡ್ಡಿ ಅಕ್ರಮ ಗಣಿಕಾರಿಕೆ ನಡೆಸಿದ್ದು ಬಯಲಾಗುತ್ತಿದ್ದಂತೆ, ಶಾಸಕ ಸ್ಥಾನ ಏನಾಗುತ್ತೆ ಅನ್ನೋ ಪ್ರಶ್ನೆ ಎಲ್ಲರಿಗೂ ಮೂಡಿತ್ತು. ಇದೀಗ ಜನಾರ್ದನ ರೆಡ್ಡಿಯವರ ಶಾಸಕ ಸ್ಥಾನವನ್ನು ಅನರ್ಹತೆಗೊಳಿಸಿ ಆದೇಶ ಹೊರಡಿಸಿದೆ.
