ಅತಿಯಾದ ಕೆಲಸದ ಒತ್ತಡ ಕಡಿಮೆ ಸಂಬಳ..ವಿಜಯಲಕ್ಷ್ಮಿ ಆಚಾರ್ಯ..

ಅತಿಯಾದ ಕೆಲಸದ ಒತ್ತಡ ಕಡಿಮೆ ಸಂಬಳ..ವಿಜಯಲಕ್ಷ್ಮಿ ಆಚಾರ್ಯ..

ಗಂಗಾವತಿ.09 ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದಿಂದ ಇಂದು ಗಂಗಾವತಿ ಗ್ರೇಟ್ ಟು ತಹಶಿಲ್ದಾರ ಮಹಾಂತಗೌಡ ಪಾಟೀಲ್ ಇವರಿಗೆ ನಗರ ಘಟಕ ಅಧ್ಯಕ್ಷೆ ವಿಜಯಲಕ್ಷ್ಮಿ ಆಚಾರ್ಯ ಇವರು ಮನವಿಯನ್ನು ಸಲ್ಲಿಸಿದರು.ನಂತರ ಮಾತನಾಡಿದ ನಗರ ಘಟಕ ಅಧ್ಯಕ್ಷೆ ವಿಜಯಲಕ್ಷ್ಮಿ ಆಚಾರ್ಯ ಕರ್ನಾಟಕ ರಾಜ್ಯ ಆರೋಗ್ಯ ಸಚಿವರಾದ ದಿನೇಶ್ ಗುಂಡುರಾವ್ ಹಾಗೂ ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ರಾಜ್ಯಸಭೆಗೆ ಮಾಹಿತಿ ನೀಡಿರುವಂತೆ ರಾಷ್ಟ್ರೀಯ ಆರೋಗ್ಯ ಮಿಷನ್‌ ಮಿಷನ್ ಸ್ಟೀರಿಂಗ್ ಗ್ರೂಪ್ ಆಶಾ ಕಾರ್ಯಕರ್ತೆಯರ ಪ್ರೋತ್ಸಾಹ ಧನವನ್ನು ಹೆಚ್ಚಿಸಲು ನಿರ್ಧರಿಸಿದೆ. ಮತ್ತು ಸರ್ಕಾರ ಈ ನಿಟ್ಟಿನಲ್ಲಿ ಮುಂದುವರಿಯಲಿದೆ ಎಂದು ತಿಳಿಸಿದಂತೆ ಕೂಡಲೇ ಕೇಂದ್ರದಿಂದ ಆದೇಶಿಸಬೇಕು. ಮತ್ತುಕೇಂದ್ರೀಯ ಕಾರ್ಮಿಕ ಸಂಘಟನೆಗಳು ಮತ್ತು ಫೆಡರೇಷನ್‌ಗಳ ಕರೆಯ ಮೇರೆಗೆ ಕೇಂದ್ರ ಸರ್ಕಾರದ ಕಾರ್ಮಿಕ-ವಿರೋಧಿ, ಜನ-ವಿರೋಧಿ ಹಾಗೂ ಕಾರ್ಪೊರೇಟ್ ಪರವಾದ ನೀತಿಗಳನ್ನು ಹಿಂಪಡೆಯಲು ಆಗ್ರಹಿಸಿ. ಜುಲೈ 9, 2025 ಅಖಿಲ ಭಾರತ ಸಾರ್ವತ್ರಿಕ ಮುಷ್ಕರದ ದಿನದಂದು ಸಲ್ಲಿಸುತ್ತಿರುವ ಪತ್ರನಮ್ಮ ಸಂಘಟನೆ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ, ಸಂಯೋಜಿತ AIUTUC ಆಗಿದೆ. AIUTUC ಸೇರಿದಂತೆ 10 ಕೇಂದ್ರೀಯ ಕಾರ್ಮಿಕ ಸಂಘಟನೆಗಳು ಮತ್ತು ಫೆಡರೇಷನ್‌ಗಳು ತಮ್ಮ ಕೇಂದ್ರ ಬಿಜೆಪಿ ಸರ್ಕಾರದ ಕಾರ್ಮಿಕ ವಿರೋಧಿ, ಜನ ವಿರೋಧಿ ನೀತಿಗಳ ವಿರುದ್ಧ, ವಿವಿಧ ಬೇಡಿಕೆಗಳಈಡೇರಿಕೆಗೆ ಒತ್ತಾಯಿಸಿ ದೇಶದಾದ್ಯಂತ ತೀವ್ರವಾದ ಹೋರಾಟಗಳನ್ನು ಬೆಂಬಲಿಸುವ ಜೊತೆಗೆ ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಲಾಗುತ್ತದೆ ಎಂದು ಹೇಳಿದರು ಬೆಳೆಸುತ್ತಲೇ ಇವೆ.

ಆದರೆ ತಮ್ಮ ಕೇಂದ್ರ ಸರ್ಕಾರವು ದೇಶದ ಕಾರ್ಮಿಕ ವರ್ಗದ ಹಲವಾರು ಪ್ರಮುಖ ಬೇಡಿಕೆಗಳನ್ನು ಮನ್ನಿಸಿ ಅವುಗಳಿಗೆ ಪರಿಹಾರ ಕ್ರಮಗಳನ್ನು ಕೈಗೊಳ್ಳದೆ ಈ ಹಿಂದಿನ ಕೇಂದ್ರ ಕಾಂಗ್ರೆಸ್ ಸರ್ಕಾರದ ಅವೇ ಜನವಿರೋಧಿ, ಕಾರ್ಮಿಕ ವಿರೋಧಿ ನೀತಿಗಳಿಗೆ ಇನ್ನಷ್ಟು ಜನವಿರೋಧಿ ನೀತಿಗಳನ್ನು ಸೇರಿಸಿ, ಅತೀ ವೇಗವಾಗಿ ಜಾರಿಗೊಳಿಸುತ್ತಿರುವುದನ್ನು ಪ್ರತಿಭಟಿಸಿ, ಮತ್ತು ಕಾರ್ಮಿಕರ ಹಕ್ಕೊತ್ತಾಯಗಳನ್ನು ಪರಿಗಣಿಸಲು ಆಗ್ರಹಿಸಿ ಅಖಿಲ ಭಾರತ ಸಾರ್ವತ್ರಿಕ ಮುಷ್ಕರಕ್ಕೆ ಜುಲೈ 9, 2025 ರಂದು ಕರೆ ನೀಡಿವೆ.ಪ್ರಮುಖ ಸಾಮಾಜಿಕ ಸೇವಾ ಕ್ಷೇತ್ರಗಳಾದ ಆರೋಗ್ಯ, ಶಿಕ್ಷಣ, ಮಹಿಳೆ ಮತ್ತು ಮಕ್ಕಳ ಕಲ್ಯಾಣಕ್ಕಾಗಿ ಸರ್ಕಾರದ ಇಲಾಖೆಗಳಲ್ಲಿ ಕೆಳಸ್ತರದ ಜನತೆಗೆ ಸೇವೆ ಸಲ್ಲಿಸುತ್ತಿರುವ ಆಶಾ, ಅಂಗನವಾಡಿ, ಬಿಸಿಯೂಟ ಕಾರ್ಮಿಕರು ಕಳೆದ ಹಲವಾರು ದಶಕಗಳಿಂದ ಅತ್ಯಂತ ನಿಕೃಷ್ಟ ವೇತನದಲ್ಲಿ ಸೇವೆ ಸಲ್ಲಿಸುತ್ತಿರುವರು. ಕೇಂದ್ರ ಸರ್ಕಾರದ ಯೋಜನೆಗಳಲ್ಲಿ ಗೌರವಧನ, ಪ್ರೋತ್ಸಾಹಧನದ ಹೆಸರಿನಲ್ಲಿ ದೇಶದ ಲಕ್ಷಾಂತರ ಮಹಿಳ= ಕಾರ್ಮಿಕರನ್ನು ಕಾರ್ಯಕರ್ತೆಯರೆಂದು ಸೇವೆ ಪಡೆದುಕೊಳ್ಳುತ್ತಾ, ಕಾರ್ಮಿಕ ಹಕ್ಕುಗಳಿಂದ ವಂಚಿತರನ್ನಾಗಿ ಮಾಡಿರುವರು. ಕನಿಷ್ಟ ವೇತನ ಸೇವಾ ಭದ್ರತೆ ಇಲ್ಲದೆ ಹಗಲಿರುಳು ಸೇವೆ ಸಲ್ಲಿಸುತ್ತಿರುವರು. ಸರ್ಕಾರ ಇವರ ಈ ಮಹಿಳಾ ಕಾರ್ಮಿಕರಿಗೆ ಕೇಂದ್ರ ಸರ್ಕಾರ ಶಾಸನಬದ್ಧ ಕನಿಷ್ಟ ವೇತನ ಮತ್ತು ಸಾಮಾಜಿಕ ಭದ್ರತೆ ಒದಗಿಸಿ ಖಾಯಂ ಮಾಡಬೇಕು ಎಂದರು.ಈ ದಿನದಂದು ರಾಜ್ಯದ ಕರ್ನಾಟಕ ರಾಜ್ಯದ ಎಲ್ಲಾ ಆಶಾ ಕಾರ್ಯಕರ್ತೆಯರು ಮಾನ್ಯ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರಿಗೂ ಹಾಗೂ ಕೇಂದ್ರ ಆರೋಗ್ಯ ಮಂತ್ರಿಗಳಾದ ಶ್ರೀ ಜೆ.ಪಿ. ನಡ್ಡಾ ಅವರಿಗೂ ಕೇಂದ್ರ ಸರ್ಕಾರಕ್ಕೂ ಈ ಮೂಲಕ ಆಗ್ರಹಿಸುತ್ತೇವೆ.

ಈ ಸಂದರ್ಭದಲ್ಲಿ ಗಂಗಾವತಿ ಆಶಾ ಕಾರ್ಯಕರ್ತೆಯರ ಸಂಘದ ಕಾರ್ಯದರ್ಶಿ ಲಾಲಬಿ, ಸಂಘದ ಸದಸ್ಯರಾದ ಆಪ್ರೀನ್ ಬೇಗಂ,ಗೌಸೀಯಾ,ಸುಮಾ ಸಿದ್ದೇಶ,ಮೀನಾಕ್ಷಿ, ಸರೋಜಬಾಯಿ,ದೀಪಾ,ಜಯ ಸಮೀರಾಬೇಗಂ,ರೇಖಾ,ಈರಮ್ಮ,ಲಕ್ಷ್ಮೀದೇವಿ, ಸರ್ವಮಂಗಳ,ಲಲಿತಾ ಹಿರೇಮಠ, ಜ್ಯೋತಿ, ಸಂಗೀತ, ಶರಣಮ್ಮ,ಸೇರಿದಂತೆ ಇತರರು ಇದ್ದರು.

Leave a Reply

Your email address will not be published. Required fields are marked *