ಯಾದಗಿರಿ ನಗರದ ಸುಭಾಷ್ ವೃತ್ತದಲ್ಲಿ ಕಾಂಗ್ರೆಸ್‌ನಿಂದ ದಿಢೀರ್ ಮಿಂಚಿನ ಪ್ರತಿಭಟನೆ: ಸಚಿವ ಸತೀಶ್ ಜಾರಕಿಹೊಳಿ ಮೇಲೆ ಇಡಿ ದಾಳಿ ಖಂಡಿಸಿ ಕೇಂದ್ರದ ವಿರುದ್ಧ ಆಕ್ರೋಶ…
ಯಾದಗಿರಿ, ಸೆ.08:* ಕರ್ನಾಟಕ ರಾಜ್ಯದ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುವ ಕುತಂತ್ರದ ಭಾಗವಾಗಿ ಅಹಿಂದ ನಾಯಕ, ಜನಪರ ಸಚಿವರಾದ ಸನ್ಮಾನ್ಯ ಶ್ರೀ ಸತೀಶ್ ಜಾರಕಿಹೊಳಿ ಅವರ ಮೇಲೆ ಕೇಂದ್ರ ಸರ್ಕಾರ ಇಡಿ ದಾಳಿ ಮಾಡಿಸುತ್ತಿದೆ ಎಂದು ಆರೋಪಿಸಿ, ಯಾದಗಿರಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಇಂದು ಯಾದಗಿರಿ ನಗರದ ಸುಭಾಷ್ ವೃತ್ತದಲ್ಲಿ ದಿಢೀರ್ ಮಿಂಚಿನ ಪ್ರತಿಭಟನೆ ನಡೆಸಲಾಯಿತು.ಕೇಂದ್ರದ ಬಿಜೆಪಿ ಸರ್ಕಾರವು ಇಡಿ, ಸಿಬಿಐ ನಂತಹ ಸ್ವಾಯತ್ತ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರ ಬಲ ಕುಗ್ಗಿಸುವ ಕೆಲಸ ಮಾಡುತ್ತಿದೆ. ಈ ರೀತಿಯ ಕುತಂತ್ರಕ್ಕೆ ಪಕ್ಷದ ಹಿರಿಯ ನಾಯಕರು ಜಗ್ಗುವುದಿಲ್ಲ, ಬಗ್ಗುವುದಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.*ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಮುಖಂಡರು:*ಈ ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್‌ನ ಹಿರಿಯ ಮುಖಂಡರಾದ *ಭೀಮರಾಯ ಠಾಣೆಗುಂದಿ, ಅನಂತ್ ನಾಯಕ, ಗೌಡಪ್ಪಗೌಡ ಆಲ್ದಾಳ, ವೆಂಕಟೇಶ ಬೇಟೆಗಾರ, ಭೀಮಣ್ಣ ಮೇಟಿ, ಲಕ್ಷ್ಮಣ್ ನಾಯಕ* ಅವರು ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.”ಇಡಿ ದಾಳಿಯ ಹೆಸರಿನಲ್ಲಿ ಕಾಂಗ್ರೆಸ್ ನಾಯಕರನ್ನು ಹೆದರಿಸುವ ಕೆಲಸ ಕೇಂದ್ರ ಸರ್ಕಾರ ಮಾಡುತ್ತಿದೆ. ಸತೀಶ್ ಜಾರಕಿಹೊಳಿ ಅವರು ಅಹಿಂದ ವರ್ಗದ ಪ್ರಬಲ ನಾಯಕರು, ಅವರನ್ನು ಗುರಿಯಾಗಿಸಿಕೊಂಡು ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಯತ್ನಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಹಮ್ಮಿಕೊಂಡು ಬಿಜೆಪಿ ಪಕ್ಷಕ್ಕೆ ತಕ್ಕ ಪಾಠ ಕಲಿಸುತ್ತೇವೆ” ಎಂದು ಎಚ್ಚರಿಕೆ ನೀಡಿದರು.ಈ ಸಂದರ್ಭದಲ್ಲಿ ಪಕ್ಷದ ಹಿರಿಯ ಮುಖಂಡ *ಸುದರ್ಶನ್* ಸೇರಿದಂತೆ ಹಲವು ಹಿರಿಯ ಮುಖಂಡರು, ಯುವ ಕಾಂಗ್ರೆಸ್ ಕಾರ್ಯಕರ್ತರು, ಪಕ್ಷದ ಪದಾಧಿಕಾರಿಗಳು ಉಪಸ್ಥಿತರಿದ್ದರು.*ವರದಿ: ಯಾದಗಿರಿ*

