ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಮೂಡಿಸಲು ಪ್ರಾಯೋಗಾಲಯ ಅಗತ್ಯ : ಚಂದ್ರಯ್ಯ ಸೊಪ್ಪಿನಮಠ..

ಬಳ್ಳಾರಿ / ಕಂಪ್ಲಿ : ತಾಲೂಕಿನ ಸಣಾಪುರ ಗ್ರಾಪಂ ವ್ಯಾಪ್ತಿಯ ಇಟಗಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಶಾಲಾ ಪ್ರಯೋಗಾಲಯವನ್ನು ಎಸ್‌ಡಿಎಂಸಿ ಅಧ್ಯಕ್ಷ ಅಧ್ಯಕ್ಷ ಕೆ.ವಿರೇಶ ಉದ್ಘಾಟಿಸಿದರು. ನಂತರ ನಡೆದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಗುರು ಚಂದ್ರಯ್ಯ ಸೊಪ್ಪಿನಮಠ ಮಾತನಾಡಿ, ಇಲ್ಲಿನ ಶಾಲೆಯಲ್ಲಿ ಶಾಲಾ ಪ್ರಯೋಗಾಲಯ ಉದ್ಘಾಟನೆ ಮಾಡಲಾಯಿತು. ಇದರಿಂದ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವನೆ ಮೂಡಿಸಲು ಮತ್ತು ಪ್ರಾಯೋಗಿಕ ಜ್ಞಾನವನ್ನು ಹೆಚ್ಚಿಸಲು ಪ್ರಮುಖ ಹೆಜ್ಜೆಯಾಗಿದೆ. ಮಕ್ಕಳು ತಮ್ಮಲ್ಲಿರುವ ಪ್ರಯೋಗದ ಕೌಶಲ್ಯಗಳನ್ನು ಪ್ರದರ್ಶಿಸಬೇಕಾಗಿದೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪ್ರಯೋಗಕ್ಕೆ ಹೆಚ್ಚಿನ ಪ್ರಾಮುಖ್ಯತೆ ಇದೆ ಎಂದರು.ನಂತರ ಸಿಆರ್‌ಪಿ ರೇಣುಕಾರಾದ್ಯ ಮಾತನಾಡಿ, ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ, ಸೃಜನಶೀಲತೆ ಮತ್ತು ಪ್ರಾಯೋಗಿಕ ಜ್ಞಾನವನ್ನು ಉತ್ತೇಜಿಸುವ ವೇದಿಕೆಯಾಗಿದೆ. ಇದು ಪಠ್ಯಪುಸ್ತಕದ ಜ್ಞಾನವನ್ನು ಮೀರಿ, ಪರಿಸರ ಸ್ನೇಹಿ ಮಾದರಿಗಳು, ತಾಂತ್ರಿಕ ಆವಿಷ್ಕಾರಗಳು ಮತ್ತು ವೈಜ್ಞಾನಿಕ ತತ್ವಗಳನ್ನು ಪ್ರಾಯೋಗಿಕವಾಗಿ ಪ್ರದರ್ಶಿಸಲು, ಪರಿಶೋಧಿಸಲು ಮತ್ತು ಅರ್ಥಮಾಡಿಕೊಳ್ಳಲು ವಿದ್ಯಾರ್ಥಿಗಳಿಗೆ ಅವಕಾಶ ನೀಡುತ್ತದೆ ಎಂದರು. ಈ ಸಂದರ್ಭದಲ್ಲಿ ಇಸಿಒ ರೇವಣ್ಣ, ಎನ್‌ಪಿಎಸ್ ರಾಜ್ಯಾಧ್ಯಕ್ಷ ನಾಗನಗೌಡ ಎಂ.ಎ, ಹಿರಿಯ ಶಿಕ್ಷಕರಾದ ರಾಜಶೇಖರ, ರೇವಣ್ಣ, ಎಸ್‌ಡಿಎಂಸಿ ಸದಸ್ಯರಾದ ವೆಂಕಟೇಶ, ಅಗಸರ ರಾಜ, ಮಂಜುನಾಥ ಸಿಂಗಾಪುರ, ಮಾಬುಸಾಬ್, ಮುತ್ತುರಾಜ, ಲೋಕಪ್ಪ, ಸಹ ಶಿಕ್ಷಕರಾದ ಸವಿತಾ ಎಂ.ಆರ್, ಸುಧಾ ಇ, ಮೃತ್ಯುಂಜಯ ಸೇರಿದಂತೆ ಇತರರು ಇದ್ದರು.

ವರದಿ : ಜಿಲಾನಸಾಬ್ ಬಡಿಗೇರ್
