ಬಾಲಿವುಡ್‌ನ ಹಿರಿಯ ನಟ ಧರ್ಮೇಂದ್ರ ಆಸ್ಪತ್ರೆಗೆ ದಾಖಲು: ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ..

ಬಾಲಿವುಡ್‌ನ ಹಿರಿಯ ನಟ ಧರ್ಮೇಂದ್ರ ಆಸ್ಪತ್ರೆಗೆ ದಾಖಲು: ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ..

ಮುಂಬೈ : ಬಾಲಿವುಡ್‌ನ ಹೀ ಮ್ಯಾನ್, ಎವರ್‌ಗ್ರೀನ್ ಸ್ಟಾರ್, ಆಕ್ಷನ್ ಕಿಂಗ್ ಅಂತಲೇ ಜನಪ್ರಿಯರಾಗಿರುವ ಹಿರಿಯ ನಟ ಧರ್ಮೇಂದ್ರ (89) ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಕಳೆದ ಕೆಲವು ದಿನಗಳಿಂದ ಧರ್ಮೇಂದ್ರ ಅವರು ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದರು. ನ.10 ಬೆಳಿಗ್ಗೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರ ಸ್ಥಿತಿ ಗಂಭೀರವಾಗಿದ್ದು, ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಹಾಗೂ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.ಆರು ದಶಕಗಳ ವೃತ್ತಿಜೀವನದಲ್ಲಿ ಧರ್ಮೇಂದ್ರ ಅವರು ಹಿಂದಿ ಚಿತ್ರರಂಗದಲ್ಲಿ ತಮ್ಮ ಛಾಪನ್ನು ಮೂಡಿಸಿದ್ದಾರೆ. 1960ರಲ್ಲಿ ʻದಿಲ್ ಭೀ ತೇರಾ ಹಮ್ ಭೀ ತೇರೆʼ ಮೂಲಕ ಬಾಲಿವುಡ್‌ಗೆ ಪಾದಾರ್ಪಣೆ ಮಾಡಿದರು. ಅಲ್ಲಿಂದ ಪ್ರಾರಂಭವಾಗಿ ಬಂದಿನಿ , ಅನುಪಮಾ, ಶೋಲೆ, ಚುಪ್ಕೆ ಚುಪ್ಕೆ, ಮೇರಾ ಗಾಂವ್ ಮೇರಾ ದೇಶ್ ಮತ್ತು ಡ್ರೀಮ್ ಗರ್ಲ್ ಸೇರಿದಂತೆ ಹಲವುಗಳಲ್ಲಿ ಸಿನಿಮಾಗಳಲ್ಲಿ ನಟಿಸಿದ್ದಾರೆ.2025ರ ಆರಂಭದಲ್ಲಿ ಧರ್ಮೇಂದ್ರ ಅವರು ಶಾಹಿದ್ ಕಪೂರ್ ಮತ್ತು ಕೃತಿ ಸನೋನ್ ನಟನೆಯ ʻತೇರಿ ಬಾತೋ ಮೇ ಐಸಾ ಉಲ್ಜಾ ಜಿಯಾʼ ಸಿನಿಮಾದಲ್ಲಿ ಕೊನೆಯ ಬಾರಿ ಕಾಣಿಸಿಕೊಂಡಿದ್ದರು. ಇನ್ನೂ ಡಿಸೆಂಬರ್‌ 25ರಂದು ತೆರೆಕಾಣಲಿರುವ ʻಇಕ್ಕಿಸ್ʼ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ.ವರದಿ : ಜಿಲಾನಸಾಬ್ ಬಡಿಗೇರ್

Leave a Reply

Your email address will not be published. Required fields are marked *