ಮುರಡಿಯಲ್ಲಿ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮ.

ಮುರಡಿಯಲ್ಲಿ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮ.

ಯಲಬುರ್ಗಾ.ಡಿ.13 ತಾಲೂಕು ಬೇವೂರು ಪೊಲೀಸ್ ಠಾಣೆವತಿಯಿಂದ ಮುರಡಿ ಡಾ.ಗುರುಚಾರ ನರಗುಂದ ಕಾಲೇಜು ಆಫ್‌ ಫಾರ್ಮಸಿಯಲ್ಲಿ ಅಪರಾಧ ತಡೆ ಮಾಸಾಚರಣೆ ಪ್ರಯುಕ್ತ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ನಂತರ ಮಾತನಾಡಿದ ಬೇವೂರು ಪೊಲೀಸ್ ಠಾಣೆಯ ಪಿಎಸ್ಐ ಎಸ್.ಪಿ.ನಾಯ್ಕ್ ದೈನಂದಿನ ಚಟುವಟಿಕೆಗಳಲ್ಲಿ ನಡೆಯುವ ಅಪರಾಧಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಿದರು.ಪೊಕ್ಸೋ ಕಾಯಿದೆ 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಮೇಲೆ ನಡೆಯುವ ಲೈಂಗಿಕ ಕಿರುಕುಳಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಪೊಕ್ಸೋ ಪ್ರಕರಣಗಳ ಕುರಿತು ಜಾಗೃತಿ ಮೂಡಿಸಿದರು.ಬಾಲ್ಯ ವಿವಾಹ ನಿಷೇಧ: ಹುಡುಗನಿಗೆ 21 ವರ್ಷ ಹುಡುಗಿಗೆ 18 ವರ್ಷ ಆಗದಿದ್ದರೆ ಅದು ಬಾಲ್ಯ ವಿವಾಹವಾಗುತ್ತದೆ ಮತ್ತು ವಿವಾಹ ಮಾಡಿದವರ ಹಾಗೂ ಪಾಲ್ಗೊಂಡವರ ಮೇಲೆ ಕೇಸು ದಾಖಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಬೈಕ್ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಎಂದು ಸೂಚಿಸಿದರು. ಜತೆಗೆ, ವಾಹನ ಚಾಲನೆ ಮಾಡುವಾಗ ವಿಮೆ, ಚಾಲನಾ ಪರವಾನಗಿ ಸೇರಿದಂತೆ ಎಲ್ಲ ಅಗತ್ಯ ದಾಖಲೆಗಳನ್ನು ಜೊತೆಯಲ್ಲಿ ಇಟ್ಟುಕೊಳ್ಳಬೇಕು ಎಂದು ಸಲಹೆ ನೀಡಿದರು ಹಾಗೂ ಕಾನೂನು ಪಾಲಿಸುವಂತೆ ಮನವಿ ಮಾಡಿದರು.ಈ ಸಂದರ್ಭದಲ್ಲಿ ಕಾಲೇಜು ಪ್ರಾಂಶುಪಾಲರು ಹಾಗೂ ವಿಧ್ಯಾರ್ಥಿಗಳು ಹಾಗೂ ಪೊಲೀಸ್ ಸಿಬ್ಬಂದಿಗಳಾದ ಗವಿಸಿದ್ದಯ್ಯ ಹಿರೇಮಠ, ಬಸವರಾಜ ಸೇರಿದಂತೆ ಇತರರು ಇದ್ದರು.

Leave a Reply

Your email address will not be published. Required fields are marked *