ವಿದ್ಯಾರ್ಥಿಗಳ ಪ್ರತಿಭೆಗಳ ಅನಾವರಣವೇ ಪ್ರತಿಭಾ ಕಾರಂಜಿಯ ಮೂಲ ಉದ್ದೇಶ.. ಡಾಕ್ಟರ್ ಕೊಟ್ಟೂರು ಮಹಾಸ್ವಾಮಿಗಳು…

ಗಂಗಾವತಿ… ವಿದ್ಯಾರ್ಥಿಗಳಲ್ಲಿ ಅಡಕವಾಗಿರುವ ಸೂಪ್ತ ಪ್ರತಿಭೆಗಳನ್ನು ಅನಾವರಣ ಗೊಳಿಸುವುದೇ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಮೂಲ ಉದ್ದೇಶವಾಗಿದೆ ಎಂದು ಶ್ರೀ ಕೊಟ್ಟೂರೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾಕ್ಟರ್ ಕೊಟ್ಟೂರು ಮಹಾಸ್ವಾಮಿಗಳು ಹೇಳಿದರು.
ಅವರು ಮಂಗಳವಾರದಂದು ಕರ್ನಾಟಕ ಸರ್ಕಾರ ಕೊಪ್ಪಳ ಜಿಲ್ಲಾಆಡಳಿತ. ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಗಂಗಾವತಿ ಶಿಕ್ಷಣ ಇಲಾಖೆ ಸೇರಿದಂತೆ ಶ್ರೀ ಕೊಟ್ಟೂರೇಶ್ವರ ವಿದ್ಯಾವರ್ಧಕ ಸಂಘ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಿದ ಗಂಗಾವತಿ ಬ್ಲಾಕ್ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಸಮಾರಂಭವನ್ನು ಉದ್ಘಾಟಿಸಿ ಹಾಗೂ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದರು. ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಸಂಸ್ಕಾರವನ್ನು ಬೆಳೆಸುವ ನಿಟ್ಟಿನಲ್ಲಿ ಶಿಕ್ಷಕರು ಮುಂದಾಗಬೇಕಿದೆ. ಸದರಿ ವಿದ್ಯಾವರ್ಧಕ ಸಂಘವು ಪೂರ್ವ ಪ್ರಾರ್ಥಮಿಕದಿಂದ ಉನ್ನತ ಮಟ್ಟದ ವೈವಿಧ್ಯಮಯ ಒಟ್ಟು ಹದಿನೆಂಟು ಶಿಕ್ಷಣವನ್ನು ಕಲ್ಪಿಸಲಾಗುತ್ತಿದ್ದು. ಹುಬ್ಬಳ್ಳಿಯ ದೇಶ್ಪಾಂಡೆ ಸಿಲ್ಕ್ ಒಪ್ಪಂದದ ಹಿನ್ನೆಲೆಯಲ್ಲಿ ಉದ್ಯೋಗ ಅವಕಾಶವನ್ನು ಕಲ್ಪಿಸಲಾಗುತ್ತದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ನಟೇಶ ಚನ್ನಬಸಯ್ಯಸ್ವಾಮಿ. ಶರಣೆ ಗೌಡ ಮಾಲಿ ಪಾಟೀಲ್.. ವಿಶ್ವನಾಥ್. ಅಕ್ಷರ ದಾಸೋಹದ ರೋಷಣ್ಣ. ಕ್ಷೇತ್ರ ಸಮನ್ವಯ ಅಧಿಕಾರಿ ಮಂಜುನಾಥ್ ನೋಡಲ್ ಅಧಿಕಾರಿ ಆನಂದ್ ನಾಗಮ್ಮನವರ್. ಸೇರಿದಂತೆ ಮತ್ತಿ ತರರು ಉಪಸ್ಥಿತರಿದ್ದರು. ತಾಲೂಕಿನ ವಲಯ ಮಟ್ಟದಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದುಕೊಂಡ ವಿದ್ಯಾರ್ಥಿಗಳು ವೈವಿಧ್ಯಮಯ ಸ್ಪರ್ಧೆಗಳನ್ನು ಸಂಘದ ಐದು ಭಾಗಗಳಲ್ಲಿ ಸ್ಪರ್ಧೆ ನಡೆಸಲಾಯಿತು


