ಎಸ್‌ಕೆಎನ್‌ಜಿ ಕಾಲೇಜಿನ ಹಿರಿಮೆಗೆ ರ‍್ಯಾಂಕ್‌ಗಳ ಗರಿಮೆ.


ಗಂಗಾವತಿ,ಜೂ.13ನಗರದ ಶ್ರೀ ಕೊಲ್ಲಿ ನಾಗೇಶ್ವರರಾವ್ ಗಂಗಯ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸ್ನಾತಕೋತ್ತರ ವಿವಿಧ ವಿಭಾಗಗಳಲ್ಲಿ ಅತ್ಯುತ್ತಮ ಅಂಕ ಗಳಿಸುವ ಮೂಲಕ ಕಾಲೇಜಿಗೆ 6 ರ‍್ಯಾಂಕ್ ತಂದು ಕೀರ್ತಿ ಹೆಚ್ಚಿಸಿದ್ದಾರೆ ಎಂದು ಪ್ರಾಂಶುಪಾಲರಾದ ಡಾ.ಮುಮ್ತಾಜ್ ಬೇಗಂ ಅವರು ಹರುಷ ವ್ಯಕ್ತಪಡಿಸಿದ್ದಾರೆ 2023-24ನೇ ಸಾಲಿನಲ್ಲಿ ಕಾಲೇಜಿನ ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗದಲ್ಲಿ ಹೇಮಂತ್ ಕುಮಾರ್ ಸಾವಂತ್(ಶೇ.73.54), ಯಮನೂರಪ್ಪ(ಶೇ.72.5) ಫಲಿತಾಂಶದೊಂದಿಗೆ ಕಾಲೇಜಿಗೆ ಕ್ರಮವಾಗಿ ಮೊದಲ ಮತ್ತು ಎರಡನೇ ರ‍್ಯಾಂಕ್ ಹಾಗೂ ವಿಶ್ವವಿದ್ಯಾಲಯಕ್ಕೆ ಕ್ರಮವಾಗಿ ಎರಡು ಮತ್ತು ಮೂರನೇ ರ‍್ಯಾಂಕ್ ಗಳಿಸಿದ್ದಾರೆ.ವಿಶೇಷವಾಗಿ ಪತ್ರಿಕೋದ್ಯಮ ಸ್ನಾತಕೋತ್ತರ ವಿಭಾಗದಲ್ಲಿ ಪ್ರತಿವರ್ಷವು ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ ಮಟ್ಟದಲ್ಲಿ ರ‍್ಯಾಂಕ್‌ಗಳನ್ನು ಪಡೆದುಕೊಂಡಿರುತ್ತಾರೆ. ಇದುವರೆಗೂ ವಿಭಾಗದಲ್ಲಿ 6 ಜನ ವಿದ್ಯಾರ್ಥಿಗಳು ರ‍್ಯಾಂಕ್‌ಗಳನ್ನು ಪಡೆದಿದ್ದು, 2023-24ನೇ ಸಾಲಿನಲ್ಲಿ ಹೇಮಂತ್‌ರಾವ್ ಸಾವಂತ್ ಹಾಗೂ ಯಮನೂರಪ್ಪ ಕ್ರಮವಾಗಿ ಎರಡು ಮತ್ತು ಮೂರನೇ ರ‍್ಯಾಂಕ್ ಗಳಿಸುವ ಮೂಲಕ ಕಾಲೇಜಿನ ಕೀರ್ತಿ ಹೆಚ್ಚಿಸಿದ್ದಾರೆ.ರ‍್ಯಾಂಕ್ ಪಡೆದಿರುವ ವಿದ್ಯಾರ್ಥಿಗಳಿಗೆ ಹಾಗೂ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗಕ್ಕೆ ಕಾಲೇಜಿನ ಪ್ರಾಚಾರ್ಯರು ಹಾಗೂ ಪ್ರಾಧ್ಯಾಪಕರು, ಉಪನ್ಯಾಸಕರ ಬಳಗ, ಸಿಬ್ಬಂದಿ ವರ್ಗ ಅಭಿನಂದನೆ ಸಲ್ಲಿಸಿದ್ದಾರೆ.
