ಕಲ್ಯಾಣ ಸಿರಿ’ ಸಂಪಾದಕ ಮಲ್ಲಿಕಾರ್ಜುನ ಹೊಸಕೇರಾ ಅವರ ಮನೆ ಕಳ್ಳತನ; ತಡವಾಗಿ ಬೆಳಕಿಗೆ ಬಂದ ಘಟನೆ..
ಗಂಗಾವತಿ: ನಗರದ ಗುಂಡಮ್ಮ ಕ್ಯಾಂಪ್ ಪ್ರದೇಶದಲ್ಲಿರುವ ‘ಕಲ್ಯಾಣ ಸಿರಿ’ ಪತ್ರಿಕೆಯ ಸಂಪಾದಕರಾದ ಮಲ್ಲಿಕಾರ್ಜುನ ಹೊಸಕೇರಾ ಅವರ ಮನೆಯಲ್ಲಿ ಕಳ್ಳತನ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.ಘಟನೆಯ ವಿವರ:ಮನೆಯ ಮಾಲೀಕ ಮಲ್ಲಿಕಾರ್ಜುನ ಹೊಸಕೇರಾ ಅವರು ಅನಾರೋಗ್ಯದ ನಿಮಿತ್ತ ಚಿಕಿತ್ಸೆಗಾಗಿ ಭಾನುವಾರದಂದು ಬೆಂಗಳೂರಿಗೆ ತೆರಳಿದ್ದರು. ಚಿಕಿತ್ಸೆ ಮುಗಿಸಿಕೊಂಡು ವಾಪಸ್ ಗಂಗಾವತಿಗೆ ಬಂದು ನೋಡಿದಾಗ, ಮನೆಯ ಬಾಗಿಲು ಮುರಿದು ಕಳ್ಳತನ ನಡೆದಿರುವುದು ಅವರ ಗಮನಕ್ಕೆ ಬಂದಿದೆ.ಮನೆಯಲ್ಲಿ ಕಳ್ಳತನವಾಗಿರುವ ಕುರಿತು ಸ್ಥಳೀಯ ಪೊಲೀಸ್ ಠಾಣೆಗೆ ತಕ್ಷಣವೇ ಮಾಹಿತಿ ನೀಡಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಪೊಲೀಸರು ತನಿಖೆಯನ್ನು ಮುಂದುವರೆಸಿದ್ದಾರೆ ಎಂದು ಸ್ವತಃ ಮನೆಯ ಮಾಲೀಕರಾದ ಮಲ್ಲಿಕಾರ್ಜುನ ಹೊಸಕೇರಾ ಅವರು ಮಾಧ್ಯಮಗಳ ಮುಂದೆ ತಿಳಿಸಿದ್ದಾರೆ.

