ಬೀಳ್ಕೊಡುಗೆ ಹಾಗೂ ಸ್ವಾಗತ ಸಮಾರಂಭ….

ಬೀಳ್ಕೊಡುಗೆ ಹಾಗೂ ಸ್ವಾಗತ ಸಮಾರಂಭ.

ಗಂಗಾವತಿ. ಸಮೀಪದ ಶ್ರೀ ರಾಮನಗರದ ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ 13 ರಂದು ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಳ್ಕೊಡುಗೆ ಹಾಗೂ 9ನೇ ತರಗತಿಯಿಂದ 10ನೇ ವರ್ಗಕ್ಕೆ ಆಗಮಿಸುವ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭವನ್ನು ಆಯೋಜಿಸಲಾಗಿತ್ತು ಈ ಸಂದರ್ಭದಲ್ಲಿ ಅಧ್ಯಕ್ಷತೆ ವಹಿಸಿ ಜಗನ್ನಾಥ್ ಆಲಂಪಲ್ಲಿ ಮಾತನಾಡಿ ವಿದ್ಯಾರ್ಥಿ ಜೀವನ ವಿಶೇಷವಾಗಿ ಹತ್ತನೆಯ ವರ್ಗದ ವಿದ್ಯಾರ್ಥಿಗಳಿಗೆ ಭವಿಷ್ಯ ರೂಪಿಸುವ ಶಿಕ್ಷಣ ವಾಗಿದ್ದು ಇಂತಹ ಸಂದರ್ಭದಲ್ಲಿ ವಿದ್ಯಾರ್ಥಿಗಳು ಏಕಾಗ್ರತೆಯಿಂದ ಅಧ್ಯಯನದ ಕಡೆಗೆ ಗಮನ ಹರಿಸಬೇಕು ಮುಂಬರುವ ಪರೀಕ್ಷೆಗಳಲ್ಲಿ ಅತ್ಯುತ್ತಮ ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ತಮ್ಮ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬೇಕೆಂದು ಕರೆ ನೀಡಿದರು. ಲಿಟಲ್ ಹಾರ್ಟ್ ಶಾಲೆಯ ಮುಖ್ಯೋಪಾಧ್ಯಾಯನಿ ಪ್ರಿಯಕುಮಾರಿ ಮಾತನಾಡಿ ಜೀವನದಲ್ಲಿ ಗುರಿ ಹೊಂದಿರಬೇಕು ಮುಂದೆ ಗುರಿ ಎಂದೆ ಗುರುವಿನ ಅನುಗ್ರಹ ಇದ್ದಲ್ಲಿ ವಿದ್ಯಾರ್ಥಿ ಜೀವನ ಸುಗಮವಾಗಿ ಸಾಗಲು ಸಾಧ್ಯವಾಗುತ್ತದೆ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದರು

ಈ ಸಂದರ್ಭದಲ್ಲಿ ಟ್ರಸ್ಟಿನ್ ಖಜಾಂಚಿ ವೆಂಕಟ ಕೃಷ್ಣ ಪೋಲಿನ್ ಶಾಲೆಯ ಸಂಸ್ಥಾಪಕ ಅಧ್ಯಕ್ಷ ಪಾರ್ಥ ಸಾರಥಿ ಹಿರಿಯ ಶಿಕ್ಷಕ ಸಂಜು ಕುಮಾರ್ ಶಾಂತಿ ಸೇರಿದಂತೆ ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *