ಗಂಗಾವತಿಯ ಶಿಕ್ಷಕ ಲಕ್ಷ್ಮಿಕಾಂತ್ ಹೇರೂರು ಅವರಿಗೆ ರಾಜ್ಯ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿ
*ಗಂಗಾವತಿ:* ಶ್ರೀ ಕಾಶಿ ಶೇಷ ಶಾಸ್ತ್ರಿ ಚಾರಿಟೇಬಲ್ ಟ್ರಸ್ಟ್, ಬೆಂಗಳೂರು ವತಿಯಿಂದ ಮೈಸೂರಿನ ಶ್ರೀರಾಮಕೃಷ್ಣ ಆಧ್ಯಾತ್ಮ ಮತ್ತು ನೈತಿಕ ಕೇಂದ್ರದಲ್ಲಿ ದಿನಾಂಕ 13-09-2026 ರ ಭಾನುವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ, ಗಂಗಾವತಿಯ ವಜ್ರ ಮಹೋತ್ಸವ ಆಚರಿಸಿಕೊಳ್ಳುತ್ತಿರುವ ಶ್ರೀ ಕೊಟ್ಟೂರೇಶ್ವರ ವಿದ್ಯಾವರ್ಧಕ ಸಂಘದ ಶ್ರೀ ಕೊಟ್ಟೂರೇಶ್ವರ ಅನುದಾನಿತ ಕನ್ನಡ ಮಾಧ್ಯಮ ಪ್ರೌಢಶಾಲೆಯ ಶಿಕ್ಷಕರಾದ ಶ್ರೀ ಲಕ್ಷ್ಮಿಕಾಂತ್ ಹೇರೂರು ಅವರಿಗೆ ಪ್ರತಿಷ್ಠಿತ *‘ಆದರ್ಶ ಶಿಕ್ಷಕ ಪ್ರಶಸ್ತಿ’* ನೀಡಿ ಗೌರವಿಸಲಾಯಿತು.ರಾಜ್ಯದ ಒಂಬತ್ತು ಮಂದಿ ಅತ್ಯುತ್ತಮ ಸಾಧಕ ಶಿಕ್ಷಕರಿಗೆ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಪ್ರಶಸ್ತಿಯು ರೂ. 10,000/- ನಗದು, ಪ್ರಮಾಣ ಪತ್ರ ಹಾಗೂ ಪುಸ್ತಕಗಳನ್ನು ಒಳಗೊಂಡಿದೆ.ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಶ್ರೀರಾಮಕೃಷ್ಣ ಆಶ್ರಮದ ಶ್ರೀ ಮಹಾಮೇಧಾನಂದ ಸ್ವಾಮೀಜಿ ಅವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಭಾರತೀಯ ವಿದ್ಯಾ ಭವನದ ನಿರ್ದೇಶಕರಾದ ಶ್ರೀ ನಾಗಣ್ಣ, ಶ್ರೀ ಕಾಶಿ ಶೇಷ ಶಾಸ್ತ್ರಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ಶ್ರೀ ಸದಾನಂದ ಅವರು ಭಾಗವಹಿಸಿದ್ದರು.ಇದೇ ವೇಳೆ ಕರ್ನಾಟಕ ರಾಜ್ಯದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯ, ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳು ಮತ್ತು ಅವರ ಪಾಲಕರು, ಟ್ರಸ್ಟಿನ ಸದಸ್ಯರು ಹಾಗೂ ಶ್ರೀರಾಮಕೃಷ್ಣ ಆಶ್ರಮದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.ಪ್ರಶಸ್ತಿ ಲಭಿಸಿರುವುದಕ್ಕೆ ಶ್ರೀ ಕೊಟ್ಟೂರೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷರು, ಕಾರ್ಯದರ್ಶಿಗಳು, ಆಡಳಿತ ಮಂಡಳಿಯ ಸದಸ್ಯರು, ಮುಖ್ಯೋಪಾಧ್ಯಾಯರು ಹಾಗೂ ಸಿಬ್ಬಂದಿ ವರ್ಗದವರು ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.

