ಮಾದಕ ವಸ್ತುಗಳ ಸೇವನೆಯಿಂದ ನೆಮ್ಮದಿ ಹಾಳು: ಡಿವೈಎಸ್ಪಿ ಜೆ.ಎಸ್.ನ್ಯಾಮಗೌಡರ್ …

ಗಂಗಾವತಿ.14 ಬೇತಲ್ ಸ್ವಾತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ಪೊಲೀಸ್ ಇಲಾಖೆಯಿಂದ ಮಾದಕ ವಸ್ತುಗಳ ದುಷ್ಪರಿಣಾಮ, ಪೋಕ್ಸ,ಬಾಲ್ಯ ವಿವಾಹ, ಸೈಬರ್ ಅಪರಾಧಗಳ ಬಗ್ಗೆ ಅರಿವು ಕಾರ್ಯಕ್ರಮ ನಡೆಯಿತು. ಮಾದಕ ವಸ್ತುಗಳ ಬಳಕೆ ಮಾಡುವುದರಿಂದ ಆರೋಗ್ಯದ ಮೇಲೆ ಪರಿಣಾಮ ಬೀಳುವುದರೊಂದಿಗೆ, ಸಮಾಜದಲ್ಲಿ ಅಹಿತಕರ ಘಟನೆಗಳು ನಡೆಯಲು ಕಾರಣವಾಗುತ್ತಿದೆ’ ಎಂದು ಡಿವೈಎಸ್ಪಿ ಜೆ.ಎಸ್.ನ್ಯಾಮಗೌಡರ್ ಅಭಿಪ್ರಾಯಪಟ್ಟರು.ಪ್ರಸ್ತುತ ಸಮಾಜದ ಯುವ ಸಮುದಾಯವು ಮಾದಕವಸ್ತುಗಳ ಸೇವನೆ ದಾಸರಾಗುತ್ತಿರುವುದು ಆತಂಕಕಾರಿ ಬೆಳವಣಿಗೆ. ಮಾದಕ ವಸ್ತುಗಳ ವ್ಯಸನಿಯಾದ ವ್ಯಕ್ತಿಯನ್ನು ಕುಟುಂಬ ತ್ಯಜಿಸುತ್ತದೆ. ಅಲ್ಲದೆ ಸಮಾಜ ಕೂಡ ಆತನನ್ನು ಧಿಕ್ಕರಿಸುತ್ತದೆ. ಯುವಕರು ಯುವತಿಯರು ಮಾದಕ ವಸ್ತುಗಳ ದುಷ್ಪರಿಣಾಮ ವ್ಯಸನಿಗಳಾಗದೆ ಸಮಾಜಕ್ಕೆ ಒಳಿತನ್ನು ಬಯಸುವ ವ್ಯಕ್ತಿಗಳಾಗಿ ಹೊರಹೊಮ್ಮಬೇಕು. ಮಾದಕ ವಸ್ತುಗಳ ಉಪಯೋಗ ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಕಾರ್ಯಪ್ರವೃತ್ತರಾಗಬೇಕು’ ಹಾಗೂ ಪ್ರತಿಯೊಬ್ಬರೂ ಹೆಲ್ಮೆಟ್ ಧರಿಸಿ ವಾಹನವನ್ನು ಚಲಿಸಬೇಕು ಎಂದು ಹೇಳಿದರುಗಂಗಾವತಿ ನಗರ ಪೊಲೀಸ್ ಠಾಣೆ ಪಿಐ ಪ್ರಕಾಶ ಮಾಳಿ ಮಾದಕ ದ್ರವ್ಯ ಮತ್ತು ಮಾದಕ ವಸ್ತುಗಳ ಉಪಯೋಗದ ದುಷ್ಪಾರಿಣಾಮಗಳ ಬಗ್ಗೆ ಹಾಗೂ ಕಾನೂನು ಕಾಯ್ದೆ ಮಾಹಿತಿಯನ್ನು ವಿದ್ಯಾರ್ಥಿಗಳಿಗೆ ನೀಡಿದರು. ಮಾದಕ ವಸ್ತುಗಳ ಬಳಕೆಯ ಅಡ್ಡ ಪರಿಣಾಮಗಳು, ಸಮಾಜದ ಮೇಲಾಗುವ ದುಷ್ಪಾರಿಣಾಮ, ಹದಗೆಡುವ ಕುಟುಂಬ ವ್ಯವಸ್ಥೆ, ಹಣಕಾಸಿನ ಸಮಸ್ಯೆ ಸಾಕ್ಷ್ಯ ಚಿತ್ರದ ಮೂಲಕ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು.

ಈ ಸಂದರ್ಭದಲ್ಲಿ ಬೇತಲ್ ಸ್ವಾತಂತ್ರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು.ಸಂಸ್ಥೆಯ ಅಧ್ಯಕ್ಷರು ಕಾರ್ಯದರ್ಶಿ ಹಾಗೂ ವಿದ್ಯಾರ್ಥಿಗಳು ಪೊಲೀಸ್ ಇಲಾಖೆಯ ಸಿಬ್ಬಂದಿ, ಕಾಲೇಜಿನ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
