ಕಲ್ಯಾಣ ಕರ್ನಾಟಕ ಭಾಗದಲ್ಲಿ ಹದಗೆಟ್ಟಿರುವ ಕಾನೂನು ಸುವ್ಯವಸ್ಥೆಯನ್ನು ವಿರೋಧಿಸಿ 17 ರಂದು ಬಳ್ಳಾರಿಯಲ್ಲಿ ಬೃಹತ್ ಸಮಾವೇಶ : ಮಾಜಿ ಸಚಿವ ಬಿ. ಶ್ರೀರಾಮಲು..

ಬಳ್ಳಾರಿ : ಬಳ್ಳಾರಿಯ ಘರ್ಷಣೆಯನ್ನು ನಿಷ್ಪಕ್ಷಪಾತ ತನಿಖೆಗೆ ಸಿಬಿಐಗೆ ವಹಿಸಬೇಕು, ಶಾಸಕ ಭರತ್ ರೆಡ್ಡಿ ಮತ್ತು ಬೆಂಬಲಿಗರನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಇದೆ ಜ. 17ರಂದು ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ’ ಎಂದು ಮಾಜಿ ಶಾಸಕ ಬಿ. ಶ್ರೀರಾಮುಲು ಸುದ್ದಿಗೋಷ್ಠಿಯಲ್ಲಿ ಹೇಳಿದರು.ಬಳ್ಳಾರಿಯಲ್ಲಿ ಮಾತನಾಡಿದ ಅವರು, ‘ಸಮಾವೇಶ ಕೇವಲ ಬಳ್ಳಾರಿ ಗಲಭೆಗೆ ಸಂಬಂಧಿಸಿದ ಪ್ರತಿರೋಧದ ಸಮಾವೇಶ ಅಲ್ಲ. ಬದಲಿಗೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಹದಗೆಟ್ಟಿರುವ ಕಾನೂನು ಸುವ್ಯವಸ್ಥೆಯನ್ನು ವಿರೋಧಿಸಿ ನಡೆಯುತ್ತಿರುವ ಸಮಾವೇಶ’ ಎಂದು ಮಾಜಿ ಸಚಿವ ಶ್ರೀರಾಮುಲು ಹೇಳಿದ್ದಾರೆ. ‘ಕಲಬುರಗಿ ರಿಪಬ್ಲಿಕ್ ಆಗಿದೆ. ಅಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ವಿಜಯೇಂದ್ರ, ಛಲವಾದಿ ನಾರಾಯಣಸ್ವಾಮಿ ಆರೋಪಿಸಿದ್ದರು. ಅಲ್ಲಿಗೆ ಹೋದಾಗ ಅವರ ಮೇಲೆ ಕಲ್ಲು ಬಂಡೆಗಳನ್ನು ಹಿಡಿದು ಹಲ್ಲೆಗೆ ಯತ್ನಿಸಲಾಯಿತು. ಅಲ್ಲಿಯೂ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.ಕಲಬುರಗಿ ರಿಪಬ್ಲಿಕ್ ಆಗಿದೆ. ಅಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ವಿಜಯೇಂದ್ರ, ಛಲವಾದಿ ನಾರಾಯಣಸ್ವಾಮಿ ಆರೋಪಿಸಿದ್ದರು. ಅಲ್ಲಿಗೆ ಹೋದಾಗ ಅವರ ಮೇಲೆ ಕಲ್ಲು ಬಂಡೆಗಳನ್ನು ಹಿಡಿದು ಹಲ್ಲೆಗೆ ಯತ್ನಿಸಲಾಯಿತು. ಅಲ್ಲಿಯೂ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.ಸಮಾವೇಶದಲ್ಲಿ 50 ಸಾವಿರ ಜನ ಸೇರುವ ನಿರೀಕ್ಷೆ ಇದೆ. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ವಿಪಕ್ಷ ನಾಯಕ ಆರ್. ಅಶೋಕ ಸೇರಿದಂತೆ ರಾಜ್ಯ ನಾಯಕರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ’ ಎಂದರು.ಪಾದಯಾತ್ರೆ ಗೊಂದಲ : ಮುಂದಿನ ದಿನಗಳಲ್ಲಿ ಪಾದಯಾತ್ರೆ ಬಗ್ಗೆ ನಿರ್ಧಾರ ತಗೊಳ್ಳುತ್ತೇವೆ. ಪಾದಯಾತ್ರೆ ಮಾಡಬಾರದು ಅಂತಾ ಏನೂ ಇಲ್ಲ. ನಮಗೂ ಪಾದಯಾತ್ರೆ ಮಾಡುವ ಅಪೇಕ್ಷೆ ಇದೆ. ಮುಂದಿನ ದಿನಗಳಲ್ಲಿ ಹೈಕಮಾಂಡ್ ಜೊತೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.
ವರದಿ : ಜಿಲಾನಸಾಬ್ ಬಡಿಗೇರ್
