ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರ 228ನೇ ಜಯಂತಿ ಹಾಗೂ 80ನೇ ಸ್ವಾತಂತ್ರ್ಯ ದಿನಾಚರಣೆ…

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರ 228ನೇ ಜಯಂತಿ ಹಾಗೂ 80ನೇ ಸ್ವಾತಂತ್ರ್ಯ ದಿನಾಚರಣೆ…

ಗಂಗಾವತಿ: ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ 228ನೇ ಜಯಂತಿಯನ್ನು ಹಾಗೂ ದೇಶದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಮಾಜದ ಮುಖಂಡರು, ಅಭಿಮಾನಿಗಳು ಹಾಗೂ ಸಾರ್ವಜನಿಕರ ಸಮ್ಮುಖದಲ್ಲಿ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.ಕಾರ್ಯಕ್ರಮದ ಅಂಗವಾಗಿ ಸಂಗೊಳ್ಳಿ ರಾಯಣ್ಣನವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಅವರ ದೇಶಭಕ್ತಿ, ಧೈರ್ಯ, ಸಾಹಸ ಹಾಗೂ ಸ್ವಾತಂತ್ರ್ಯ ಹೋರಾಟದ ಕೊಡುಗೆಯನ್ನು ಸ್ಮರಿಸಲಾಯಿತು. ಇದೇ ಸಂದರ್ಭದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರನ್ನು ಸ್ಮರಿಸಲಾಯಿತು.ಕಾರ್ಯಕ್ರಮದಲ್ಲಿ ಮಾತನಾಡಿದ ಸಮಾಜದ ಮುಖಂಡರು, ಬ್ರಿಟಿಷರ ವಿರುದ್ಧ ಕೆಚ್ಚೆದೆಯಿಂದ ಹೋರಾಡಿದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರು ದೇಶದ ಸ್ವಾತಂತ್ರ್ಯ ಹಾಗೂ ನಾಡಿನ ಜನರ ರಕ್ಷಣೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಮಹಾನ್ ಹೋರಾಟಗಾರರಾಗಿದ್ದಾರೆ. ಅವರ ದೇಶಪ್ರೇಮ, ಸ್ವಾಭಿಮಾನ, ಧೈರ್ಯ ಮತ್ತು ತ್ಯಾಗದ ಆದರ್ಶಗಳು ಇಂದಿನ ಯುವಜನತೆಗೆ ಸದಾ ಪ್ರೇರಣೆಯಾಗಿವೆ ಎಂದು ಹೇಳಿದರು.ದೇಶವು ಸ್ವಾತಂತ್ರ್ಯ ಪಡೆದು ಹಲವು ದಶಕಗಳು ಕಳೆದಿದ್ದು, 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗವನ್ನು ಪ್ರತಿಯೊಬ್ಬರೂ ಸ್ಮರಿಸಬೇಕು. ದೇಶದ ಏಕತೆ, ಅಖಂಡತೆ ಹಾಗೂ ಶಾಂತಿಯನ್ನು ಕಾಪಾಡುವ ಜೊತೆಗೆ, ಯುವಜನರು ದೇಶದ ಅಭಿವೃದ್ಧಿಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಮುಖಂಡರು ಕರೆ ನೀಡಿದರು.ಸಂಗೊಳ್ಳಿ ರಾಯಣ್ಣನವರಂತಹ ಮಹನೀಯರ ಹೋರಾಟ ಮತ್ತು ತ್ಯಾಗದ ಫಲವಾಗಿ ನಮಗೆ ಸ್ವಾತಂತ್ರ್ಯದ ಮಹತ್ವವನ್ನು ಅರಿಯುವ ಅವಕಾಶ ದೊರೆತಿದೆ. ಅವರ ಆದರ್ಶಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಮುಖಂಡರು ತಿಳಿಸಿದರು.ಕಾರ್ಯಕ್ರಮದಲ್ಲಿ ತಾಲೂಕು ಹಾಲುಮತ ಸಮಾಜದ ಅಧ್ಯಕ್ಷ ಯಮನಪ್ಪ ವಿಠಲಾಪೂರ, ಗಂಗಾವತಿ ನಗರ ಘಟಕದ ಅಧ್ಯಕ್ಷ ಕೆ. ನಾಗೇಶಪ್ಪ, ಮುದಕ್ಕಪ್ಪ ಗಡ್ಡಿ, ಅಶೋಕ್ ಗೌಡ್ ಗೌಡ್ರರು, ಸಿದ್ದಲಿಂಗಪ್ಪ ಗೌಡ, ಬಸವರಾಜ ಬಿ, ಬಸವರಾಜ ಸಂಗಟಿ, ಹನುಮಂತಪ್ಪ ಹುಲಿಹೈದರ್, ಪರಶುರಾಮ ಇಟ್ಟಗಿ, ಗೀತಾ ವಿಕ್ರಮ್, ಕಸ್ತೂರಿಯಮ್ಮ ಸಮಾಜದ ಮುಖಂಡರು, ಅಭಿಮಾನಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.ಸಂಗೊಳ್ಳಿ ರಾಯಣ್ಣನವರ ಜಯಂತಿ ಹಾಗೂ 80ನೇ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮವು ದೇಶಭಕ್ತಿ, ಸ್ವಾಭಿಮಾನ ಮತ್ತು ರಾಷ್ಟ್ರಪ್ರೇಮದ ಸಂದೇಶ ಸಾರುವ ಮೂಲಕ ಅರ್ಥಪೂರ್ಣವಾಗಿ ನೆರವೇರಿತು.

Leave a Reply

Your email address will not be published. Required fields are marked *