ವಿದ್ಯಾರ್ಥಿಗಳಿಗೆ ನೋಟ್ಬುಕ್ ಮತ್ತು ಪೆನ್ ವಿತರಣೆ: ಕೆಬಿಎಸ್ಎಸ್ ಅಧ್ಯಕ್ಷ ಲಿಂಗರಾಜು..
ಗಂಗಾವತಿ: ಕರ್ನಾಟಕ ಭೀಮ ಸೇನೆ ಸಮಿತಿಯ ವತಿಯಿಂದ ಗಂಗಾವತಿ ತಾಲೂಕಿನ ಡಣಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪರಿಕರಗಳನ್ನು ವಿತರಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಕಾರ್ಯಕ್ರಮದ ನೇತೃತ್ವ ವಹಿಸಿದ್ದ ಕರ್ನಾಟಕ ಭೀಮ ಸೇನೆ ಸಮಿತಿಯ ಗುಲ್ಬರ್ಗ ವಿಭಾಗೀಯ ಅಧ್ಯಕ್ಷರಾದ ಲಿಂಗರಾಜು ಅವರು ಮಾತನಾಡಿ, ಬಡ ಮತ್ತು ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸಣ್ಣದಾದರೂ ಸಹಾಯ ಮಾಡುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ವಿದ್ಯಾರ್ಥಿಗಳು ಶಿಕ್ಷಣದ ಕಡೆಗೆ ಹೆಚ್ಚಿನ ಗಮನ ಹರಿಸಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು. ಈ ಸಂದರ್ಭದಲ್ಲಿ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಗಳಿಗೆ ಒಟ್ಟು 50 ನೋಟ್ಬುಕ್ಗಳು ಮತ್ತು 50 ಪೆನ್ನುಗಳನ್ನು ವಿತರಿಸಲಾಯಿತು.ನೂತನ ತಾಲೂಕು ಅಧ್ಯಕ್ಷರ ನೇಮಕ:ಇದೇ ಕಾರ್ಯಕ್ರಮದಲ್ಲಿ ಕರ್ನಾಟಕ ಭೀಮ ಸೇನೆ ಸಮಿತಿಯ ಸಂಘಟನೆ ಬಲವರ್ಧನೆಗಾಗಿ, ಗಂಗಾವತಿ ತಾಲೂಕು ಅಧ್ಯಕ್ಷರಾಗಿ ರಾಜಪ್ಪ ನಾಯಕ ಅವರನ್ನು ನೇಮಕ ಮಾಡಿ ಆದೇಶ ಪತ್ರವನ್ನು ಹಸ್ತಾಂತರಿಸಲಾಯಿತು.ಈ ಸಂದರ್ಭದಲ್ಲಿ ಕರ್ನಾಟಕ ಭೀಮ ಸೇನೆ ಸಮಿತಿಯ ಜಿಲ್ಲಾಧ್ಯಕ್ಷ ರಮೇಶ ಕೆರೆಹಳ್ಳಿ, ಗುಲ್ಬರ್ಗ ವಿಭಾಗೀಯ ಉಪಾಧ್ಯಕ್ಷ ಹನುಮೇಶ ವಿಠಲಾಪುರ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ರಾಘು ಕಡೆಬಾಗಿಲು, ತಾಲೂಕ ಸಂಘಟನಾ ಕಾರ್ಯದರ್ಶಿ ವೆಂಕಟೇಶ ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು.ಕಾರ್ಯಕ್ರಮದಲ್ಲಿ ಡಣಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಮುಖ್ಯೋಪಾಧ್ಯಾಯರು, ಶಾಲಾ ಶಿಕ್ಷಕರು, ಪಾಲಕರು ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

