ಅಮೃತ್ ಭಾರತ್ ನಿಲ್ದಾಣ ಯೋಜನೆಯಡಿ ಪುನರಾಭಿವೃದ್ಧಿಗೊಂಡ ಕೊಪ್ಪಳ ರೈಲು ನಿಲ್ದಾಣ: ಜು. 17ರಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನ ಮಂತ್ರಿಗಳಿಂದ ಉದ್ಘಾಟನೆ….

ಅಮೃತ್ ಭಾರತ್ ನಿಲ್ದಾಣ ಯೋಜನೆಯಡಿ ಪುನರಾಭಿವೃದ್ಧಿಗೊಂಡ ಕೊಪ್ಪಳ ರೈಲು ನಿಲ್ದಾಣ: ಜು. 17ರಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನ ಮಂತ್ರಿಗಳಿಂದ ಉದ್ಘಾಟನೆ….

ಕೊಪ್ಪಳ ಜುಲೈ 15 (ಕರ್ನಾಟಕ ವಾರ್ತೆ): ರೈಲ್ವೆ ಸಚಿವಾಲಯ ರೈಲ್ವೆ ಮಂಡಳಿ ವತಿಯಿಂದ ಅಮೃತ್ ಭಾರತ್ ನಿಲ್ದಾಣ ಯೋಜನೆಯಡಿ ಪುನರಾಭಿವೃದ್ಧಿಗೊಂಡ ಕೊಪ್ಪಳ ರೈಲು ನಿಲ್ದಾಣದ ಉದ್ಘಾಟನೆ ಸಮಾರಂಭವನ್ನು ಜುಲೈ 17ರಂದು ಮಧ್ಯಾಹ್ನ 2 ಗಂಟೆಗೆ ಹಮ್ಮಿಕೊಳ್ಳಲಾಗಿದೆ.ಪುನರಾಭಿವೃದ್ಧಿಗೊಂಡ ಕೊಪ್ಪಳ ರೈಲು ನಿಲ್ದಾಣದ ಉದ್ಘಾಟನೆಯನ್ನು ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ನೆರವೇರಿಸುವರು.

ಕರ್ನಾಟಕ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್, ಕೇಂದ್ರ ರೈಲ್ವೆ, ಮಾಹಿತಿ ಮತ್ತು ಪ್ರಸಾರ ಮತ್ತು ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವರಾದ ಅಶ್ವಿನಿ ವೈಷ್ಣವ್, ಉಪ ಮುಖ್ಯಮಂತ್ರಿಗಳಾದ ಡಾ. ಜಿ. ಪರಮೇಶ್ವರ, ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವರಾದ ವಿ. ಸೋಮಣ್ಣ, ಕರ್ನಾಟಕ ಸರ್ಕಾರದ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ವಿಪತ್ತು ನಿರ್ವಹಣಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ ರುದ್ರಪ್ಪ ಪಾಟೀಲ್, ವಿಧಾನ ಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರು ಹಾಗೂ ಕುಷ್ಟಗಿ ಶಾಸಕರಾದ ದೊಡ್ಡನಗೌಡ ಹನಮಗೌಡ ಪಾಟೀಲ, ಕೊಪ್ಪಳ ಲೋಕಸಭೆ ಕ್ಷೇತ್ರದ ಸಂಸದರಾದ ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ಕೊಪ್ಪಳ ಶಾಸಕರದ ಕೆ.ರಾಘವೇಂದ್ರ ಬಸವರಾಜ ಹಿಟ್ನಾಳ್, ವಿಧಾನ ಪರಿಷತ್ ಸದಸ್ಯರುಗಳಾದ ಶಶಿಲ್ ಜಿ. ನಮೋಶಿ, ಡಾ. ಚಂದ್ರಶೇಖರ ಬಿ. ಪಾಟೀಲ, ಶರಣಗೌಡ ಪಾಟೀಲ ಬಯ್ಯಾಪೂರ ಹಾಗೂ ಹೇಮಲತಾ ನಾಯಕ ಅವರು ಘನ ಉಪಸ್ಥಿತಿ ವಹಿಸುವರು ಎಂದು ಹುಬ್ಬಳ್ಳಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *