*ವಾಲ್ಮೀಕಿ ಸಮುದಾಯದ ಭಾವನೆಗಳಿಗೆ ಧಕ್ಕೆ: ಪ್ರೊ. ಭಗವಾನ್ ಹೇಳಿಕೆಗೆ ತೀವ್ರ ಆಕ್ರೋಶ* *ಅವಹೇಳನಕಾರಿ ಹೇಳಿಕೆ ಖಂಡಿಸಿದ ವಾಲ್ಮೀಕಿ ನಾಯಕ ಸಮಾಜ ಅಧ್ಯಕ್ಷ ವೀರಭದ್ರಪ್ಪ ನಾಯಕ, ಸರ್ಕಾರ ಕ್ರಮಕ್ಕೆ ಆಗ್ರಹ*

*ವಾಲ್ಮೀಕಿ ಸಮುದಾಯದ ಭಾವನೆಗಳಿಗೆ ಧಕ್ಕೆ: ಪ್ರೊ. ಭಗವಾನ್ ಹೇಳಿಕೆಗೆ ತೀವ್ರ ಆಕ್ರೋಶ* *ಅವಹೇಳನಕಾರಿ ಹೇಳಿಕೆ ಖಂಡಿಸಿದ ವಾಲ್ಮೀಕಿ ನಾಯಕ ಸಮಾಜ ಅಧ್ಯಕ್ಷ ವೀರಭದ್ರಪ್ಪ ನಾಯಕ, ಸರ್ಕಾರ ಕ್ರಮಕ್ಕೆ ಆಗ್ರಹ*

ಗಂಗಾವತಿ, ಜೂನ್ 18:* ಮಹರ್ಷಿ ವಾಲ್ಮೀಕಿ ಹಾಗೂ ಅವರ ಶ್ರೇಷ್ಠ ಕೃತಿ ರಾಮಾಯಣದ ಕುರಿತು ಪ್ರೊ. ಭಗವಾನ್ ನೀಡಿದ್ದಾರೆ ಎನ್ನಲಾದ ಅವಹೇಳನಕಾರಿ ಹೇಳಿಕೆಗೆ ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಸಮಾಜ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಸಮಾಜದ ಅಧ್ಯಕ್ಷರಾದ ವೀರಭದ್ರಪ್ಪ ನಾಯಕ ಅವರು ಮಂಗಳವಾರ ಪತ್ರಿಕಾ ಪ್ರಕಟಣೆ ಹೊರಡಿಸಿ, ಪ್ರೊ. ಭಗವಾನ್ ಅವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. “ಮಹರ್ಷಿ ವಾಲ್ಮೀಕಿ ವಾಲ್ಮೀಕಿ ಸಮುದಾಯದ ಆರಾಧ್ಯ ದೈವ. ಅವರ ಬಗ್ಗೆ ಸಾರ್ವಜನಿಕವಾಗಿ ತಾತ್ಸಾರ ಹಾಗೂ ಅವಹೇಳನಕಾರಿ ರೀತಿಯಲ್ಲಿ ಹೇಳಿಕೆ ನೀಡಿರುವುದು ಸಮುದಾಯದ ಕೋಟ್ಯಂತರ ಜನರ ಭಾವನೆಗಳಿಗೆ ತೀವ್ರ ಧಕ್ಕೆ ಉಂಟುಮಾಡಿದೆ” ಎಂದು ಅವರು ಆರೋಪಿಸಿದ್ದಾರೆ.”ರಾಮಾಯಣದಂತಹ ಮಹಾನ್ ಕೃತಿಯನ್ನು ವಿಶ್ಲೇಷಿಸುವ ಸಂದರ್ಭದಲ್ಲಿ ಜವಾಬ್ದಾರಿಯುತ ವ್ಯಕ್ತಿಗಳು ಕೀಳುಮಟ್ಟದ ಭಾಷೆಯನ್ನು ಬಳಸಿರುವುದು ಅಕ್ಷಮ್ಯ. ಇಂತಹ ಹೇಳಿಕೆಗಳು ಸಮಾಜದಲ್ಲಿ ಅಶಾಂತಿ ಹಾಗೂ ಅಸಮಾಧಾನಕ್ಕೆ ಕಾರಣವಾಗುತ್ತವೆ” ಎಂದು ವೀರಭದ್ರಪ್ಪ ನಾಯಕ ಕಳವಳ ವ್ಯಕ್ತಪಡಿಸಿದರು.ಸಾರ್ವಜನಿಕ ಜೀವನದಲ್ಲಿರುವವರು ಯಾವುದೇ ಸಮುದಾಯದ ಧಾರ್ಮಿಕ ನಂಬಿಕೆಗಳು, ಆರಾಧ್ಯ ದೈವಗಳು ಹಾಗೂ ಸಾಂಸ್ಕೃತಿಕ ಪರಂಪರೆಗಳ ಕುರಿತು ಮಾತನಾಡುವಾಗ ಸಂಯಮ ಮತ್ತು ಹೊಣೆಗಾರಿಕೆಯನ್ನು ಪ್ರದರ್ಶಿಸಬೇಕು ಎಂದು ಅವರು ಅಭಿಪ್ರಾಯಪಟ್ಟರು.ಒಂದು ಸಮುದಾಯವನ್ನು ಅವಮಾನಿಸುವ ಹಾಗೂ ಸಮಾಜದ ಸೌಹಾರ್ದತೆಗೆ ಧಕ್ಕೆ ತರುವಂತಹ ಹೇಳಿಕೆಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು ಸಮಾಜದ ಸ್ವಾಸ್ಥ್ಯ ಕಾಪಾಡಬೇಕು ಎಂದು ವೀರಭದ್ರಪ್ಪ ನಾಯಕ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

Leave a Reply

Your email address will not be published. Required fields are marked *