ಡಾ.ವಾಲ್ಮೀಕಿ ಪ್ರಸನ್ನಾನಂದಪುರಿ ಮಹಾಸ್ವಾಮೀಜಿಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು..

ಡಾ.ವಾಲ್ಮೀಕಿ ಪ್ರಸನ್ನಾನಂದಪುರಿ ಮಹಾಸ್ವಾಮೀಜಿಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು..

ರಾಯಚೂರು: ಜಗದ್ಗುರು ಡಾ. ವಾಲ್ಮೀಕಿ ಪ್ರಸನ್ನನಾಂದಪುರಿ ಮಹಾಸ್ವಾಮೀಜಿಗೆ ಲಘು ಹೃದಯಾಘಾತ ಸಂಭವಿಸಿದ್ದು, ಶ್ರೀಗಳನ್ನ ಹೈದರಾಬಾದ್ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ವಾಲ್ಮೀಕಿ ಶ್ರೀಗಳಿಗೆ ಲಘು ಹೃದಯಾಘಾತವಾಗಿದೆ ಎಂದು ತಿಳಿದು ಬಂದಿದ್ದು, ಸುದ್ದಿ ಹೊರಬಂದ ಬಳಿಕ ಶ್ರೀಗಳ ಆರೋಗ್ಯದ ಬಗ್ಗೆ ಭಕ್ತರು ಆತಂಕಗೊಂಡಿದ್ದಾರೆ.

ರಾಯಚೂರು ಜಿಲ್ಲಾ ಪ್ರವಾಸದಲ್ಲಿದ್ದ ಶ್ರೀಗಳು ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಶ್ರೀಗಳಾದ ಜಗದ್ಗುರು ಡಾ. ವಾಲ್ಮೀಕಿ ಪ್ರಸನ್ನನಾಂದಪುರಿ ಮಹಾಸ್ವಾಮೀಜಿ ರಾಯಚೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದರು. ತಿಂಥಣಿ ಬ್ರಿಡ್ಜ್ ಬಳಿಯ ಬಂಡೊಳ್ಳಿ ಗ್ರಾಮದಲ್ಲಿರುವ ಶ್ರೀಮಠದ ಉದ್ದೇಶಿತ ವಿದ್ಯಾಸಂಸ್ಥೆ ಸ್ಥಳಕ್ಕೆ ಭೇಟಿ‌ ನೀಡಿದ್ದರು. ಕಾರ್ಯಕ್ರಮಕ್ಕೆ ಹೋಗ್ತಿದ್ದ ವೇಳೆ ಹೃದಯಾಘಾತ ನಂತರ ಕನಕಪೀಠಕ್ಕೆ ತೆರಳಿ ಇತ್ತೀಚೆಗೆ ಲಿಂಗೈಕ್ಯರಾಗಿದ್ದ ಸಿದ್ಧರಾಮಾನಂದಪುರಿ ಸ್ವಾಮಿಗಳ ಗದ್ದುಗೆಗೆ ಪೂಜೆ ಸಲ್ಲಿಸಿದ ಶ್ರೀಗಳು, ಆ ನಂತರ ಹಟ್ಟಿಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಹೃದಯಾಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ. ಅವರ ಆರೋಗ್ಯಕ್ಕಾಗಿ ಪ್ರಾರ್ಥಿಸಿ  ಗಂಗಾವತಿಯ ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾದ ಅಧ್ಯಕ್ಷರು ವೀರಭದ್ರಪ್ಪ ನಾಯಕ ಹನುಮಂತಪ್ಪ ನಾಯಕ ಹಾಗೂ ಗಂಗಾವತಿಯ ವಾಲ್ಮೀಕಿ ನಾಯಕ ಸಮಾಜದ ಹಿರಿಯರು ಹಾಗೂ ಯುವ ಮುಖಂಡರು ಮತ್ತು ಬುದ್ಧಿಜೀವಿಗಳು ಮತ್ತಿತರರು ಗಂಗಾವತಿ ಗ್ರಾಮದೇವತೆ ಶ್ರೀ ದುರ್ಗಾಪರಮೇಶ್ವರಿ ಮತ್ತು ಮಾಋಷಿ ವಾಲ್ಮೀಕಿ ಗುರುಗಳಿಗೆ ಮಹಾಋಷಿಗಳಿಗೆ ಪ್ರಾರ್ಥಿಸಿದರು.

Leave a Reply

Your email address will not be published. Required fields are marked *