ಚಿಕ್ಕವಂಕಲಕುಂಟ ಗ್ರಾಮದಲ್ಲಿ ಗುರುವಾರ ದಿನದಂದು ಪ್ರವಾಸಿ ಮಂದಿರದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಾತ್ರೆ 2026ರ ಆಚರಣೆಗೆ ಸಂಬಂಧಿಸಿದಂತೆ ಪೂರ್ವಭಾವಿ ಸಭೆ ಜರುಗಿತು..

ಚಿಕ್ಕವಂಕಲಕುಂಟ ಗ್ರಾಮದಲ್ಲಿ ಗುರುವಾರ ದಿನದಂದು ಪ್ರವಾಸಿ ಮಂದಿರದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಾತ್ರೆ 2026ರ ಆಚರಣೆಗೆ ಸಂಬಂಧಿಸಿದಂತೆ ಪೂರ್ವಭಾವಿ ಸಭೆ ಜರುಗಿತು..

ಜಗದ್ಗುರು ಶ್ರೀ ಡಾ. ವಾಲ್ಮೀಕಿ ಪ್ರಸನ್ನಾನಂದ ಮಹಾಸ್ವಾಮಿಜಿಯವರು ಕೊಪ್ಪಳ ಜಿಲ್ಲಾ ಮಟ್ಟದ ಜನಜಾಗೃತಿ ಸಭೆ ಹಾಗೂ ಮಹರ್ಷಿ ವಾಲ್ಮೀಕಿ ಜಾತ್ರೆ 2026 ಪೂರ್ವಭಾವಿ ಸಭೆಯ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು**ಜಿಲ್ಲಾ ಮಟ್ಟದ ಜನಜಾಗೃತಿ ಸಭೆಯನ್ನು ಉದ್ದೇಶಿಸಿ ಆಶೀವ೯ಚನ ನೀಡಿದ ಪೂಜ್ಯರು ಕೊಪ್ಪಳ ಜಿಲ್ಲೆಯ ಎಲ್ಲಾ ತಾಲ್ಲೂಕಿನ ಸಮಾಜದ ಸ್ಥಳೀಯ ಸಮಸ್ಯೆ ಹಾಗೂ ಸಮಾಜದ ಜ್ವಲಂತ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವ ಹಿನ್ನೆಲೆಯಲ್ಲಿ ಹಾಗೂ ಐತಿಹಾಸಿಕ ಎಂಟನೇ ವರ್ಷದ ಶ್ರೀ ಮಹರ್ಷಿ ವಾಲ್ಮೀಕಿ ಜಾತ್ರಾ ಮಹೋತ್ಸವದಲ್ಲಿ ಮಹತ್ವದ ನಿರ್ಣಯ ಕೈಗೊಂಡು ಸರ್ಕಾರಕ್ಕೆ ಶೀಘ್ರವೇ ಬೇಡಿಕೆ ಈಡೇರಿಸುವಂತೆ ಆಗ್ರಹಿಸುವ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲೆಯ ಸಮಸ್ತ ಸಮುದಾಯದ ಮುಖಂಡರೊಂದಿಗೆ ಚರ್ಚಿಸಿ ನಿರ್ಣಯ ಕೈಗೊಂಡರು**ಸಭೆಯಲ್ಲಿ ಕೊಪ್ಪಳ ಜಿಲ್ಲೆಯ ಕೊಪ್ಪಳ ಯಲಬುರ್ಗಾ ಕುಷ್ಟಗಿ ಕಾರಟಗಿ ಕುಕನೂರ ಕನಕಗಿರಿ ಗಂಗಾವತಿ ತಾಲೂಕುಗಳ ಸಮಸ್ತ ಸಮುದಾಯದ ಮುಖಂಡರು ಶ್ರೀಮಠದ ಧರ್ಮದರ್ಶಿಗಳು, ಜಿಲ್ಲಾದ್ಯಕ್ಷರು, ತಾಲ್ಲೂಕು ಅಧ್ಯಕ್ಷರು, ಶ್ರೀ ಮಠದ ಪ್ರತಿನಿಧಿಗಳು, ಜಾತ್ರಾ ಸಮಿತಿ ಅಧ್ಯಕ್ಷರು, ವಿ.ಎಸ್.ಎಸ್. ಪದಾಧಿಕಾರಿಗಳು, ನಿವೃತ್ತ ಅಧಿಕಾರಿಗಳು, ನೌಕರರು, ವಿವಿಧ ಸಂಘಟನೆಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಮಹಿಳಾ ಸಂಘಟನೆಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಯುವಕರು ಕೊಪ್ಪಳ ಜಿಲ್ಲೆಯ ಸಮಸ್ತ. ಮುಖಂಡರು ಉಪಸ್ಥಿದ್ದರು

Leave a Reply

Your email address will not be published. Required fields are marked *