ಕಂಪ್ಲಿ ಮತ್ತು ಎಮ್ಮಿಗನೂರು ಗ್ರಾಮದಲ್ಲಿ ಜೋಳ ಖರೀದಿ ಕೇಂದ್ರ ಆರಂಭ : ನೋಂದಣಿಗೆ ಖರೀದಿಗೆ ಮುಗಿಬಿದ್ದ ರೈತರು.

ಕಂಪ್ಲಿ: ಪಟ್ಟಣದ ತಾಲ್ಲೂಕು ವ್ಯವಸಾಯೊತ್ಪನ್ನ ಮಾರಾಟ ಸಹಕಾರ ಸಂಘ ಮತ್ತು ತಾಲ್ಲೂಕಿನ ಎಮ್ಮಿಗನೂರು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದಲ್ಲಿ ಬುಧವಾರದಿಂದ ಜೋಳ ಖರೀದಿ ಕೇಂದ್ರ ಆರಂಭವಾಗಿದ್ದು, ಜೋಳ ಖರೀದಿಗೆ ನೋಂದಣಿ ಪ್ರಕ್ರಿಯೆ ಶುರುವಾಗಿದೆ.ಎಮ್ಮಿಗನೂರು ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಜೋಳ ಖರೀದಿಗಾಗಿ ಕಳೆದ ಮೂರು ದಿನಗಳಲ್ಲಿ ಸುಮಾರು 600ಕ್ಕೂ ಅಧಿಕ ರೈತರು ಹೆಸರುಗಳನ್ನು ನೋಂದಾಯಿಸಿಕೊAಡಿದ್ದು, ಸುಮಾರು 30 ಸಾವಿರದಿಂದ 35 ಸಾವಿರ ಕ್ವಿಂಟಲ್ ಜೋಳ ಖರೀದಿಗೆ ನೋಂದಾಯಿಸಿದ್ದಾರೆ.ಪಟ್ಟಣದ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದಲ್ಲಿ ಮೂರು ದಿನಗಳಿಂದ 80ಕ್ಕೂ ಅಧಿಕ ರೈತರು ಹೆಸರುಗಳನ್ನು ನೋಂದಾಯಿಸಿಕೊಂಡಿದ್ದಾರೆ. ಎರಡು ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ವಾಹಕರಾದ ಜಡೇಶ್ ರೆಡ್ಡಿ ಮತ್ತು ವೀರೇಶ್ ತಿಳಿಸಿದರು.ಕಳೆದ ಹಲವು ದಿನಗಳಿಂದ ಕಂಪ್ಲಿ ತಾಲ್ಲೂಕಿನ ರೈತರು ಹಾಗೂ ರೈತ ಸಂಘದ ಪದಾಧಿಕಾರಿಗಳು ಬೆಂಬಲ ಬೆಲೆಯಲ್ಲಿ ಜೋಳ ಖರೀದಿಸಲು ಖರೀದಿ ಕೇಂದ್ರವನ್ನು ಆರಂಭಿಸುವAತೆ ಸರ್ಕಾರವನ್ನು ಆಗ್ರಹಿಸಿದ್ದರು. ಇದೀಗ ಜೋಳ ಖರೀದಿಕೇಂದ್ರವೇನೋ ಆರಂಭವಾಗಿದೆ, ಆದರೆ ಜೋಳ ಖರೀದಿ ಕೇಂದ್ರದಲ್ಲಿ ದಲ್ಲಾಲಿಗಳ ದರ್ಬಾರ ಜೋರಾಗಿದೆ ಎಂದು ರೈತರು ಹಾಗೂ ರೈತ ಸಂಘಟನೆಗಳು ಆರೋಪ ಮಾಡುತ್ತಿವೆ.

ವರದಿ : ಜಿಲಾನಸಾಬ್ ಬಡಿಗೇರ್
