ನರೇಗಾ ಉದ್ಯೋಗ ಚೀಟಿಗಳಿಗೆ ಇ-ಕೆವೈಸಿ ಕಡ್ಡಾಯ ಗಂಗಾವತಿ ತಾಪಂ ಇಓ ರಾಮರೆಡ್ಡಿ ಪಾಟೀಲ್ ಸೂಚನೆ..

ನರೇಗಾ ಉದ್ಯೋಗ ಚೀಟಿಗಳಿಗೆ ಇ-ಕೆವೈಸಿ ಕಡ್ಡಾಯ ಗಂಗಾವತಿ ತಾಪಂ ಇಓ ರಾಮರೆಡ್ಡಿ ಪಾಟೀಲ್ ಸೂಚನೆ..

ಗಂಗಾವತಿ : ತಾಲೂಕಿನ 18 ಗ್ರಾಮ ಪಂಚಾಯಿತಿಗಳಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ನೋಂದಾಯಿತ ಸಕ್ರಿಯ ಕುಟುಂಬಗಳ ಜಾಬ್ ಕಾರ್ಡಗಳಲ್ಲಿರುವ ಎಲ್ಲ ಸದಸ್ಯರು ಸೆಪ್ಟೆಂಬರ್ 30ರ ಒಳಗಾಗಿ ಇ-ಕೆವೈಸಿ ಹೊಂದುವುದು ಕಡ್ಡಾಯವಾಗಿದೆ ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಮರೆಡ್ಡಿ ಪಾಟೀಲ್ ಅವರು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.ತಾಲ್ಲೂಕಿನ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿರುವ ಸಿಬ್ಬಂದಿಗಳು, ಬೇರ್ಫೂಟ್ ಟೆಕ್ನಿಷಿಯನ್ ಗಳು, ಜಿಕೆಎಂಗಳಿಗೆ ತರಬೇತಿ ನೀಡುವ ಮೂಲಕ ಈಗಾಗಲೇ ಈ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ಮೊದಲನೇ ಹಂತದಲ್ಲಿ ಪ್ರಾಯೋಗಿಕವಾಗಿ ತುಮಕೂರು, ಕೊಪ್ಪಳ, ಕೋಲಾರ, ಹಾಸನ ಹಾಗೂ ಹಾವೇರಿ ಜಿಲ್ಲೆಗಳನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಆಯುಕ್ತಾಲಯದಿಂದ ಆಯ್ಕೆ ಮಾಡಿಕೊಳ್ಳಲಾಗಿದೆ. ನರೇಗಾ ಯೋಜನೆಯಡಿ ಅನುಷ್ಠಾನಗೊಳ್ಳುವ ಕಾಮಗಾರಿಗಳಲ್ಲಿ ಕೆಲಸ ನಿರ್ವಹಿಸುವ ಕೂಲಿಕಾರರ ಪ್ರತಿಯೊಬ್ಬರ ಏಣಿಕೆ ಮೂಲಕ ಎನ್ ಎಂ ಎಂ ಎಸ್ (NMMS) ಹಾಜರಾತಿ ಸಂಖ್ಯೆ ಆನ್ ಲೈನ್ ತೆಗೆದುಕೊಳ್ಳುತ್ತಿದ್ದು, ಇ-ಕೆವೈಸಿ ಹೊಂದಿರುವರು ಅವರ ಹಾಜರಾತಿ ತೆಗೆದುಕೊಳ್ಳುವಾಗ ಅವರ ಆಧಾರ್ ನಂಬರ್ ಮತ್ತು ಸ್ಥಳದಲ್ಲಿ ಹಾಜರಿದ್ದವರ ಮುಖ ಹೊಂದಾಣಿಕೆಯಾಗಿದ್ದಲ್ಲಿ ಮಾತ್ರ ಅವರ ಎನ್ ಎಂ ಎಂ ಎಸ್ ಪರಿಗಣಿಸಲಾಗುತ್ತದೆ ಎಂದು ತಿಳಿಸಿದ್ದಾರೆ.ಗಂಗಾವತಿ ತಾಲೂಕಿನಲ್ಲಿ ಒಟ್ಟು 72,326 ಸಕ್ರಿಯ ನರೇಗಾ ಕೂಲಿಕಾರರಿದ್ದು, ಇಲ್ಲಿಯವರೆಗೆ 19831 ಕೂಲಿಕಾರರು ಇ-ಕೆವೈಸಿ ಹೊಂದಿದ್ದು, 52495 ಕೂಲಿಕಾರರು ಇ-ಕೆವೈಸಿ ಹೊಂದುವುದು ಬಾಕಿ ಇರುತ್ತದೆ. ಈಗಾಗಲೇ ಗ್ರಾಮ ಪಂಚಾಯತಿಯ ವ್ಯಾಪ್ತಿಯಲ್ಲಿ ಐಇಸಿ ಕಾರ್ಯಕ್ರಮಗಳಾದ ಮೈಕ್ ಮೂಲಕ, ಸ್ವಚ್ಛ ವಾಹಿನಿಯ ಮೂಲಕ ಪ್ರಚಾರ ಕೈಗೊಂಡಿದ್ದು, ತಾಲೂಕಿನಲ್ಲಿ 52495 ಕೂಲಿಕಾರರು ಇ-ಕೆವೈಸಿ ಹೊಂದುವುದು ಬಾಕಿ ಇರುವುದರಿಂದ ಪ್ರತಿಯೊಬ್ಬ ನರೇಗಾ ಕೂಲಿಕಾರರು ತಪ್ಪದೇ ಗ್ರಾಮ ಪಂಚಾಯತಿಗೆ ಭೇಟಿ ನೀಡಿ ಇ-ಕೆವೈಸಿ ಮಾಡಿಸಿಕೊಳ್ಳಬೇಕು. ಇ-ಕೆವೈಸಿ ಮಾಡಿಸದೇ ಇರುವಂತಹ ಕೂಲಿಕಾರರ ಎನ್ ಎಂಎಂಎಸ್ ನಲ್ಲಿ ಹಾಜರಾತಿಯನ್ನು ಅಕ್ಟೋಬರ್, 01 ರಿಂದ ಆನ್ ಲೈನ್ ನಲ್ಲಿ ತೆಗೆದುಕೊಳ್ಳುವುದಿಲ್ಲ. ತುರ್ತಾಗಿ ಮಹಾತ್ಮಾ ಗಾಂಧಿ ನರೇಗಾ ಯೋಜನೆಯ ಎಲ್ಲಾ ಕೂಲಿಕಾರರು ನಿಮ್ಮ ಆಧಾರ ಕಾಡ್ ಹಾಗೂ ಉದ್ಯೋಗ ಚೀಟಿಯೊಂದಿಗೆ ನಿಮ್ಮ ಗ್ರಾಮ ಪಂಚಾಯತಿಗೆ ಭೇಟಿ ನೀಡಿ ಇ-ಕೆವೈಸಿ ಹೊಂದಬೇಕೆಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಮರೆಡ್ಡಿ ಪಾಟೀಲ್ ಅವರು ಪ್ರಕಟಣೆ ಮೂಲಕ ತಿಳಿಸಿದ್ದಾರೆ.

Leave a Reply

Your email address will not be published. Required fields are marked *