ಒಂದು ತಿಂಗಳ ಕಾಲ ಅನಿರ್ದಿಷ್ಟಾವಧಿ ಹೋರಾಟ ಮುಂದೂಡಿಕೆ..
ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ವಿವಿಧ ನ್ಯಾಯಸಮ್ಮತ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ದಿನಾಂಕ 21-09-2026ರಿಂದ ರಾಜ್ಯಾದ್ಯಂತ ಹಮ್ಮಿಕೊಳ್ಳಲು ಉದ್ದೇಶಿಸಿದ್ದ ಅನಿರ್ದಿಷ್ಟಾವಧಿ ಹೋರಾಟವನ್ನು ತಾತ್ಕಾಲಿಕವಾಗಿ ಒಂದು ತಿಂಗಳ ಕಾಲ ಮುಂದೂಡಲಾಗಿದೆ.ದಿನಾಂಕ 19-09-2026ರಂದು ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರೊಂದಿಗೆ ನಡೆದ ಸಭೆಯಲ್ಲಿ ಸಂಘದ ಪ್ರಮುಖ ಬೇಡಿಕೆಗಳ ಕುರಿತು ಸುದೀರ್ಘವಾಗಿ ಚರ್ಚಿಸಲಾಯಿತು. ಬೇಡಿಕೆಗಳಿಗೆ ಸಂಬಂಧಿಸಿದಂತೆ ಇಲಾಖೆಯ ಮಟ್ಟದಲ್ಲಿ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲು ಸ್ವಲ್ಪ ಕಾಲಾವಕಾಶ ಬೇಕೆಂದು ಮಾನ್ಯ ಸಚಿವರು ಕೋರಿದ್ದಾರೆ.ಸರ್ಕಾರದೊಂದಿಗೆ ಸದಾ ಸಕಾರಾತ್ಮಕವಾಗಿ ಕಾರ್ಯನಿರ್ವಹಿಸುತ್ತಿರುವ ಜವಾಬ್ದಾರಿಯುತ ಸಂಘವಾಗಿ, ಸರ್ಕಾರದೊಂದಿಗೆ ಸಹಕರಿಸಬೇಕೆಂಬ ಸಚಿವರ ಮಾತಿಗೆ ಗೌರವ ನೀಡಿ ಹಾಗೂ ಬೇಡಿಕೆಗಳ ಈಡೇರಿಕೆಗೆ ಅವಕಾಶ ಕಲ್ಪಿಸುವ ಉದ್ದೇಶದಿಂದ ಸಂಘವು ಹೋರಾಟವನ್ನು ಒಂದು ತಿಂಗಳ ಕಾಲ ಮುಂದೂಡಲು ನಿರ್ಧರಿಸಿದೆ.ಈ ಕಾಲಾವಕಾಶದೊಳಗೆ ಸರ್ಕಾರವು ಸಂಘದ ನ್ಯಾಯಸಮ್ಮತ ಬೇಡಿಕೆಗಳನ್ನು ಈಡೇರಿಸಲು ಅಗತ್ಯ ಕ್ರಮ ಕೈಗೊಳ್ಳಲಿದೆ ಎಂಬ ವಿಶ್ವಾಸ ಸಂಘಕ್ಕಿದೆ. ಒಂದು ತಿಂಗಳ ಅವಧಿಯ ನಂತರವೂ ಬೇಡಿಕೆಗಳು ಈಡೇರದಿದ್ದಲ್ಲಿ, ರಾಜ್ಯ ಕಾರ್ಯಕಾರಿ ಸಮಿತಿಯೊಂದಿಗೆ ಚರ್ಚಿಸಿ ರಾಜ್ಯಮಟ್ಟದ ಹೋರಾಟದ ಮುಂದಿನ ರೂಪುರೇಷೆಗಳನ್ನು ಸಿದ್ಧಪಡಿಸಲಾಗುವುದು.ಇಂತಿ,ಸುರೇಶ್ ಛಲವಾದಿ ಜಿಲ್ಲಾ ಅಧ್ಯಕ್ಷರುಕರ್ನಾಟಕ ರಾಜ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಕ್ಷೇಮಾಭಿವೃದ್ಧಿ ಸಂಘ (ರಿ.), ಕೊಪ್ಪಳ ಘಟಕ

