ನಗರ ಸಭೆ ವ್ಯಾಪ್ತಿಯ ವಾರ್ಡ್ ನಂಬರ್ 31 ರಲ್ಲಿನ ಸರಸ್ವತಿ ನ್ಯಾಯಬೆಲೆ ಅಂಗಡಿಯನ್ನು ರದ್ದುಪಡಿಸಲು ಮುಂದಾದ ಕ್ರಮವನ್ನು ಖಂಡಿಸಿ ಪ್ರತಿಭಟನೆ.

ಗಂಗಾವತಿ.. ಇಲ್ಲಿನ ನಗರಸಭೆ ವ್ಯಾಪ್ತಿಯ ವಿರುಪಾಪುರ ತಾಂಡಾದಲ್ಲಿರುವ ಹಲವು ವರ್ಷಗಳಿಂದ ನ್ಯಾಯಬೆಲೆ ಅಂಗಡಿಯನ್ನು ನಡೆಸಿಕೊಂಡು ಬರುತ್ತಿರುವ ಸರಸ್ವತಿ ನ್ಯಾಯಬೆಲೆ ಅಂಗಡಿಯನ್ನು ವಿನಾಕಾರಣ ಸುಳ್ಳು ಆರೋಪಗಳನ್ನು ನಡೆಸಿ ರದ್ದುಪಡಿಸಲು ಮುಂದಾದ ಅಧಿಕಾರಿಗಳ ಕ್ರಮವನ್ನು ಖಂಡಿಸಿ ಶ್ರೀ ಸೇವಾಲಾಲ್ ಮಹಾರಾಜ ಕಟ್ಟಡ ಕಾರ್ಮಿಕ ಸಂಘದ ಅಧ್ಯಕ್ಷರು ಸದಸ್ಯರು ಸೇರಿದಂತೆ ವಾರ್ಡಿನ ನಿವಾಸಿಗಳು ಬೃಹತ್ ಪ್ರತಿಭಟನೆ ನಡೆಸಿದರು. ವಿರುಪಾಪುರ್ ತಂಡ ದಿಂದ ಹೊರಟ ಪ್ರತಿಭಟನೆಕಾರರು ಆಹಾರ ಇಲಾಖೆಯ ಅಧಿಕಾರಿಗಳ ವಿರುದ್ಧ ವಿವಿಧ ಘೋಷಣೆಗಳನ್ನು ಕೂಗುತ್ತಾ ಆಗಮಿಸಿ ತಹಸೀಲ್ದಾರರಿಗೆ ಮನವಿ ಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಪಾಂಡು ನಾಯ್ಕ್ ಮಾತನಾಡಿ. ಸರಸ್ವತಿ ನ್ಯಾಯಬೆಲೆ ಅಂಗಡಿಯ ಮಾಲೀಕರು ಯಾವುದೇ ದಾಖಲಾತಿಗಳನ್ನು ಸಮರ್ಪಕವಾಗಿ ನಿರ್ವಹಿಸದೆ ನಿರ್ಲಕ್ಷ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಜೊತೆಗೆ ಹಲವು ಲೋಪಗಳನ್ನು ವೆ ಸಗಿದ್ದಾರೆ ಎಂದು ಆರೋಪಿಸಿ ನ್ಯಾಯಬೆಲೆ ಅಂಗಡಿಯಲ್ಲೂ ರದ್ದುಗೊಳಿಸಿ ತಮಗೆ ಬೇಕಾದವರಿಗೆ ಅವಕಾಶ ನೀಡಲು ಮುಂದಾದ ಕ್ರಮ ಸೂಕ್ತದಾಯಕವಲ್ಲ ಈ ಹಿನ್ನೆಲೆಯಲ್ಲಿ ಈ ಎಂದಿನಂತೆಯೇ ನ್ಯಾಯಬೆಲೆ ಅಂಗಡಿಯನ್ನು ಮುಂದುವರಿಸಿ ಕೊಂಡು ಹೋಗಲು ಅವಕಾಶ ಕಲ್ಪಿಸಬೇಕು ಯಾವುದೇ ಕಾರಣಕ್ಕೂ ರದ್ದುಪಡಿಸಲು ಮುಂದಾದಲ್ಲಿ ಉಗ್ರ ಸ್ವರೂಪದ ಹೋರಾಟಗಳನ್ನು ನಡೆಸಲಾಗುವುದು ಎಂದು ಎಚ್ಚರಿಸಿದರು. ಈ ಸಂದರ್ಭದಲ್ಲಿ ಉಪಾಧ್ಯಕ್ಷ ಬಾಲಾಜಿ ಮೇಸ್ತ್ರಿ ಪ್ರಧಾನ ಕಾರ್ಯದರ್ಶಿ ಶಿವಪ್ಪ ಸಹಕಾರಿ. ಶಿವಪ್ಪ ರಾಥೋಡ್ ಮೇಸ್ತ್ರಿ ಸಂಘಟನಾ ಕಾರ್ಯದರ್ಶಿ ಹನುಮಂತಪ್ಪ ಮೇಸ್ತ್ರಿ ಹಾಗೂ ಖಜಾಂಚಿ ರವಿಚಂದ್ರ ಮೇಸ್ತ್ರಿ ಸೇರಿದಂತೆ ವಾರ್ಡಿನ ಮಹಿಳೆಯರು ಪುರುಷರು ಪ್ರತಿಭಟನೆಯಲ್ಲಿ ಪಾಲ್ಗೊಂಡು ಉಪತಸಿಲ್ದಾರ್ ಮಹಾಂತಗೌಡ ಪಾಟೀಲ್ ಅವರಿ ಗೆ ಮನವಿ ಪತ್ರ ಸಲ್ಲಿಸಿದರು.

