ಕೈಗಾರಿಕಾ ಕಾರಿಡಾರ್‌ಗೆ ಭೂಮಿ ಮೀಸಲು ಶಾಸಕ ಹೆಚ್.ಆರ್.ಗವಿಯಪ್ಪ ಹೇಳಿಕೆ…

ಕೈಗಾರಿಕಾ ಕಾರಿಡಾರ್‌ಗೆ ಭೂಮಿ ಮೀಸಲು ಶಾಸಕ ಹೆಚ್.ಆರ್.ಗವಿಯಪ್ಪ ಹೇಳಿಕೆ…

ವಿಜಯನಗರ / ಹೊಸಪೇಟೆ : ಜಿಲ್ಲೆಯಲ್ಲಿ ಕೈಗಾರಿಕಾ ಕಾರಿಡಾರ್ ಸ್ಥಾಪನೆಗಾಗಿ ಮರಿಯಮ್ಮನಹಳ್ಳಿ ವ್ಯಾಪ್ತಿಯಲ್ಲಿ ಈಗಾಗಲೇ 1 ಸಾವಿರ ಎಕರೆ ಪ್ರದೇಶವನ್ನು ಗುರುತಿಸಲಾಗಿದ್ದು, ಇದರಿಂದ ಸ್ಥಳೀಯ ನಿರುದ್ಯೋಗಿಗಳಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಶಾಸಕ ಹೆಚ್‌.ಆ‌ರ್.ಗವಿಯಪ್ಪ ಹೇಳಿದರು.ಹೊಸಪೇಟೆಯ ವಿಜಯನಗರ ಕಾಲೇಜು ಆವರಣದಲ್ಲಿ ಶನಿವಾರ ಆಯೋಜಿಸಲಾಗಿದ್ದ ಮೆಗಾ ಉದ್ಯೋಗ ಮೇಳವನ್ನು ಉದ್ಘಾಟಿಸಿ ಮಾತನಾಡಿದರು.ಜಿಲ್ಲೆಯು ಪ್ರವಾಸೋದ್ಯಮ ತಾಣವಾಗಿದ್ದು ಮುಂದಿನ ದಿನಗಳಲ್ಲಿ ಬೃಹತ್ತಾಗಿ ಬೆಳೆಯುವ ಸಂಭವ ಹೆಚ್ಚಿದೆ. ಹಾಗೆಯೇ ಜಿಲ್ಲೆಯಲ್ಲಿ ವಸತಿ ಗೃಹಗಳ ಕೊರತೆ ಇದೆ. ಆದ್ದರಿಂದ ಜಿಲ್ಲೆಯಲ್ಲಿ ವಿವಿಧೆಡೆ 150 ರಿಂದ 200 ಎಕರೆ ಸರ್ಕಾರಿ ಸ್ಥಳ ಗರುತಿಸಿ ಸುಸಜ್ಜಿತವಾದ ಗೆಸ್ಟ್‌ಹೌಸ್ ನಿರ್ಮಿಸಿ ಪ್ರವಾಸೋದ್ಯಮ ಇಲಾಖೆಗೆ ಹಸ್ತಾಂತರಿಸಲು ಯೋಜನೆ ರೂಪಿಸಲಾಗಿದೆ ಎಂದರು.ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಮಾತನಾಡಿ, ಮೇಳದಲ್ಲಿ 75ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಿದ್ದು, ಅಭ್ಯರ್ಥಿಗಳು ಸಿಕ್ಕ ಅವಕಾಶವನ್ನು ಶ್ರದ್ಧೆಯಿಂದ ಬಳಸಿಕೊಳ್ಳಬೇಕು ಎಂದು ಕರೆ ನೀಡಿದರು.ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಕಾಧಿಕಾರಿ ನೋಂಗ್ವಾಯ್ ಮಹ್ಮದ್ ಅಲಿ ಅಕ್ರಂ ಷಾ, ಜಿಲ್ಲಾ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಹೆಚ್.ಎನ್.ಎಫ್.ಇಮಾಮ್ ನಿಯಾಜಿ, ನಗರಸಭೆ ಅಧ್ಯಕ್ಷ ಎನ್.ರೂಪೇಶ್ ಕುಮಾರ್, ವಿಜಯನಗರ ಕಾಲೇಜು ಪ್ರಾಂಶುಪಾ ಮಹಾಂತೇಶ್ ಆರಾಧ್ಯಮಠ, ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಅಶ್ವಿನ್ ಕೊತ್ತಂಬರಿ, ವಿವಿಧ ಕಂಪನಿಗಳ ಮುಖ್ಯಸ್ಥರು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಸೇರಿದಂತೆ ಇತರರಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

Leave a Reply

Your email address will not be published. Required fields are marked *