ರಾಷ್ಟ್ರೀಯ ಹ್ಯಾಂಡ್‌ಬಾಲ್ ಸ್ಪರ್ಧೆ : ದ್ವಿತೀಯ ಸ್ಥಾನ..

ರಾಷ್ಟ್ರೀಯ ಹ್ಯಾಂಡ್‌ಬಾಲ್ ಸ್ಪರ್ಧೆ : ದ್ವಿತೀಯ ಸ್ಥಾನ..

ಗಂಗಾವತಿ. ಮಂಡ್ಯ ಜಿಲ್ಲೆಯಲ್ಲಿ ಹ್ಯಾಂಡಬಾಲ್ ಅಸೋಸಿಯೇಷನ್ ಆಫ್ ಇಂಡಿಯಾ ಹಾಗೂ ಕರ್ನಾಟಕ ರಾಜ್ಯ ಹ್ಯಾಂಡ್‌ಬಾಲ್ ಅಸೋಸಿಯೇಷನ್ ವತಿಯಿಂದ ಇತ್ತೀಚೆಗೆ 39ನೇ ರಾಷ್ಟ್ರೀಯ ಸಬ್ ಜೂನಿಯರ್ ಬಾಲಕಿಯರ ಹ್ಯಾಂಡ್‌ಬಾಲ್ ಪಂದ್ಯಾವಳಿಯನ್ನು ನಡೆಸಲಾಯಿತು. ಪಂದ್ಯಾವಳಿಯಲ್ಲಿ ಗಂಗಾವತಿಯ ಬೇಥಲ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಜಾಗೃತಿ ಭಾಗವಹಿಸಿ, ಉತ್ತಮ ಪ್ರದರ್ಶನವನ್ನು ನೀಡುವ ಮೂಲಕ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಕ್ರೀಡಾಕೂಟದಲ್ಲಿ ದೇಶದ 27 ರಾಜ್ಯಗಳಿಂದ ತಂಡಗಳು ಭಾಗವಹಿಸಿದ್ದು, ಕರ್ನಾಟಕದಿಂದ ಪ್ರತಿನಿಧಿಸಿದ ತಂಡದಲ್ಲಿ ವಿದ್ಯಾರ್ಥಿನಿಯು ಭಾಗವಹಿಸಿ, ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಇವರ ಉತ್ತಮ ಪ್ರದರ್ಶನದಿಂದ ಜಿಲ್ಲೆಯ ಹಾಗೂ ರಾಜ್ಯದ ಕೀರ್ತಿ ಹೆಚ್ಚಳವಾಗಿದೆ ಎಂದು ಹ್ಯಾಂಡ್‌ಬಾಲ್ ತರಬೇತುದಾರರಾದ ಯಮನೂರ ಅವರು ಪ್ರಕಟಣೆ ತಿಳಿಸಿದ್ದಾರೆ. ——————-ಮಂಡ್ಯದಲ್ಲಿ ನಡೆದ ರಾಷ್ಟ್ರೀಯ ಹ್ಯಾಂಡಬಾಲ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿರುವ ವಿದ್ಯಾರ್ಥಿನಿ ಜಾಗೃತಿಗೆ ತರಬೇತುದಾರರು ಪ್ರಶಸ್ತಿ ಪತ್ರ ವಿತರಣೆ ಮಾಡಿರುವುದು.

Leave a Reply

Your email address will not be published. Required fields are marked *