ಹೆಣ್ಣುಮಕ್ಕಳ ಯಶಸ್ವಿಗೆ ಶಿಕ್ಷಣವೊಂದೇ ದಾರಿ ಡಾ.ಸ್ಮಿತಾ ಐಲಿ.

.ಹೆಣ್ಣುಮಕ್ಕಳ ಯಶಸ್ವಿಗೆ ಶಿಕ್ಷಣವೊಂದೇ ದಾರಿ ಡಾ.ಸ್ಮಿತಾ ಐಲಿ.
ಗಂಗಾವತಿ:24 ಇಂದು ಜನವರಿ 24 ರಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವೆಂದು ಗಂಗಾವತಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಆಚರಿಸಲಾಗುತ್ತದೆ. ಈ ಸಂದರ್ಭದಲ್ಲಿ ಇಂದು ಹುಟ್ಟುವ ಹೆಣ್ಣು ಮಗುವಿಗೆ ಹೊಸ ಬಟ್ಟೆ ಕೊಟ್ಟು ಕೇಕ್ ಕಟ್ ಮಾಡುವ ಮೂಲಕ ಸರಳವಾಗಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಮಾಡಲಾಯಿತು, ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಅಂಗವಾಗಿ ಎಲ್ಲಾ ತಾಲೂಕು ಆಸ್ಪತ್ರೆ ಮತ್ತು ಜಿಲ್ಲಾಸ್ಪತ್ರೆಗಳಿಗೆ ಗುಲಾಬಿ ಬಣ್ಣದ ದೀಪಾಲಂಕಾರ ಮಾಡಲು ಹೆಣ್ಣು ಮಕ್ಕಳ ಆರೋಗ್ಯ ಕಾಪಾಡುವ ವಿಚಾರದಲ್ಲಿ ಆರೋಗ್ಯ ಇಲಾಖೆ ಹಲವು ಕಾರ್ಯಕ್ರಮಗಳನ್ನ ಹಾಕಿಕೊಂಡಿದೆ. ಅನಿಮೀಯಾ ಮುಕ್ತ ಪೌಷ್ಠಿಕ ಕರ್ನಾಟಕ ಯೋಜನೆ ಹೆಣ್ಣುಮಕ್ಕಳ ರಕ್ತ ಹೀನತೆ ಹೋಗಲಾಡಿಸುವಲ್ಲಿ ಮಹತ್ವದ ಯೋಜನೆಯಾಗಿದೆ. ಶುಚಿ ಯೋಜನೆ, ಜನನಿ ಸುರಕ್ಷಾ ಯೋಜನೆಗಳನ್ನ ಜಾರಿಗೊಳಿಸದೆ. ವಿಶೇಷವಾಗಿ ಹೆಣ್ಣುಭ್ರೂಣ ಹತ್ಯೆಗಳನ್ನ ನಡೆಸುವವರ ವಿರುದ್ಧ ಕೇಸ್ ದಾಖಲಿಸಿ ಕ್ರಮ ಕೈಗೊಳ್ಳಲಾಗುತ್ತಿದೆ ಹೆಣ್ಣು ಹುಟ್ಟುವ ಮೊದಲೇ ಎದುರಿಸುವ ಲಿಂಗ ತಾರತಮ್ಯವು ಒಂದು ಪ್ರಚಲಿತ ಸಮಸ್ಯೆಯಾಗಿದೆ. ಇಂದಿಗೂ ಸಹ ಹೆಚ್ಚಿನ ಜನರು ಹೆಣ್ಣು ಮಕ್ಕಳಿಗಿಂತ ಗಂಡು ಮಕ್ಕಳನ್ನು ಹೊಂದಬೇಕೆಂದು ಎಂದು ನಂಬುತ್ತಾರೆ. ಇದು ಸರಿಯಲ್ಲ. ಹೆಣ್ಣನ್ನ ಪೂಜ್ಯ ಭಾವನೆಯಆಚರಿಸಲಾಗುತ್ತದೆ. ಲಿಂಗ ಪತ್ತೆ ಮತ್ತು ಗರ್ಭಪಾತ ನಡೆಸುವ ಎಲ್ಲಾ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವ ಮೂಲಕ ಮತ್ತು ಹೆಣ್ಣು ಮಗುವಿನ ಮೌಲ್ಯದ ಬಗ್ಗೆ ಜಾಗೃತಿ ಮೂಡಿಸುವ ಮೂಲಕ PCPNDT ಕಾಯ್ದೆಯನ್ನು ರಾಜ್ಯದಲ್ಲಿ ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದೆ. ಸಮಾಜದಲ್ಲಿ ಹೆಣ್ಣು ಮಗು ಎದುರಿಸುತ್ತಿರುವ ಎಲ್ಲಾ ಅಸಮಾನತೆಗಳ ಬಗ್ಗೆ ದಿನಾಚರಣೆಯ ಮೂಲಕ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ಮುಖ್ಯವೈದ್ಯಾಧಿಕಾರಿಗಳಾದ ಡಾ.ಸ್ಮಿತಾ ಐಲಿ ಹೇಳಿದರು.ನಂತರ ಮಾತನಾಡಿದ ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಆಶಾಬೇಗಂ ಹೆಣ್ಣು ಮಕ್ಕಳು ಪ್ರತಿ ಮನೆಯ ದೊಡ್ಡ ಆಸ್ತಿ… ಹೆಣ್ಣು ಮಗುವಿನಿಂದ ಮನೆ, ಕುಟುಂಬ ಬೆಳೆಯುತ್ತದೆ, ಬೆಳಗುತ್ತದೆ ಎಂಬುದು ಸತ್ಯ. ಪ್ರತಿ ಕುಟುಂಬದಲ್ಲೂ ಹೆಣ್ಣು ಮಕ್ಕಳ ಪಾತ್ರ ಹಿರಿದು. ಹೆಣ್ಣು ಕುಟುಂಬದ ಶಕ್ತಿಯೂ ಹೌದು. ಹೀಗೆ ಪ್ರತಿಯೊಬ್ಬರ ಬಾಳಿನಲ್ಲೂ ಮಹತ್ವದ ಪಾತ್ರ ವಹಿಸುವ ಹೆಣ್ಣು ಮಕ್ಕಳಿಗಾಗಿ ಮೀಸಲಾದ ದಿನವಿದು. ಹೆಣ್ಣು ಮಕ್ಕಳ ಹಕ್ಕುಗಳು, ಶಿಕ್ಷಣ, ಆರೋಗ್ಯ, ಪೋಷಣೆಯ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಪ್ರತಿವರ್ಷ ಜನವರಿ 24 ರಂದು ಭಾರತದಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನು ಆಚರಿಸಲಾಗುತ್ತದೆಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯವು 2008ರಿಂದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನು ಆಚರಿಸಲು ಪ್ರಾರಂಭಿಸಿತ್ತು. ಈ ದಿನ ಹೆಣ್ಣು ಮಕ್ಕಳ ಹಕ್ಕುಗಳ ಹಾಗೂ ಯೋಗಕ್ಷೇಮವನ್ನು ಉತ್ತೇಜಿಸುತ್ತದೆ. ಇದು ಬಾಲ್ಯವಿವಾಹ, ತಾರತಮ್ಯ, ಹೆಣ್ಣುಮಕ್ಕಳ ಮೇಲಿನ ದೌರ್ಜನ್ಯ, ಅಸಮಾನತೆ ಸೇರಿ ಹೆಣ್ಣು ಮಕ್ಕಳು ಎದುರಿಸುತ್ತಿರುವ ಹಲವಾರು ಸವಾಲು, ಸಮಸ್ಯೆಗಳನ್ನು ಪರಿಹರಿಸಲು ವೇದಿಕೆಯನ್ನು ಒದಗಿಸಿದೆ.ಈ ಸಂದರ್ಭದಲ್ಲಿ ಡಾ.ಮಾಧುರಿ, ಡಾ.ಕರಿಷ್ಮಾ, ಆಸ್ಪತ್ರೆ ಸಿಬ್ಬಂದಿಗಳಾದ ಮಂಜುನಾಥ, ಪೂರ್ಣಿಮಾ,ಜ್ಯೋತಿ, ಗ್ಯಾನೇಶ, ಹಾಗೂ ಸಿಬ್ಬಂದಿ ವರ್ಗದವರು ಸೇರಿದಂತೆ ಇತರರು ಇದ್ದರು

