ತುಂಗಭದ್ರ ಡ್ಯಾಮ್ ಒಳಹರಿವು ಹೆಚ್ಚಳ – ನದಿ ಪಾತ್ರದ ಜನರಿಗೆ ಎಚ್ಚರಿಕೆಯಿಂದ ಇರುವಂತೆ ಸೂಚನೆ …

ತುಂಗಭದ್ರ ಡ್ಯಾಮ್ ಒಳಹರಿವು ಹೆಚ್ಚಳ – ನದಿ ಪಾತ್ರದ ಜನರಿಗೆ ಎಚ್ಚರಿಕೆಯಿಂದ ಇರುವಂತೆ ಸೂಚನೆ …

ಕೊಪ್ಪಳ: ಬಿಟ್ಟುಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ತುಂಗಭದ್ರಾ ಜಲಾಶಯಕ್ಕೆ ಹೆಚ್ಚುತ್ತಿರುವ ಒಳಹರಿವಿನ ಕಾರಣದಿಂದಾಗಿ, ನದಿ ಪಾತ್ರದ ಜನರಿಗೆ ಎಚ್ಚರದಿಂದ ಇರುವಂತೆ ಸೂಚನೆ ನೀಡಲಾಗಿದೆ. ಜಲಾಶಯದ ಮೇಲ್ಭಾಗದಲ್ಲಿ ಮಳೆಯಾಗುತ್ತಿರುವುದರಿಂದ, ತುಂಗಾ, ಭದ್ರಾ ಮತ್ತು ವರದಾ ನದಿಗಳಿಂದ ನೀರು ಹರಿದು ಬರುತ್ತಿದೆ.ಜಿಲ್ಲೆಯ ಮುನಿರಾಬಾದ್ ಬಳಿಯಿರುವ ತುಂಗಾಭದ್ರಾ ಜಲಾಶಯಕ್ಕೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. ಜಲಾಶಯದಿಂದ ನದಿಗೆ 26,000 ಕ್ಯುಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ. ಇದರಿಂದಾಗಿ ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. ಒಳಹರಿವು ಹೆಚ್ಚಾದರೆ ಹೊರಹರಿವನ್ನು ಹೆಚ್ಚಿಸುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ವರದಿ : ಜಿಲಾನಸಾಬ್ ಬಡಿಗೇರ್

Leave a Reply

Your email address will not be published. Required fields are marked *