ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ವಿವಿಧ ಸ್ಪರ್ಧೆಗಳ ಕಾರ್ಯಕ್ರಮ …

ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ವಿವಿಧ ಸ್ಪರ್ಧೆಗಳ ಕಾರ್ಯಕ್ರಮ …

ಬಳ್ಳಾರಿ / ಕಂಪ್ಲಿ : ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗುರುವಾರ ಚುನಾವಣಾ ಸಾಕ್ಷರತಾ ಸಮಿತಿ ವತಿಯಿಂದ ರಾಷ್ಟ್ರೀಯ ಮತದಾರರ ದಿನಾಚರಣೆ ನಿಮಿತ್ಯ ತಾಲೂಕು ಮಟ್ಟದ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿತ್ತು. ಚುನಾವಣಾ ಸಾಕ್ಷರತಾ ಕ್ಲಬ್ ವತಿಯಿಂದ ಸಮಿತಿಯ ಸಂಚಾಲಕರಾದ ರಾಜ್ಮಾ ಟಿ.ಎಂ.ಆರ್. ರವರು ಆಯೋಜಿಸಿ ಮಾತಾನಾಡಿ ಯುವಜನರಲ್ಲಿ ಮತದಾರರ ಮಹತ್ವ ಕುರಿತು ಜಾಗೃತಿ ಮೂಡಿಸಲು ಚಿತ್ರಕಲೆ, ರಸಪ್ರಶ್ನೆ ಮತ್ತು ಪ್ರಬಂಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.ಕಾಲೇಜಿನ ಪ್ರಾಚಾರ್ಯರಾದ ಡಾ. ಶ್ರೀನಿವಾಸ್ ರೆಡ್ಡಿ ಬಿ. ರವರು ಚಾಲನೆ ನೀಡಿ ಮಾತನಾಡಿ ವಿದ್ಯಾರ್ಥಿಗಳಿಗೆ ಯುವ ಮತ್ತು ಭಾವಿ ಮತದಾರರ ಸಬಲೀಕರಣ ಹೆಚ್ಚಿನ ಅರಿವು ಮೂಡಿಸುವ ಅಗತ್ಯವಿದೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರು ಪಾಲ್ಗೊಳ್ಳಬೇಕಾಗಿದೆ ಈ ಉದ್ದೇಶದಿಂದ ನಮ್ಮ ಕಾಲೇಜಿನಲ್ಲಿ ಈ ಕಾರ್ಯಕ್ರಮ ಹಮ್ಮಿಕೊಂಡಿರುವುದು ಶ್ಲಾಘನೀಯವಾಗಿದೆ ಎಂದು ತಿಳಿಸಿದರು. ವಿವಿಧ ಸ್ಪರ್ಧೆಗಳಲ್ಲಿ 80ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಸ್ಪರ್ಧೆಯಲ್ಲಿ ವಿಜೇತರಾದವರು ಬಳ್ಳಾರಿ ನಗರದ ಎಸ್ ಎಸ್ ಎ ಸರ್ಕಾರಿ ಪ್ರಥಮ ದರ್ಜೆ ಕಾಲೇಜು (ಸ್ವಾಯುತ್ತ) ಅಲ್ಲಿ ನಡೆಯುವ ಜಿಲ್ಲಾಮಟ್ಟದ ಅಂತರ್ ಕಾಲೇಜುಗಳ ಸ್ಪರ್ಧೆಗಳಿಗೆ ಜಿಲ್ಲಾ ಮಟ್ಟದಲ್ಲಿ ಆಯ್ಕೆಗೊಳಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ಇತರ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯವರು ಉಪಸ್ಥಿತರಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

Leave a Reply

Your email address will not be published. Required fields are marked *