ಲಿಟಲ್ ಹಾರ್ಟ್ಸ್ ಶಾಲೆಯಲ್ಲಿ ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆ ಯಶಸ್ವಿ….

ಲಿಟಲ್ ಹಾರ್ಟ್ಸ್ ಶಾಲೆಯಲ್ಲಿ ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆ ಯಶಸ್ವಿ….

ಗಂಗಾವತಿ: ತಾಲೂಕಿನ ಮಟ್ಟದ ಯೋಗಾಸನ ಸ್ಪರ್ಧೆಯನ್ನು ಇಂದು ನಗರದ ಲಿಟಲ್ ಹಾರ್ಟ್ಸ್ ಶಾಲೆಯಲ್ಲಿ ಅದ್ದೂರಿಯಾಗಿ ಆಯೋಜಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಕಾರ್ಯದರ್ಶಿಗಳಾದ ಜಗನ್ನಾಥ ಆಲಂಪಲ್ಲಿ ಅವರು ವಹಿಸಿ, ಯೋಗದ ಮಹತ್ವವನ್ನು ತಿಳಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.ಕಾರ್ಯಕ್ರಮದಲ್ಲಿ ತಾಲೂಕು ದೈಹಿಕ ಶಿಕ್ಷಣ ಪರೀಕ್ಷಕರಾದ ಶ್ರೀಮತಿ ಸರಸ್ವತಿ ಜೋಡಿ, ತಾಲೂಕು ಅಧ್ಯಕ್ಷರಾದ ಯಂಕಪ್ಪ ತಳವಾರ್, ಜಿಲ್ಲಾ ಕಾರ್ಯದರ್ಶಿ ನಾಗರಾಜ್ ಟಿ, ಖಜಾಂಚಿ ಶಕುಂತಲಾ ಸೇರಿದಂತೆ ದೈಹಿಕ ಶಿಕ್ಷಣ ಶಿಕ್ಷಕರಾದ ಉಜ್ಜನಗೌಡ, ಸೋಮಶೇಖರ್ ಅಧಿಕಾರಿ, ಭಾನುಪ್ರಸಾದ್, ಶಂಕರ್, ಉಮಾದೇವಿ, ಛತ್ರಪ್ಪ, ಮಂಜುಳಾ, ವರಮಹಾಲಕ್ಷ್ಮಿ ಹಾಗೂ ಅಜರುದ್ದೀನ್ ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಮೆರುಗು ತಂದರು.ತಾಲೂಕಿನ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಉತ್ಸಾಹದಿಂದ ಯೋಗಾಸನ ಪ್ರದರ್ಶನ ನೀಡಿ ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಿದರು. ಕಾರ್ಯಕ್ರಮವು ಶಿಸ್ತುಬದ್ಧವಾಗಿ ಹಾಗೂ ಯಶಸ್ವಿಯಾಗಿ ನೆರವೇರಿದ್ದು, ಯೋಗದ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವಲ್ಲಿ ಮಹತ್ವದ ಪಾತ್ರ ವಹಿಸಿತು ಎಂದು ಗಣ್ಯರು ಅಭಿಪ್ರಾಯಪಟ್ಟರು.

Leave a Reply

Your email address will not be published. Required fields are marked *