ಮಕ್ಕಳ ಭವಿಷ್ಯ ಶಿಕ್ಷಕರ ಕೈಯಲ್ಲಿದೆ : ಎಸ್ಡಿಎಂಸಿ ಅಧ್ಯಕ್ಷ ಸಿ.ಮಲ್ಲಯ್ಯ…

ಮಕ್ಕಳ ಭವಿಷ್ಯ ಶಿಕ್ಷಕರ ಕೈಯಲ್ಲಿದೆ : ಎಸ್ಡಿಎಂಸಿ ಅಧ್ಯಕ್ಷ ಸಿ.ಮಲ್ಲಯ್ಯ…

ಬಳ್ಳಾರಿ / ಕಂಪ್ಲಿ : ಮಕ್ಕಳ ಭವಿಷ್ಯ ಶಿಕ್ಷಕರ ಕೈಯಲ್ಲಿದೆ. ಪ್ರತಿಯೊಂದು ಹಂತದಲ್ಲಿ ಗುಣಾತ್ಮಕ ಶಿಕ್ಷಣ ನೀಡುವ ಮೂಲಕ ಮಕ್ಕಳನ್ನು ಉತ್ತಮ ಪ್ರಜೆಗಳನ್ನಾಗಿ ರೂಪಿಸಲು ಮುಂದಾಗಬೇಕು ಎಂದು ಎಸ್‌ಡಿಎಂಸಿ ಅಧ್ಯಕ್ಷ ಸಿ.ಮಲ್ಲಯ್ಯ ಹೇಳಿದರು.ತಾಲೂಕಿನ ನಂ.10 ಮುದ್ದಾಪುರ ಗ್ರಾಪಂಯ ಬೆಳಗೋಡ್‌ಗಾಳ್ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಅವರಣದಲ್ಲಿ ಗ್ರಾಪಂವತಿಯಿಂದ ಮಂಗಳವಾರ ಆಯೋಜಿಸಿದ್ದ ಮಕ್ಕಳ ಹಕ್ಕುಗಳ ದಿನಾಚರಣೆ ಅಂಗವಾಗಿ ಓದುವ ಬೆಳಕು, ಮಕ್ಕಳ ಧ್ವನಿ, ಮಕ್ಕಳ ಸ್ನೇಹಿ ಗ್ರಾಮಸಭೆ ಉದ್ಘಾಟಿಸಿ ಮಾತನಾಡಿ, ಕಲಿಕಾ ಹಂತದಲ್ಲಿ ಒಳ್ಳೆಯ ಶಿಕ್ಷಣ ಪಡೆದು, ಪೋಷಕರ ಆಸೆ, ಗ್ರಾಮ ಪಂಚಾಯಿತಿ ಕಾರ್ಯಲಯದಿಂದ ಶಾಲೆಗೆ ಮೂಲಭೂತ ಸೌಲಭ್ಯ ಒದಗಿಸಲು ಮುಂದಾಗಬೇಕು ಎಂದರು.ಪಿಡಿಒ ಶಿಲ್ಪಾರಾಣಿ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿ, ಶಿಕ್ಷಣದ ಜೊತೆಗೆ ವ್ಯಕ್ತಿತ್ವ ವಿಕಾಸ ಅತಿಮುಖ್ಯ ಮಕ್ಕಳಿಗೆ ಶಿಕ್ಷಣ ನೀಡುವುದು ಪ್ರತಿಯೊಬ್ಬ ಶಿಕ್ಷಕರ ಕರ್ತವ್ಯವಾಗಿದೆ. ಇಂದಿನ ಮಕ್ಕಳೇ ಇಂದಿನ ಪ್ರಜೆಗಳು ಎಂಬತೆ ಶಿಕ್ಷಣವನ್ನು ಪಡೆದುಕೊಂಡಾಗ ಮಾತ್ರ ದೇಶದ ಉತ್ತಮ ಪ್ರಜೆಗಳಾಗಲು ಸಾಧ್ಯ ಎಂದರು. ಮುಖ್ಯಗುರು ಟಿ.ಎಚ್ ಮರಿಸ್ವಾಮಿ ಮಾತನಾಡಿ, ಪಾಲಕರು ಮಕ್ಕಳನ್ನು ತಪ್ಪದೇ ಶಾಲೆಗೆ ಕಳಹಿಸಿ ಸರ್ಕಾರದ ಸೌಲಭ್ಯಗಳನ್ನು ಸದುಪಯೋಗ ಪಡೆಯಿರಿ ಪಂಚಾಯಿತಿ ಇಂದ ಮಕ್ಕಳ ಗ್ರಾಮ ಸಭೆ ಮಾಡುವುದರಿಂದ ಮಕ್ಕಳ ಸಮಸ್ಯೆ ಬಗೆಹರಿಸುವ ಜೊತೆಗೆ ಶಾಲೆಗೆ ಮೂಲಭೂತ ಸೌಲಭ್ಯ ಒದಗಿಸಲು ಮುಂದಾಗಬೇಕು ಎಂದರು.ಕರ್ನಾಟಕ ದಲಿತ ಸಂಘರ್ಷ ಸಮಿತಿ(ಭೀಮವಾದಿ)ಯ ತಾಲೂಕು ಘಟಕ ಅಧ್ಯಕ್ಷ ರಾಮಪ್ಪ ಸೊಂಗ್ಟಿ ನೇತೃತ್ವದಲ್ಲಿ ಮಕ್ಕಳಿಗೆ ಉಚಿತವಾಗಿ ನೋಟ್ ಪುಸ್ತಕ, ಪೆನ್ನು ಪೆನ್ಸೀಲ್ ವಿತರಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಸದಸ್ಯರಾದ ಎಸ್.ಚಂದ್ರಶೇಖರಗೌಡ, ಸಂಧ್ಯ, ಡಿಎಸ್‌ಎಸ್ ಜಿಲ್ಲಾ ಸಂಚಾಲಕರಾದ ವಿರುಪಾಕ್ಷಿ, ತಾಲೂಕು ಗೌರವಾಧ್ಯಕ್ಷ ಎನ್.ಶ್ರೀನಿವಾಸ, ಕಾರ್ಯದರ್ಶಿ ಟಿ.ನಾಗರಾಜ, ಎಸ್ಡಿಎಂಸಿ ಸದಸ್ಯ ಸಿ.ಹನುಮಂತ, ಮುಖಂಡರಾದ ಮೌಲಾಸಾಬ್, ಟಿ.ನಾಗರಾಜ, ರಾಘವೇಂದ್ರ, ಸಣಾಪುರ ವಿರೇಶ, ಕೃಷ್ಣ, ಕೆ.ರಮೇಶ ಇದ್ದರು. ವರದಿ : ಜಿಲಾನಸಾಬ್ ಬಡಿಗೇರ್

Leave a Reply

Your email address will not be published. Required fields are marked *