ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಾಲು, ಹಣ್ಣು, ಬ್ರೆಡ್ ವಿತರಣೆ….

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಾಲು, ಹಣ್ಣು, ಬ್ರೆಡ್ ವಿತರಣೆ….

ಬಳ್ಳಾರಿ / ಕಂಪ್ಲಿ : ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ನೀಡುವ ಸಾಲ ಸೌಲಭ್ಯದಿಂದ ಸಾಕಷ್ಟು ಕುಟುಂಬಗಳು ಆರ್ಥಿಕವಾಗಿ ಸಬಲರಾಗಿದ್ದಾರೆ. ಇಂತಹ ಯೋಜನೆಗಳನ್ನು ಬಡ ಹಾಗೂ ಮಧ್ಯಮ ವರ್ಗದ ಜನರ ಬದುಕು ನೆಮ್ಮದಿಯಿಂದ ಕೂಡಿದೆ ಎಂದು ಜನ ಜಾಗೃತಿ ವೇದಿಕೆ ಸದಸ್ಯ ಡಾ.ವೆಂಕಟೇಶ ಸಿ.ಭರಮಕ್ಕನವರ್ ಹೇಳಿದರು. ಪಟ್ಟಣದ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪೂಜ್ಯ ಡಾ.ಡಿ.ವಿರೇಂದ್ರ ಹೆಗ್ಗಡೆಯವರ 78ನೇ ಜನ್ಮದಿನದ ಅಂಗವಾಗಿ ಕಂಪ್ಲಿ ತಾಲೂಕು ಯೋಜನೆ ಬಿಸಿ ಟ್ರಸ್ಟ್ ನೇತೃತ್ವದಲ್ಲಿ ಮಂಗಳವಾರ ಒಳರೋಗಿಗಳಿಗೆ ಹಾಗೂ ಬಾಣಂತಿಯರಿಗೆ ಹಣ್ಣು, ಹಂಪಲು ವಿತರಿಸಿದ ನಂತರ ಮಾತನಾಡಿ, ಧರ್ಮಸ್ಥಳ ಸಂಸ್ಥೆಯ ಧರ್ಮಾಧಿಕಾರಿ ಪೂಜ್ಯ ಹೆಗ್ಗಡೆಯವರ ಕಾಳಜಿಯಿಂದಾಗಿ ರಾಜ್ಯದಲ್ಲಿ ಸಾಕಷ್ಟು ಕುಟುಂಬಗಳಿಗೆ ಸಾಲ ಸೌಲಭ್ಯಗಳನ್ನು ಒದಗಿಸಿ, ಹಾಗೂ ಇನ್ನಿತರ ಸಮಾಜ ಸೇವಾ ಕಾರ್ಯಗಳೊಂದಿಗೆ ಸೈ ಎನ್ನಿಸಿಕೊಂಡಿದೆ. ಈ ಯೋಜನೆಯಡಿಯಲ್ಲಿ ಸಾಕಷ್ಟು ಕುಟುಂಬಗಳಿಗೆ ಸಾಲದ ಮೂಲಕ ಸ್ವಾವಲಂಬನೆಯ ಜೀವನ ಕಟ್ಟಿಕೊಂಡಿದ್ದಾರೆ ಎಂದರು. ಈ ಸಂದರ್ಭದಲ್ಲಿ ಆಸ್ಪತ್ರೆಯ ವೈದ್ಯರಾದ ಡಾ.ಮಲ್ಲೇಶಪ್ಪ, ತಾಲೂಕು ಯೋಜನಾಧಿಕಾರಿ ರಾಘವೇಂದ್ರ, ಸಮನ್ವಯಾಧಿಕಾರಿ ರೇಖಾ, ಮೇಲ್ವಿಚಾರಕಿ ಮಂಜುಳಾ, ಮುಖಂಡರಾದ ಕೆ.ಎಂ.ಹೇಮಯ್ಯಸ್ವಾಮಿ, ಚನ್ನಯ್ಯಸ್ವಾಮಿ, ಶೇಕ್ಷಾವಲಿ ಸೇರಿದಂತೆ ಸಿಬ್ಬಂದಿ ಇದ್ದರು. ವರದಿ : ಜಿಲಾನಸಾಬ್ ಬಡಿಗೇರ್

Leave a Reply

Your email address will not be published. Required fields are marked *